ಯೂಟ್ಯೂಬರ್ ಸಮೀ‌ರ್‌ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ಆಜ್ಞೆ

Date:

ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣವನ್ನು ವಿಶ್ಲೇಷಿಸಿರುವ ಯೂಟ್ಯೂಬರ್ ಸಮೀ‌ರ್‌ ವಿರುದ್ಧ ಸಾಮಾಜಿಕ ಮಾಧ್ಯಮ ಯೂಟ್ಯೂಬ್‌ನಲ್ಲಿ ವಿಡಿಯೊ ಹಂಚಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಕೌಲ್ ಬಜಾರ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ಗೆ ಮಂಗಳವಾರ ಕರ್ನಾಟಕ ಹೈಕೋರ್ಟ್ ತಡೆ ಆಜ್ಞೆ ನೀಡಿದೆ.

- Advertisement -

ಸೌಜನ್ಯಾ ಕೊಲೆ ಪ್ರಕರಣವನ್ನು ವಿಶ್ಲೇಷಿಸಿ ಸಾಮಾಜಿಕ ಮಾಧ್ಯಮ ಯೂಟ್ಯೂಬ್‌ನಲ್ಲಿ ವಿಡಿಯೊ ಹಂಚಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಸಮೀರ್‌ ವಿರುದ್ಧ ‘ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)-2023ರ ಸೆಕ್ಷೆನ್ 299’ (ಧಾರ್ಮಿಕ ನಂಬಿಕೆಗಳು ಅಥವಾ ಆಚರಣೆಗಳನ್ನು ಉದ್ದೇಶಪೂರ್ವಕವಾಗಿ ಅಪಮಾನಿಸುವುದು) ಅಡಿಯಲ್ಲಿ ಬುಧವಾರ ಬಳ್ಳಾರಿ ಕೌಲ್ ಬಜಾರ್ ಠಾಣೆಯಲ್ಲಿ ಸಮೀರ್‌ ವಿರುದ್ಧ ಸ್ವಯಂ ಪ್ರೇರಿತವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

‘ದೂತ: ಸಮೀರ್ ಎಂಡಿ/ದೂತ’ ಎಂಬ ಯೂಟ್ಯೂಬ್ ಚಾನೆಲ್ ಮೂಲಕ ಹೊರಡಿಸಲಾದ ವಿಡಿಯೋದಿಂದ ಜನರು ಹೊಂದಿರುವ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ’ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.

ಸಮೀರ್‌ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಪ್ರಶ್ನಿಸಿ ಸಮೀರ್‌ ಪರ ವಕೀಲರು ಹೈಕೋರ್ಟ್‌ ಮೊರೆ ಹೋಗಿದ್ದರು. “ಒಂದೇ ಒಂದು ಶಬ್ದ ಯಾವುದೇ ಧರ್ಮದ ವಿರುದ್ಧ ಯೌಟ್ಯೂಬರ್ ಮಾತನಾಡದೆ ಇದ್ದರೂ ವಿನಾಕಾರಣ ಪ್ರಭಾವಕ್ಕೆ ಒಳಗಾಗಿ ಎಫ್‌ಐಆರ್‌ ದಾಖಲು ಮಾಡಿದ್ದು ತಪ್ಪು, ಅಲ್ಲಿ ಹೇಳಿರುವುದು ಧರ್ಮಸ್ಥಳ ಗ್ರಾಮದಲ್ಲಿ ಕಳೆದ ಅನೇಕ ವರ್ಷಗಳಿಂದ ನಡೆದ ಅನೇಕ ಸಾವು ನೋವುಗಳ ಕುರಿತು” ಎಂದು ಹಿರಿಯ ಹೈಕೋರ್ಟ್ ನ್ಯಾಯವಾದಿ ಕೆ ವಿ ಧನಂಜಯ ವಾದಿಸಿದರು.

ವಾದ ಆಲಿಸಿದ ಹೈಕೋರ್ಟ್‌ ಬಳ್ಳಾರಿ ಕೌಲ್ ಬಜಾರ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ಗೆ ಮಂಗಳವಾರ ಕರ್ನಾಟಕ ಹೈಕೋರ್ಟ್ ತಡೆ ಆಜ್ಞೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...