56% ಮೀಸಲಾತಿಗೆ ಹೈಕೋರ್ಟ್ ತಡೆ: ಶೋಷಿತರ ಸಾಮಾಜಿಕ ನ್ಯಾಯಕ್ಕಾಗಿ ರಾಜ್ಯಮಟ್ಟದ ಬೃಹತ್ ಹಕ್ಕೊತ್ತಾಯ ಸಭೆ

Date:

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು ಹೆಚ್ಚಿಸುವ ಮೂಲಕ ಒಟ್ಟು ಮೀಸಲಾತಿಯನ್ನು ಶೇ. 50 ರಿಂದ ಶೇ. 56 ಕ್ಕೆ ಏರಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಸಂವಿಧಾನಬಾಹಿರ ಎಂದು ರದ್ದುಗೊಳಿಸಿದೆ. ನ್ಯಾಯಾಲಯದ ಈ ತೀರ್ಪು ಶೋಷಿತ ಸಮುದಾಯಗಳ ದೀರ್ಘಕಾಲದ ಸಾಮಾಜಿಕ ನ್ಯಾಯದ ಹೋರಾಟಕ್ಕೆ ಬಹುದೊಡ್ಡ ಹಿನ್ನಡೆಯನ್ನುಂಟು ಮಾಡಿದ್ದು, ಶೋಷಿತ ಸಮುದಾಯಗಳ ಸಾಮಾಜಿಕ ನ್ಯಾಯಕ್ಕಾಗಿ ನ.5 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಹಕ್ಕೊತ್ತಾಯ ಸಭೆ ನಡೆಯಲಿದೆ.

- Advertisement -

ಜಾಗೃತ ಕರ್ನಾಟಕ, ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ, ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡ ಸಂಘಟನೆಗಳ ಒಕ್ಕೂಟ, ಹಿಂದುಳಿದ ವರ್ಗಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಈ ಸಭೆಯನ್ನು ಆಯೋಜಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ರಾಜಧಾನಿಯಲ್ಲಿ ಖಾಕಿ-ಕರಿ ಕೋಟ್ ಸಮರ; ಒಳಗಿನ ಹುಳುಕನ್ನು ಬೀದಿಗೆ...

ಒಂದು ಸಣ್ಣ ಪಾರ್ಕಿಂಗ್ ವಿವಾದದಿಂದ ಆರಂಭವಾದ ಈ ಜಗಳ, ಪೊಲೀಸ್ ಠಾಣೆಯೊಳಗೇ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿ, ಅಂತಿಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಮತ್ತು ವರ್ಗಾವಣೆಯಲ್ಲಿ ಅಂತ್ಯಗೊಂಡಿದೆ. ಈ ಹೊತ್ತಿನಲ್ಲಿ ಈ...

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸುವ ಮೂಲಕ ಒಟ್ಟು ಮೀಸಲಾತಿ ಪ್ರಮಾಣ ಶೇ.56ಕ್ಕೆ ತಲುಪಿತ್ತು. ಆದರೆ, ಈ ಹೆಚ್ಚಳವನ್ನು ನ್ಯಾಯಾಲಯ ತಡೆದಿರುವುದರಿಂದ ಸಮುದಾಯಗಳ ದೀರ್ಘಕಾಲದ ಬೇಡಿಕೆಗಳು ಮತ್ತೆ ಅನಿಶ್ಚಿತತೆಗೆ ಸಿಲುಕಿವೆ ಎಂದಿದೆ.

ಇದನ್ನೂ ಓದಿ: ಒಳಮೀಸಲಾತಿ: ನೇಮಕಾತಿ ಆದೇಶಕ್ಕೆ ಹೈಕೋರ್ಟ್ ತಡೆ

ಮೀಸಲಾತಿ ವಿಚಾರದಲ್ಲಿ ಅನುಸರಿಸಲಾಗುತ್ತಿರುವ ವಿಭಿನ್ನ ಮಾನದಂಡಗಳ ಬಗ್ಗೆ ಈಗ ಗಂಭೀರವಾಗಿ ಪ್ರಶ್ನಿಸಬೇಕಾದ ಅಗತ್ಯವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳದ ಸಂದರ್ಭದಲ್ಲಿ ಶೇ.50ರ ಮಿತಿಯನ್ನು ಮುಂದಿಡಲಾಗುತ್ತದೆ. ಆದರೆ, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (EWS) ಶೇ.10ರಷ್ಟು ಪ್ರತ್ಯೇಕ ಮೀಸಲಾತಿ ಕಲ್ಪಿಸುವಾಗ ಅದಕ್ಕೆ ಸಂವಿಧಾನದ ಪ್ರತ್ಯೇಕ ಅವಕಾಶವನ್ನು ಬಳಸಲಾಗಿದೆ. ಈ ವಿಭಿನ್ನ ಮಾನದಂಡಗಳು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಯಾವ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ ಎಂಬುದರ ಕುರಿತು ಮುಕ್ತ ಚರ್ಚೆ ನಡೆಯಬೇಕಿದೆ ಎಂದು ತಿಳಿಸಿದೆ.

ಮೀಸಲಾತಿ ಎನ್ನುವುದು ಬಡತನ ನಿವಾರಣೆಯ ಕಾರ್ಯಕ್ರಮ ಮಾತ್ರವಲ್ಲ. ಶತಮಾನಗಳಿಂದ ಜಾತಿ ಆಧಾರಿತ ಶೋಷಣೆ, ತಾರತಮ್ಯ ಮತ್ತು ಅವಕಾಶ ವಂಚನೆಗೆ ಒಳಗಾದ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗ, ಆಡಳಿತ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸಮಾನ ಅವಕಾಶ ಹಾಗೂ ಸಮರ್ಪಕ ಪ್ರಾತಿನಿಧ್ಯ ಕಲ್ಪಿಸುವ ಸಂವಿಧಾನಾತ್ಮಕ ವ್ಯವಸ್ಥೆಯಾಗಿದೆ. ಹೀಗಾಗಿ ಮೀಸಲಾತಿಯ ಪ್ರಶ್ನೆಯನ್ನು ಕೇವಲ ಶೇಕಡಾವಾರು ಲೆಕ್ಕಾಚಾರಕ್ಕೆ ಸೀಮಿತಗೊಳಿಸದೆ, ಸಾಮಾಜಿಕ ಹಿಂದುಳಿದಿರುವಿಕೆ, ಜನಸಂಖ್ಯೆ, ಪ್ರಾತಿನಿಧ್ಯದ ಕೊರತೆ ಮತ್ತು ಐತಿಹಾಸಿಕ ಅನ್ಯಾಯದ ಹಿನ್ನೆಲೆಯಲ್ಲಿ ಪರಿಗಣಿಸಬೇಕಾಗಿದೆ ಎಂದು ಹೇಳಿದೆ.

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ನ್ಯಾಯಯುತ ಪ್ರಾತಿನಿಧ್ಯ ದೊರೆಯಬೇಕಾದರೆ ಮುಂದಿನ ಹೋರಾಟದ ದಾರಿ ಯಾವುದು? ಶೇ.50ರ ಮೀಸಲಾತಿ ಮಿತಿಯ ಕುರಿತು ಸಂವಿಧಾನಾತ್ಮಕ ಮತ್ತು ಕಾನೂನಾತ್ಮಕ ಪರಿಹಾರಗಳೇನು? ಶೋಷಿತ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳೇನು? ಎಂಬ ಮಹತ್ವದ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಈ ಹಕ್ಕೊತ್ತಾಯ ಸಭೆಯನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: ಅಲೆಮಾರಿಗಳ ಬದುಕಿಗೆ ಬೇಕಿದೆ ‘ವಿಶೇಷ ಪ್ಯಾಕೇಜ್’: ಪ್ರತ್ಯೇಕ ನಿಗಮ, ಒಳಮೀಸಲಾತಿ, ಭೂಒಡೆತನಕ್ಕೆ ಸರ್ಕಾರದ ಮುಂದೆ ಹಕ್ಕೊತ್ತಾಯ

“SC-ST-OBC-ಅಲ್ಪಸಂಖ್ಯಾತ ಸಮುದಾಯಗಳಿಗೆ ಪೂರ್ಣ ನ್ಯಾಯಕ್ಕಿರುವ ಮಾರ್ಗಗಳೇನು?” ಎಂಬ ವಿಷಯದ ಕುರಿತು ನಡೆಯುವ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು ದಿಕ್ಸೂಚಿ ಮಾತುಗಳನ್ನಾಡಲಿದ್ದಾರೆ. ವಿವಿಧ ಸಮುದಾಯಗಳ ಮುಖಂಡರು, ಸಾಮಾಜಿಕ ನ್ಯಾಯದ ಪರ ಹೋರಾಟಗಾರರು ಮತ್ತು ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಮೀಸಲಾತಿ ಹಕ್ಕುಗಳ ರಕ್ಷಣೆ ಯಾವುದೋ ಒಂದು ಸಮುದಾಯದ ಪ್ರಶ್ನೆಯಲ್ಲ; ಅದು ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಎಲ್ಲರ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಶೋಷಿತ ಸಮುದಾಯಗಳ ಮುಖಂಡರು, ಪ್ರಗತಿಪರ ಸಂಘಟನೆಗಳು, ಹೋರಾಟಗಾರರು ಮತ್ತು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರುವ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮುಂದಿನ ಹೋರಾಟದ ದಿಕ್ಕು ಮತ್ತು ಕಾರ್ಯತಂತ್ರ ರೂಪಿಸಲು ಕೈಜೋಡಿಸಬೇಕಿದೆ.

ಸಭೆಯ ವಿವರಗಳು

  • ದಿನಾಂಕ: 05 ನವೆಂಬರ್ 2026, ಗುರುವಾರ
  • ಸಮಯ: ಮಧ್ಯಾಹ್ನ 3 ಗಂಟೆ
  • ಸ್ಥಳ: ಶಾಸಕರ ಭವನ, ಬೆಂಗಳೂರು
  • ಚರ್ಚೆಯ ವಿಷಯ: SC-ST-OBC-ಅಲ್ಪಸಂಖ್ಯಾತ ಸಮುದಾಯಗಳಿಗೆ ಪೂರ್ಣ ನ್ಯಾಯಕ್ಕಿರುವ ಮಾರ್ಗಗಳೇನು?
  • ದಿಕ್ಸೂಚಿ ಮಾತು: ನ್ಯಾಯಮೂರ್ತಿ ನಾಗಮೋಹನ ದಾಸ್
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಿನ್ನತೆ-ವಿಚ್ಛೇದನ ತಡೆಗೆ, ವೈವಾಹಿಕ ಜೀವನದ ಯಶಸ್ಸಿಗೆ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಿದ ಗೋವಾ ಕಾಲೇಜು

ಉದ್ಯೋಗ ಅಥವಾ ವೃತ್ತಿಪರ ಜೀವನ ರೂಪಿಸಿಕೊಳ್ಳಲು ವರ್ಷಗಟ್ಟಲೆ ಶಿಕ್ಷಣ ಪಡೆಯುವ ನಾವು,...

ರಾಜ್ಯದ ಜನರಿಗೆ ಬಿಗ್ ಶಾಕ್: KSRTC, BMTC ಪ್ರಯಾಣ ದರ 23% ಮತ್ತು 35% ದಿಢೀರ್ ಏರಿಕೆ!

ರಾಜ್ಯದಲ್ಲಿನ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರವನ್ನು ರಾಜ್ಯ ಸರ್ಕಾರವು...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು; ಭಾರತೀಯ ವಲಸಿಗರ ರಾಜಕೀಯ ಆಷಾಢಭೂತಿತನ!

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ...

ಶಿವಮೊಗ್ಗ | ಪೋಷಕರಾಗಲು ಅಡ್ಡದಾರಿಯಲ್ಲ; ಕಾನೂನು ಬದ್ಧ ದತ್ತು ಸ್ವೀಕಾರವೇ ಸರಿಯಾದ ಮಾರ್ಗ

ಮಕ್ಕಳ ಮಾರಾಟವು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಯಾವುದೇ ಅನಧಿಕೃತವಾಗಿ ಮಗುವನ್ನು ನೀಡುವುದು...