ಐಎಎಸ್ ಅಧಿಕಾರಿ ಫೌಜಿಯಾರನ್ನು ‘ಪಾಕಿಸ್ತಾನಿ’ ಎಂದಿದ್ದ ಬಿಜೆಪಿಯ ರವಿಕುಮಾರ್‌ಗೆ ಹೈಕೋರ್ಟ್ ತರಾಟೆ

Date:

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಕಲಬುರಗಿ ಜಿಲ್ಲಾಧಿಕಾರಿ, ಐಎಎಸ್‌ ಅಧಿಕಾರಿ ಫೌಜಿಯಾ ತರನ್ನುಮ್‌ ಅವರ ವಿರುದ್ಧ ವಿವಾದಾತ್ಮಕ, ಕೋಮುದ್ವೇಷದ ಹೇಳಿಕೆ ನೀಡಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ (MLC) ಎನ್‌. ರವಿಕುಮಾರ್‌ ಅವರಿಗೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

- Advertisement -

ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿದ್ದ ಎನ್. ರವಿಕುಮಾರ್ ಅವರು, ಐಎಎಸ್ ಅಧಿಕಾರಿ ಫೌಜಿಯಾ ತರನ್ನುಮ್ ಅವರು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದು ಪ್ರಶ್ನಿಸುವ ಮೂಲಕ ಮುಸ್ಲಿ ವಿರೋಧಿ ಹೇಳಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಇದನ್ನೂ ಓದಿ: ಈ ದಿನ ಸಂಪಾದಕೀಯ | ಭಾರತ ಮಾತೆಯನ್ನು ಪೂಜಿಸುವ ಬಿಜೆಪಿಯವರು ʼಮಾತೆʼಯರನ್ನು ಗೌರವಿಸುವುದು ಯಾವಾಗ?

ಈ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ರವಿಕುಮಾರ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠವು, ನಾಗರಿಕ ಸೇವೆಯಲ್ಲಿರುವ ಕರ್ತವ್ಯನಿರತ ಅಧಿಕಾರಿಯ ವಿರುದ್ಧ ಈ ರೀತಿಯ ಕೋಮುಪ್ರಚೋದಕ ಹಾಗೂ ಅವಹೇಳನಕಾರಿ ಹೇಳಿಕೆ ನೀಡುವುದನ್ನು ಸಹಿಸಲಾಗದು ಎಂದು ಕಟುವಾಗಿ ಹೇಳಿದ್ದಾರೆ.

“ಇದು ಅತಿಯಾಯಿತು, ಇದನ್ನು ಕ್ಷಮಿಸಲಾಗದು. ನಾಲಗೆಯ ಮೇಲೆ ಎಚ್ಚರಿಕೆ ಇರಲಿ” ಎಂದು ನ್ಯಾಯಾಲಯ ಅರ್ಜಿದಾರರಿಗೆ ಎಚ್ಚರಿಕೆ ನೀಡಿದೆ.

“ಐಎಎಸ್‌ ಅಧಿಕಾರಿ ಫೌಜಿಯಾ ಅವರು ಮುಸ್ಲಿಮ್‌ ಎಂಬ ಕಾರಣಕ್ಕೆ ಹಾಗೆ ಹೇಳಿರುವುದನ್ನು ಒಪ್ಪಲಾಗದು. ಕಳೆದ ವಿಚಾರಣೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ” ಎಂದೂ ನ್ಯಾಯಮೂರ್ತಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...

ಜಾಮೀನಿನ ಮೇಲೆ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ವೀಡಿಯೋ ಲೀಕ್ ಮಾಡಿದ ದುಷ್ಕರ್ಮಿ: ಶೀಘ್ರ ಬಂಧನಕ್ಕೆ ಒತ್ತಾಯ

ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿಯೊಬ್ಬ, ಸಂತ್ರಸ್ತೆಯ ಖಾಸಗಿ...