ಮುಳ್ಳಯ್ಯನಗಿರಿ ಸಂರಕ್ಷಣೆಗೆ ಹೈಕೋರ್ಟ್ ಮಧ್ಯಪ್ರವೇಶ: ರಾಜ್ಯ, ಕೇಂದ್ರಕ್ಕೆ ನೋಟಿಸ್

Date:

ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಬೆಟ್ಟದ ಸಂಪೂರ್ಣ ವ್ಯಾಪ್ತಿಯನ್ನು ಸಂರಕ್ಷಿತ ಮೀಸಲು ಪ್ರದೇಶ (Conservation Reserve) ಎಂದು ಘೋಷಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

- Advertisement -

ಚಿಕ್ಕಮಗಳೂರಿನ ದಿ ಭದ್ರಾ ವನ್ಯಜೀವಿ ಸಂರಕ್ಷಣಾ ಟ್ರಸ್ಟ್‌ನ ಟ್ರಸ್ಟಿ ಹಾಗೂ ಪರಿಸರವಾದಿ ಡಿ.ವಿ. ಗಿರೀಶ್ ಮತ್ತು ವನ್ಯಜೀವಿ ಸಂರಕ್ಷಣಾ ಆ್ಯಕ್ಷನ್ ಟೀಮ್ನ ವ್ಯವಸ್ಥಾಪಕ ಟ್ರಸ್ಟಿ ಶ್ರೀದೇವ್ ಹುಲಿಕೆರೆ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರ್ಕಾರ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (PCCF), ಚಿಕ್ಕಮಗಳೂರು ಜಿಲ್ಲಾಧಿಕಾರಿ, ಕೇಂದ್ರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಿತು. ಅರ್ಜಿದಾರರ ಪರ ಹಿರಿಯ ವಕೀಲೆ ಜಯ್ನಾ ಕೊಠಾರಿ ವಾದ ಮಂಡಿಸಿದರು.

ಅರ್ಜಿಯಲ್ಲಿ, ವನ್ಯಜೀವಿ (ಸಂರಕ್ಷಣಾ) ಕಾಯ್ದೆ–1972ರ ಸೆಕ್ಷನ್ 36ಎ ಅನ್ವಯ ಮುಳ್ಳಯ್ಯನಗಿರಿ ಬೆಟ್ಟದ ಸುಮಾರು 14 ಸಾವಿರ ಎಕರೆ ಪ್ರದೇಶವನ್ನು ಸಂರಕ್ಷಿತ ಮೀಸಲು ಪ್ರದೇಶವೆಂದು ಘೋಷಿಸುವಂತೆ ಚಿಕ್ಕಮಗಳೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿಯು ರಾಜ್ಯ ಸರ್ಕಾರಕ್ಕೆ ಕರಡು ಪ್ರಸ್ತಾವನೆ ಸಲ್ಲಿಸಿದ್ದರೂ, ಈವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೆ, ಇದೀಗ ಸಂರಕ್ಷಿತ ಪ್ರದೇಶದ ವ್ಯಾಪ್ತಿಯನ್ನು 14 ಸಾವಿರ ಎಕರೆಯಿಂದ 10 ಸಾವಿರ ಎಕರೆಗೆ ಇಳಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆತಂಕವನ್ನೂ ಅರ್ಜಿದಾರರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕಾವೇರಿ ಕಿಚ್ಚು: ಮಂಡ್ಯದಲ್ಲಿ ತಮಿಳುನಾಡು ಸಿಎಂ ವಿಜಯ್ ನಟನೆಯ ‘ಜನ ನಾಯಕನ್’ ಚಿತ್ರ ಪ್ರದರ್ಶನ ಸ್ಥಗಿತ

ಮುಳ್ಳಯ್ಯನಗಿರಿ ಬೆಟ್ಟದ ಇಡೀ ಪ್ರದೇಶವನ್ನು ತಕ್ಷಣ ಸಂರಕ್ಷಿತ ಮೀಸಲು ಪ್ರದೇಶವೆಂದು ಘೋಷಿಸಬೇಕು, ಅದರ ನಿರ್ವಹಣೆಗೆ ಪ್ರತ್ಯೇಕ ವ್ಯವಸ್ಥಾಪನಾ ಸಮಿತಿಯನ್ನು ರಚಿಸಬೇಕು ಹಾಗೂ ಬೆಟ್ಟದ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳು ಮತ್ತು ಅವುಗಳಿಗೆ ನೀಡಲಾಗುತ್ತಿರುವ ಹಣಕಾಸಿನ ನೆರವನ್ನು ಕೂಡಲೇ ಸ್ಥಗಿತಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆ ಮುಚ್ಚುವುದು, ಖಾಸಗೀಕರಣ ಎರಡೂ ಅಪಾಯದ ಸೂಚನೆ; ಅವುಗಳನ್ನು ಉಳಿಸಿ, ಉನ್ನತೀಕರಿಸಬೇಕು! ಏಕೆಂದರೆ…

ಒಂದು ಸರ್ಕಾರಿ ಶಾಲೆ ಮುಚ್ಚಿದಾಗ ಆ ಪ್ರದೇಶದ ಮಕ್ಕಳಿಗೆ ಹತ್ತಿರದಲ್ಲೇ ದೊರೆಯುತ್ತಿದ್ದ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ ಮೂಲಭೂತ ಹಕ್ಕುಗಳ ಮೇಲೇಕೆ ತೂಗುಕತ್ತಿ?

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ...

ಬಡತನದ ಸವಾಲಿನಿಂದ ಗವರ್ನರ್ ಪೀಠದವರೆಗೆ: ಅಮೆರಿಕದಲ್ಲಿ ಮೂರು ಬಾರಿ ಇತಿಹಾಸ ಸೃಷ್ಟಿಸಿದ ಡೆಬ್ ಹಾಲಂಡ್

ಅಮೆರಿಕದ ರಾಜಕೀಯ ವ್ಯವಸ್ಥೆಯಲ್ಲಿ ವಂಚಿತ ಜನಾಂಗದ ಮಹಿಳೆಯೊಬ್ಬರು ಅತ್ಯುನ್ನತ ಸ್ಥಾನಕ್ಕೇರುವುದು ಸಾಮಾನ್ಯ...

ಈ ದಿನ ಸಂಪಾದಕೀಯ | ಬಡವರನ್ನು ಸುಟ್ಟ ಬೆಲೆಯೇರಿಕೆ ಬಿಸಿ ಸರ್ಕಾರಗಳನ್ನೂ ಸುಟ್ಟೀತು

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ನೀಡಿ, ಟಿಕೆಟ್‌ ದರ ಹೆಚ್ಚಿಸುವುದು ಪುರುಷರ...