ನೀವು ಇತಿಹಾಸಕಾರರೇ, ಭಾಷಾತಜ್ಞರೇ: ಕಮಲ್ ಹಾಸನ್‌ಗೆ ಹೈಕೋರ್ಟ್ ತರಾಟೆ

Date:

“ಕನ್ನಡಿಗರ ಭಾವನೆಗಳಿಗೆ ಹಾನಿ ಮಾಡಿ, ಈಗ ಕ್ಷಮೆ ಕೇಳುವುದಿಲ್ಲ ಎಂದರೆ ಹೇಗೆ? ವಾಕ್‌ ಸ್ವಾತಂತ್ರ್ಯ ಎಂದರೆ ಬೇರೆಯವರ ಭಾವನೆಗಳಿಗೆ ಹಾನಿ ಮಾಡುವುದಲ್ಲ” ಎಂದು ಕರ್ನಾಟಕ ಹೈಕೋರ್ಟ್ ತಮಿಳು ನಟ ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

- Advertisement -

ಕನ್ನಡ ತಮಿಳಿನಿಂದ ಹುಟ್ಟಿದೆ ಎಂದು ಹೇಳಿಕೆ ನೀಡಿದ ತಮಿಳು ನಟ ಕಮಲ್ ಹಾಸನ್ ಕ್ಷಮೆಯಾಚಿಸುವಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿದೆ. ಕ್ಷಮೆ ಕೇಳದಿದ್ದರೆ ಕಮಲ್ ಹಾಸನ್ ಸಿನಿಮಾವನ್ನು ಬಹಿಷ್ಕರಿಸಲಾಗುವುದು ಎಂದು ಚಿತ್ರರಂಗ ಹೇಳಿದೆ. ಈ ಎಲ್ಲಾ ಬೆಳವಣಿಗೆ ನಡುವೆ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಸಿನಿಮಾ ತಂಡವು ಕರ್ನಾಟಕ ಹೈಕೋರ್ಟ್ ಮೊರೆಹೋಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್ ಚಿತ್ರ ತಂಡ

ಕಮಲ್‌ ಹಾಸನ್‌ ನಟಿಸಿರುವ ಥಗ್‌ ಲೈಫ್‌ ಸಿನಿಮಾ ಹಂಚಿಕೆ ಮತ್ತು ಬಿಡುಗಡೆಗೆ ಅಗತ್ಯ ಬಂದೋಬಸ್ತ್‌ ಒದಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು, “ಸಾಕಷ್ಟು ಕೋಟಿ ಬಂಡವಾಳ ಹಾಕಿದ್ದೀರಿ ಎಂದು ಹೇಳಿದ್ದೀರಿ. ಪರವಾಗಿಲ್ಲ, ಕ್ಷಮೆ ಕೇಳಲು ಕಮಲ್‌ ಹಾಸನ್‌ಗೆ ಹೇಳಿ” ಎಂದು ಸೂಚಿಸಿದೆ.

ಕಮಲ್‌ ಹಾಸನ್‌ ಪರ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ವಾದಿಸಿದ್ದು, “ತಮಿಳಿನಿಂದ ಕನ್ನಡ ಉದಯಿಸಿದೆ ಎಂದು ಕಮಲ್‌ ಹಾಸನ್‌ ಹೇಳಿದ್ದರು. ಆ ಹೇಳಿಕೆ ಇಟ್ಟುಕೊಂಡು ಕಮಲ್‌ ಹಾಸನ್‌ ಅವರು ನಟಿಸಿರುವ ಥಗ್‌ ಲೈಫ್‌ ಸಿನಿಮಾಗೆ ನಿರ್ಬಂಧ ವಿಧಿಸಲಾಗಿದೆ. ನಮಗೆ ರಕ್ಷಣೆ ನೀಡಬೇಕು” ಎಂದು ಕೋರಿದರು.

“ತಮಿಳಿನಿಂದ ಕನ್ನಡ ಜನಿಸಿದೆ ಎಂದು ಹೇಳಲು ಕಮಲ್‌ ಹಾಸನ್‌ ಅವರು ಭಾಷಾತಜ್ಞರೇ? ಕ್ಷಮೆ ಕೇಳಿದ್ದರೆ ಎಲ್ಲವೂ ಮುಗಿಯುತ್ತಿತ್ತಲ್ಲವೇ? ಆ ಹೇಳಿಕೆ ನೀಡುವ ಅಗತ್ಯವೇನಿತ್ತು? ಇತಿಹಾಸ ಗೊತ್ತಿಲ್ಲದೇ ಆ ಹೇಳಿಕೆ ನೀಡಿದ್ದೇನೆ ಎಂದು ಕ್ಷಮೆ ಕೇಳಿದ್ದರೆ ಮುಗಿಯುತ್ತಿತ್ತಲ್ಲವೇ? ನೀವೇ ಸೃಷ್ಟಿ ಮಾಡಿರುವ ಸಮಸ್ಯೆಗೆ ಪೊಲೀಸರ ರಕ್ಷಣೆ ಕೋರುತ್ತಿದ್ದೀರಾ” ಎಂದು ಪೀಠ ಪ್ರಶ್ನಿಸಿದೆ.

ಇನ್ನು ವಿಡಿಯೋ ಪರಿಶೀಲಿಸಿದ ನ್ಯಾಯಮೂರ್ತಿಗಳು, “ಯಾರ ಭಾವನೆಯನ್ನೂ ತಮ್ಮ ಮನಸೋಇಚ್ಛೆ ನೋಯಿಸಲು ಬಿಡಲಾಗದು. ಹಲವು ಕೋಟಿ ನಷ್ಟವಾಗುತ್ತದೆ ಎನ್ನುವುದಾದರೆ, ನಿಮಗೆ ಕರ್ನಾಟಕ ಏತಕ್ಕೆ ಬೇಕು. ಅದನ್ನು ಬಿಡಿ. ನೀವು ಇತಿಹಾಸಕಾರರೇನಲ್ಲ ಎಂದ ಮೇಲೆ ಕ್ಷಮೆ ಕೋರಲು ಹೇಳಿ. ಆಡಿದ ಮಾತುಗಳು ಬರುವುದಿಲ್ಲ. ಕ್ಷಮೆ ಕೋರುವುದರ ಮೂಲಕ ಅವುಗಳಿಗೆ ಇತಿಶ್ರೀ ಹಾಡಬೇಕು” ಎಂದರು.

“ಅಶಾಂತಿ ಸೃಷ್ಟಿಯಾಗುವುದರ ಬಗ್ಗೆ ಸಮಾಜದಲ್ಲಿ ಖ್ಯಾತಿ ಹೊಂದಿರುವ ವ್ಯಕ್ತಿಯಾದ ಕಮಲ್‌ ಹಾಸನ್‌ ಅವರಿಗೆ ತಿಳಿದಿರಬೇಕು. ಇದನ್ನು ಸೃಷ್ಟಿಸುವುದು ಅವರೇ. ಅದಕ್ಕೆ ಮುಕ್ತಿ ಹಾಡಬೇಕಿರುವುದು ಅವರೇ. ಕ್ಷಮೆ ಕೋರಿದ್ದರೆ ಎಲ್ಲವೂ ಮುಗಿಯುತ್ತಿತ್ತು” ಎಂದು ಪೀಠ ಹೇಳಿದೆ. ಹಾಗೆಯೇ ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...