ಶಾಸಕ ವೀರೇಂದ್ರ ಬಂಧನ ಕಾನೂನುಬಾಹಿರವೆಂದು ಘೋಷಿಸಲು ಹೈಕೋರ್ಟ್ ನಕಾರ; ಪತ್ನಿ ಅರ್ಜಿ ವಜಾ

Date:

ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣ ಸಂಬಂಧ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಲಿಯಾಸ್ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

- Advertisement -

ವೀರೇಂದ್ರ ಅವರ ಬಂಧನವನ್ನು ಕಾನೂನುಬಾಹಿರವೆಂದು ಘೋಷಿಸಿ, ತಕ್ಷಣವೇ ಬಿಡುಗಡೆಗೊಳಿಸಲು ಆದೇಶಿಸುವಂತೆ ಕೋರಿ ವೀರೇಂದ್ರ ಪತ್ನಿ ಆರ್.ಡಿ.ಚೈತ್ರಾ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

ಶಾಸಕ ಕೆ.ಸಿ.ವೀರೇಂದ್ರ ಬಂಧನವನ್ನು ಕಾನೂನುಬಾಹಿರವೆಂದು ಘೋಷಿಸಲು ನಿರಾಕರಿಸಿರುವ ಹೈಕೋರ್ಟ್, ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್) ಕಾಯ್ದೆಯ ಸೆಕ್ಷನ್ 2(1)(ಯು) ತಿದ್ದುಪಡಿ ಮಾಡಿರುವುದು ಜಾರಿ ನಿರ್ದೇಶನಾಲಯದ ನೆರವಿಗೆ ಬಂದಿದೆ. ಕನಕಪುರದ ಹಾರೋಹಳ್ಳಿ ಠಾಣೆಯಲ್ಲಿ ಬಾಕಿ ಇರುವ ಪ್ರಕರಣವನ್ನು ಆಧರಿಸಿ ಈಡಿ ತನಿಖೆ ಮುಂದುವರಿಯಲು ತಿದ್ದುಪಡಿ ಕಾಯ್ದೆ ಅವಕಾಶ ಕಲ್ಪಿಸುತ್ತದೆ ಎಂದು ಹೇಳಿದೆ.

ಹಾಲಿ ಅರ್ಜಿಯನ್ನು ವಜಾಗೊಳಿಸಿರುವುದು ಬೇರೆ ನ್ಯಾಯಾಲಯದಲ್ಲಿನ ವೀರೇಂದ್ರ ಅವರ ಜಾಮೀನು ಅರ್ಜಿ ಮತ್ತಿತರ ಅರ್ಜಿಗಳ ವಿಚಾರಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹಾರೋಹಳ್ಳಿ ಪ್ರಕರಣದಲ್ಲಿ ಪೊಲೀಸರು ಹಾಕಿರುವ ಬಿ ವರದಿಯನ್ನು ಸಕ್ಷಮ ನ್ಯಾಯಾಲಯ ಅಂಗೀಕರಿಸಿದರೆ, ವೀರೇಂದ್ರ ಅವರ ಬಂಧನ ಆದೇಶವನ್ನು ಮತ್ತೊಮ್ಮೆ ಪ್ರಶ್ನಿಸುವ ಸ್ವಾತಂತ್ರ್ಯ ಹೊಂದಲಿದ್ದಾರೆ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...