ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ | ಸಿಬಿಐ, ಯತ್ನಾಳ್ ಅರ್ಜಿ ವಜಾ; ಡಿಕೆಶಿಗೆ ರಿಲೀಫ್

Date:

Advertisements

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಸಿಬಿಐಗೆ ಈ ಹಿಂದಿನ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಎತ್ತಿಹಿಡಿದಿದೆ.

ಕಾಂಗ್ರೆಸ್ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ. ಆ ಮೂಲಕ ಡಿಸಿಎಂ ಡಿ ಕೆ ಶಿವಕುಮಾರ್‌ ಅವರಿಗೆ ಬಿಗ್ ರಿಲೀಫ್ ಲಭಿಸಿದೆ.

ಇದನ್ನು ಓದಿದ್ದೀರಾ? ಆ.31ರಂದು ರಾಜಭವನ ಚಲೋ : ಡಿಸಿಎಂ ಡಿ ಕೆ ಶಿವಕುಮಾರ್

Advertisements

ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಉಮೇಶ್‌ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠವು ಈ ಆದೇಶ ನೀಡಿದೆ.

ಬಿ ಎಸ್‌ ಯಡಿಯೂರಪ್ಪ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರವು ಡಿ ಕೆ ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಈ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಹಿಂಪಡೆದಿತ್ತು.

ಇದರ ವಿರುದ್ಧ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಅರ್ಜಿಗಳನ್ನು ಪರಿಗಣಿಸದ ಹೈಕೋರ್ಟ್‌, ವಜಾ ಮಾಡಿದೆ.

ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ಯತ್ನಾಳ್

ಡಿ ಕೆ ಶಿವಕುಮಾರ್ ವಿರುದ್ಧ ತಾನು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸುತ್ತಿದ್ದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾಗಿದ್ದಾರೆ. “ಘನ ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತಾ, ಸರ್ವೋಚ್ಚ ನ್ಯಾಯಾಲಯದಲ್ಲಿ ನಾವು ಇದನ್ನು ಪ್ರಶ್ನಿಸುತ್ತೇವೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ನಾವು ಕೊಂಡೊಯ್ಯುತ್ತೇವೆ” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಆಗಸ್ಟ್ 23ರಿಂದ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು...

ಬೀದರ್‌ | ಈ ತಾಂಡಾಕ್ಕೆ ದಾರಿ ಯಾವುದಯ್ಯಾ?

ʼನಾವು ಹುಟ್ಟಿನಿಂದ ಅಲ್ಲ, ಈ ತಾಂಡಾ ಹುಟ್ಟಿನಿಂದಲೂ ರಸ್ತೆಯೇ ಕಂಡಿಲ್ಲ. ಸ್ವಲ್ಪ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

Download Eedina App Android / iOS

X