ಮುಡಾ ಪ್ರಕರಣ ಸಿಬಿಐ ತನಿಖೆಗೆ ಮನವಿ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಧಾರವಾಡ ಹೈಕೋರ್ಟ್ ಪೀಠ ತೀರ್ಪು ಕಾಯ್ದಿರಿಸಿದೆ.

- Advertisement -

ನ್ಯಾ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ಬೆಳಗ್ಗೆಯಿಂದಲೇ, ಸತತ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿ, ತೀರ್ಪು ಕಾಯ್ದಿರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಿಎಂ ವಿರುದ್ಧ ದಾವೆ ಹೂಡಿರುವ ಸ್ನೇಹಮಯಿ ಕೃಷ್ಣ ಪರವಾಗಿ ಮಣೀಂದರ ಸಿಂಗ್, ಸಿಎಂ ಸಿದ್ದರಾಮಯ್ಯ ಪರವಾಗಿ ಅಭಿಷೇಕ ಮನು ಸಿಂಗ್ವಿ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಪರ ಪ್ರೊ.ರವಿವರ್ಮಕುಮಾರ್, ದೇವರಾಜ ಪರ ದುಷ್ಯಂತ ದವೆ, ರಾಜ್ಯ ಸರಕಾರದ ಪರ ಕಪಿಲ್ ಸಿಬಲ್ ವಾದ ಮಂಡಿಸಿದರು.

ಇದನ್ನೂ ಓದಿರಿ: ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?

ವಿಚಾರಣೆ ಮುಕ್ತಾಯದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸ್ನೇಹ ಮಯಿ ಕೃಷ್ಣ, ‘ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರು ಮಾಡಿರುವ ತಪ್ಪಿಗೆ ಸರಿಯಾದ ಶಿಕ್ಷೆ ಆಗಬೇಕಿದೆ. ಅವರು‌ ಲೋಕಾಯುಕ್ತ ಅಧಿಕಾರಿಗಳ ಮೇಲೆ ಪ್ರಭಾವ ಬೀರುವುದರಿಂದ ನಿಷ್ಪಕ್ಷಪಾತವಾದ ತನಿಖೆ ಅಸಾಧ್ಯ’ ಎಂದು ತಿಳಿಸಿದರು.

‘ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಸಂಬಳ ತಿಂದು ಪ್ರಭಾವಿ ರಾಜಕಾರಣಿಗಳ ಪರ ಕೆಲಸ ಮಾಡುತ್ತಿದ್ದಾರೆ. ಇದರ ವಿರುದ್ದ ಕೂಡ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇನೆ. ಇದು ದೇಶ ದ್ರೋಹದ ಕೆಲಸವಾಗಿದೆ. ಇದನ್ನು ರಾಜ್ಯದ ಜನರು ತಿಳಿಯಬೇಕು. ನ್ಯಾಯಾಲಯ ಈ ಪ್ರಕರಣವನ್ನು ಖಂಡಿತವಾಗಿಯೂ ಸಿಬಿಐಗೆ ನೀಡುವ ಭರವಸೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....