ಹೈಕೋರ್ಟ್ ಆದೇಶಕ್ಕೂ ಕಿಮ್ಮತ್ತಿಲ್ಲ: ಸರ್ಕಾರಿ ಅಧ್ಯಾಪಕರ ವರ್ಗಾವಣೆಯಲ್ಲಿ ಭಾರೀ ಅವ್ಯವಹಾರದ ಆರೋಪ

Date:

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಧ್ಯಾಪಕರ ವರ್ಗಾವಣೆ ಪ್ರಕ್ರಿಯೆಯು ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಹೈಕೋರ್ಟ್ ಆದೇಶಗಳನ್ನು ಗಾಳಿಗೆ ತೂರಿ, ವರ್ಗಾವಣೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಕಾಲೇಜು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ವಿರುದ್ಧ ಅಧ್ಯಾಪಕರ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

- Advertisement -

ಹಿಂದಿನ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರ ಅವಧಿಯಲ್ಲಿ, ಹೈಕೋರ್ಟ್ ಆದೇಶಗಳಿಗೆ ಬದ್ಧವಾಗಿ ಪಾರದರ್ಶಕ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸಲಾಗಿತ್ತು. ಅಂದಿನ ಇಲಾಖಾ ಸುತ್ತೋಲೆಗಳ ಪ್ರಕಾರ ಸಂಬಂಧಿತ ಅಧ್ಯಾಪಕರನ್ನು ಪಟ್ಟಿಯಲ್ಲಿ ಸೇರಿಸಿ, ಕಾನೂನು ರಕ್ಷಣೆಗಾಗಿ ‘CAVEAT’ ಕೂಡ ಸಲ್ಲಿಸಲಾಗಿತ್ತು. ಆದರೆ, ಇತ್ತೀಚಿನ ಆಡಳಿತಾತ್ಮಕ ಬದಲಾವಣೆಗಳ ಬಳಿಕ ಈ ಪ್ರಕ್ರಿಯೆಯಲ್ಲಿ ನಿಗೂಢ ಬದಲಾವಣೆ ಮಾಡಲಾಗಿದೆ. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ನೃಪತುಂಗ ವಿಶ್ವವಿದ್ಯಾಲಯ ಮತ್ತು ಮಂಡ್ಯ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ಅಧ್ಯಾಪಕರನ್ನು ವರ್ಗಾವಣೆ ಪಟ್ಟಿಯಿಂದ ಏಕಾಏಕಿ ಹೊರಗಿಡಲಾಗಿದೆ. ಈ ನಿರ್ಧಾರಕ್ಕೆ ಯಾವ ಕಾನೂನು ಆಧಾರವಿದೆ ಎಂಬುದನ್ನು ಇಲಾಖೆ ಬಹಿರಂಗಪಡಿಸಬೇಕು ಎಂದು ಅಧ್ಯಾಪಕರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಹಾರಾಣಿ ಮತ್ತು ನೃಪತುಂಗ ವಿವಿ ಪ್ರಕರಣ: ವಿಶ್ವವಿದ್ಯಾಲಯಗಳ ಹುದ್ದೆ ವಿಲೀನ (Absorption) ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ, ಅಲ್ಲಿನ ಅಧ್ಯಾಪಕರು ಸರ್ಕಾರದ ನಿಯಮಗಳನ್ವಯ ನಿಯೋಜನೆ (Deputation) ಮೇಲಿರುವ ಅಧಿಕಾರಿಗಳೇ ಆಗಿರುತ್ತಾರೆ ಎಂದು ಈ ಹಿಂದೆ ನ್ಯಾಯಾಲಯದ ವಿಚಾರಣೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿತ್ತು. ಹೀಗಿದ್ದರೂ, ಇವರನ್ನು ವರ್ಗಾವಣೆ ಪ್ರಕ್ರಿಯೆಯಿಂದ ಹೊರಗಿಟ್ಟಿರುವುದು ಯಾವ ನಿಯಮದ ಅಡಿಯಲ್ಲಿ ಎಂಬುದನ್ನು ತಿಳಿಸಬೇಕು ಎಂದು ಅಧ್ಯಾಪಕರು ಇಲಾಖೆಯನ್ನು ಒತ್ತಾಯಿಸಿದ್ದಾರೆ.

‘A’ ಝೋನ್ ಹುದ್ದೆಗಳಲ್ಲಿ ಮ್ಯಾನಿಪ್ಯುಲೇಷನ್: ವರ್ಗಾವಣೆ ಪ್ರಕ್ರಿಯೆಯಲ್ಲಿ ‘A’ ಝೋನ್‌ನಲ್ಲಿದ್ದ 56 ಹುದ್ದೆಗಳನ್ನು ಪರಿಗಣಿಸದಿರುವುದು ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ವರ್ಗಾವಣೆ ಪಟ್ಟಿಯಲ್ಲಿ 56 ಮಂದಿಯ ಹೆಸರುಗಳಿದ್ದರೂ, ‘Opt in’ ಆದ 37 ಅಧ್ಯಾಪಕರನ್ನು ಕೈಬಿಟ್ಟು, ‘Opt out’ ಆದ ಕೇವಲ 19 ಮಂದಿಯನ್ನು ಮಾತ್ರ ಸೇರಿಸಲಾಗಿದೆ. ಸರ್ಕಾರದ ಅಧಿಕೃತ ಘೋಷಣೆ ಬರುವವರೆಗೆ ಇವರೆಲ್ಲರೂ ಕಾಲೇಜು ಶಿಕ್ಷಣ ಇಲಾಖೆಯ ಅಧ್ಯಾಪಕರೇ ಎಂಬ ಹೈಕೋರ್ಟ್ ನಿರ್ದೇಶನವನ್ನು ಅಧಿಕಾರಿಗಳು ನೇರವಾಗಿ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ: ಈ ಅಕ್ರಮದ ಹಿಂದೆ ಕಾಲೇಜು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಉಪ ಕಾರ್ಯದರ್ಶಿ ದಯಾನಂದ ಎಂ., ಆಯುಕ್ತ ಡಾ. ಗೋಪಾಲಕೃಷ್ಣ ಹೆಚ್.ಎನ್. ಮತ್ತು ಮುಖ್ಯ ಆಡಳಿತಾಧಿಕಾರಿ ಶೋಭಾ ಟಿ.ಆರ್. ಅವರ ಕೈವಾಡವಿದೆ ಎಂದು ಅಧ್ಯಾಪಕರು ನೇರ ಆರೋಪ ಮಾಡಿದ್ದಾರೆ. ಹಣ ಕೊಟ್ಟರೆ ನಿಯಮಗಳನ್ನು ಗಾಳಿಗೆ ತೂರುವ ಮುಕ್ತ ಸಂದೇಶವನ್ನು ಅಧಿಕಾರಿಗಳು ರವಾನಿಸುತ್ತಿದ್ದಾರೆ ಎಂದು ಶಿಕ್ಷಕರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಲ್ಲಿ ಬಿಹಾರ; ಇನ್ಮುಂದೆ ಗ್ರಾಮಗಳಲ್ಲೂ ವಸೂಲಾಗಲಿದೆ ‘ಹೋಲ್ಡಿಂಗ್ ಟ್ಯಾಕ್ಸ್’

ಮೂಲಗಳ ಪ್ರಕಾರ, ಕೆಜಿಸಿಟಿಎ (KGCTA) ಅಧ್ಯಕ್ಷ ಡಾ. ಟಿ.ಎಂ. ಮಂಜುನಾಥ್ ಅವರ ನಿವೃತ್ತಿಯ ಹೊಸ್ತಿಲಲ್ಲಿ, ಅವರ ಇಂಗಿತದಂತೆ ಅಧಿಕಾರಿಗಳು ಈ ತರಾತುರಿಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಅಧಿಕಾರಿಗಳ ಜೇಬು ತುಂಬಿಸುವ ಕೆಲಸವನ್ನು ಈ ವ್ಯಕ್ತಿ ನಿರ್ವಹಿಸುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಹೈಕೋರ್ಟ್ ಆದೇಶ ಪಾಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರಿಗೆ ಪದೇ ಪದೇ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಲಯಕ್ಕಿಂತ ಅಧಿಕಾರಿಗಳು ದೊಡ್ಡವರೇ ಎಂಬ ಪ್ರಶ್ನೆ ಕಾಡುತ್ತಿದೆ. ಕೂಡಲೇ ಈ ಭ್ರಷ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ, ಲೋಕಾಯುಕ್ತ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಅಧ್ಯಾಪಕರು ನಿರ್ಧರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...