ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿರುವ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದಂತೆ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ನಡೆಗೆ ಹೈಕೋರ್ಟ್ ಕೆಂಡಾಮಂಡಲವಾಗಿದೆ.
ಕಸಾಪದಲ್ಲಿ ನಡೆದಿರುವ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣಾಧಿಕಾರಿ ನೇಮಕ ಮಾಡಿರುವ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಮಧ್ಯಂತರ ಆದೇಶದ ವಿರುದ್ಧ ಮಹೇಶ್ ಜೋಶಿ ತಡೆ ಕೋರಿ ಮೇಲ್ಮನವಿ ಸಲ್ಲಿಸಿದ್ದರು.
ಮಹೇಶ್ ಜೋಶಿ ರಿಟ್ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠವು ಜೋಶಿ ಮನವಿಗೆ ಗರಂ ಆಗಿದ್ದು, ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. “ನೀವು ಸಲ್ಲಿಸಿರುವ ಮೇಲ್ಮನವಿಗೆ ದಂಡ ಹಾಕಿಲ್ಲವಲ್ಲ ಎಂದು ಸಮಾಧಾನಪಡಿ” ಎಂದು ಇದೇ ವೇಳೆ ಪೀಠ ಎಚ್ಚರಿಸಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು-ವೆಚ್ಚಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ದೂರುಗಳನ್ನು ಆಧರಿಸಿ ವಿಚಾರಣೆ ನಡೆಸಲು; ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಸಂಘಗಳ ನೋಂದಣಾಧಿಕಾರಿ 2ನೇ ವಲಯ ಬೆಂಗಳೂರು ನಗರ ಜಿಲ್ಲಾ ಇವರು ಸ್ವಪ್ರೇರಣೆಯಿಂದ ಆದೇಶವೊಂದನ್ನು ಹೊರಡಿಸಿ ವಿಚಾರಣಾ ಅಧಿಕಾರಿ ನೇಮಕ ಮಾಡಿದ್ದರು.
ಕಸಾಪ ಅವ್ಯವಹಾರ ಆರೋಪ: ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕೆರಳಿದ ಹೈಕೋರ್ಟ್, ಮೇಲ್ಮನವಿ ವಜಾ #KarnatakaHighCourt #ಕನ್ನಡಸಾಹಿತ್ಯಪರಿಷತ್ತು #maheshjoshi https://t.co/BOazjG422T
— ಬಾರ್ & ಬೆಂಚ್ – Kannada Bar & Bench (@Kbarandbench) September 10, 2025