ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳಿಗೆ ಆರ್‌ಟಿಇ ಶಿಕ್ಷಣ ವಿಸ್ತರಣೆ: ಸರ್ಕಾರದ ಸುತ್ತೋಲೆಗೆ ಹೈಕೋರ್ಟ್ ತಡೆ

Date:

ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆಯಡಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ವಿದ್ಯಾರ್ಥಿಗಳಿಗೆ 9 ಹಾಗೂ 10ನೇ ತರಗತಿಯವರೆಗೂ ಅದೇ ಶಾಲೆಯಲ್ಲಿ ಉಚಿತ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸಿ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ್ದ ಸುತ್ತೋಲೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

- Advertisement -

ಖಾಸಗಿ ಅನುದಾನರಹಿತ ಇಂಗ್ಲಿಷ್ ಮಾಧ್ಯಮ ಶಾಲೆಗಳ ಪ್ರತಿನಿಧಿ ಒಕ್ಕೂಟವಾದ ‘ಕರ್ನಾಟಕ ಖಾಸಗಿ ಶಾಲೆಗಳ ಸಂಘ’ ಮತ್ತು ಇತರ ಕೆಲವು ಶಿಕ್ಷಣ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ಆದೇಶವನ್ನು ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

2025-26ನೇ ಶೈಕ್ಷಣಿಕ ವರ್ಷದಲ್ಲಿ ಆರ್‌ಟಿಇ ಅಡಿಯಲ್ಲಿ 8ನೇ ತರಗತಿಯಲ್ಲಿ ಉತ್ತೀರ್ಣರಾಗುವ ಎಸ್‌ಸಿ-ಎಸ್‌ಟಿ ವರ್ಗದ ವಿದ್ಯಾರ್ಥಿಗಳು, ಅದೇ ಖಾಸಗಿ ಶಾಲೆಯಲ್ಲಿ 9 ಮತ್ತು 10ನೇ ತರಗತಿ ವ್ಯಾಸಂಗವನ್ನು ಮುಂದುವರಿಸಲು ಅನುಮತಿ ನೀಡಿ ರಾಜ್ಯ ಸರ್ಕಾರವು 2026ರ ಮೇ 21ರಂದು ಸುತ್ತೋಲೆಯನ್ನು ಹೊರಡಿಸಿತ್ತು.

ಈ ಸುತ್ತೋಲೆಯು ‘ಶಿಕ್ಷಣ ಹಕ್ಕು ಕಾಯ್ದೆ-2009’ ಹಾಗೂ ‘ಕರ್ನಾಟಕ ಶಿಕ್ಷಣ ಹಕ್ಕು ನಿಯಮಗಳು-2012’ರ ಆಶಯಕ್ಕೆ ಸಂಪೂರ್ಣವಾಗಿ ತದ್ವಿರುದ್ಧವಾಗಿದೆ ಎಂದು ಅರ್ಜಿದಾರರು ನ್ಯಾಯಾಲಯದ ಗಮನಕ್ಕೆ ತಂದರು. ಆರ್‌ಟಿಇ ಕಾಯ್ದೆಯ ಕಲಂ 12(1)(ಸಿ) ಅನ್ವಯ, ಉಚಿತ ಮತ್ತು ಕಡ್ಡಾಯ ಶಿಕ್ಷಣವು ಕೇವಲ 6ರಿಂದ 14 ವರ್ಷದೊಳಗಿನ (ಅಂದರೆ 1ರಿಂದ 8ನೇ ತರಗತಿ) ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ. ಸಂಸತ್ತಿನ ಅಥವಾ ಶಾಸಕಾಂಗದ ತಿದ್ದುಪಡಿಯಿಲ್ಲದೆ, ಕೇವಲ ಒಂದು ಆಡಳಿತಾತ್ಮಕ ಸುತ್ತೋಲೆಯ ಮೂಲಕ ಕಾಯ್ದೆಯ ವ್ಯಾಪ್ತಿಯನ್ನು 9 ಮತ್ತು 10ನೇ ತರಗತಿಗೆ ಅನಧಿಕೃತವಾಗಿ ವಿಸ್ತರಿಸುವ ಯಾವುದೇ ಕಾನೂನಾತ್ಮಕ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ಇದನ್ನು ಓದಿದ್ದೀರಾ? ಫಿಫಾ 2026: ಜೂನ್ 11ರಿಂದ ದಿಗ್ಗಜರ ಹಣಾಹಣಿಯ ಜಾಗತಿಕ ಹಬ್ಬ

ಈ ವಿಸ್ತರಣಾ ಸೌಲಭ್ಯವನ್ನು ಸಾರ್ವತ್ರಿಕವಾಗಿ ಎಲ್ಲರಿಗೂ ನೀಡದೆ ಕೇವಲ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತಗೊಳಿಸಿರುವುದು ಸಂವಿಧಾನದ 14ನೇ ಪರಿಚ್ಛೇದ ಒದಗಿಸುವ ‘ಸಮಾನತೆಯ ಹಕ್ಕಿ’ನ ಸ್ಪಷ್ಟ ಉಲ್ಲಂಘನೆಯಾಗಿದೆ ಹಾಗೂ ಇದು ವಿದ್ಯಾರ್ಥಿಗಳ ನಡುವೆ ತಾರತಮ್ಯ ಮೂಡಿಸುತ್ತದೆ ಎಂಬುದು ಅರ್ಜಿದಾರರ ಪ್ರಮುಖ ವಾದವಾಗಿದೆ.

ಮುಖ್ಯಮಂತ್ರಿಗಳ ಕಚೇರಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶನದ ಮೇರೆಗೆ ಆತುರದಿಂದ ಈ ಆದೇಶವನ್ನು ಹೊರಡಿಸಲಾಗಿದ್ದು, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಯಾವುದೇ ಸ್ವತಂತ್ರ ಹಾಗೂ ಕೂಲಂಕಷ ಪರಿಶೀಲನೆ ನಡೆಸಿಲ್ಲ. ಹೀಗಾಗಿ ಮೇ 21ರ ಸುತ್ತೋಲೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು ಸದ್ಯಕ್ಕೆ ಸರ್ಕಾರದ ಸುತ್ತೋಲೆಗೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...