ಮೇ 20ರಂದು ನಡೆಯಬೇಕಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ

Date:

ಮೇ 20ರಂದು (ನಾಳೆ) ನಡೆಯಲಿದ್ದ ರಾಜ್ಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ. ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಸೂಚಿಸಿದೆ. ಮುಷ್ಕರ ಕೈಬಿಟ್ಟು, ಸರ್ಕಾರ ಮತ್ತು ಸಾರಿಗೆ ಸಂಘಟನೆಗಳು ಮಾತುಕತೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಹೈಕೋರ್ಟ್ ತಿಳಿಸಿದೆ.

- Advertisement -

ಶೇಕಡಾ 25ರಷ್ಟು ವೇತನ ಪರಿಷ್ಕರಣೆ ಮತ್ತು ಬಾಕಿ ಮೊತ್ತದ (ಹಿಂಬಾಕಿ) ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯೂಕೆಆರ್‌ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ನೌಕರರನ್ನು ಒಳಗೊಂಡ ಕಾರ್ಮಿಕ ಸಂಘಗಳ ಜಂಟಿ ಕ್ರಿಯಾ ಸಮಿತಿ (ಜೆಎಸಿ) ಮುಷ್ಕರಕ್ಕೆ ಕರೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? BIG UPDATE | ಸಾರಿಗೆ ನೌಕರರ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ₹450 ಕೋಟಿ ಬಿಡುಗಡೆ

ಈ ಮುಷ್ಕರವನ್ನು ತಡೆಯುವಂತೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರಜ್ ಗೋವಿಂದರಾಜ್ ಮತ್ತು ಕೆ. ಮನ್ಮಧ ರಾವ್ ಅವರ ರಜಾ ಪೀಠವು ಮುಷ್ಕರಕ್ಕೆ ತಡೆ ನೀಡಿದೆ.

ದೀರ್ಘಕಾಲದಿಂದ ಬಾಕಿಯಿದ್ದ ಸಾರಿಗೆ ನೌಕರರ 26 ತಿಂಗಳ ವೇತನ ಹಿಂಬಾಕಿಗೆ 450 ಕೋಟಿ ರೂಪಾಯಿ ಹಣವನ್ನು ಇತ್ತೀಚೆಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿತ್ತು. ಸಾರಿಗೆ ನೌಕರರ ವೇತನ ಹಿಂಬಾಕಿಗೆ ಪಾವತಿಗೆ ಒಟ್ಟು 1,271.92 ಕೋಟಿ ರೂ. ಬಿಡುಗಡೆ ಮಾಡಬೇಕಿತ್ತು. ಆದರೆ ಸದ್ಯ ಮೊದಲ ಹಂತವಾಗಿ ₹450 ಕೋಟಿ ಬಿಡುಗಡೆ ಮಾಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...