ಹಲ್ಲೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪುತ್ರನ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ತಡೆ

Date:

ಅತಿ ವೇಗವಾಗಿ ಕಾರು ಚಲಾಯಿಸಿ, ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ, ಬಳಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪುತ್ರ ಅಶುತೋಷ್‌ ಹೆಗಡೆ ವಿರುದ್ಧ ವಿಚಾರಣೆಗೆ ಹೈಕೋರ್ಟ್ ಗುರುವಾರ ತಡೆ ನೀಡಿದೆ.

- Advertisement -

ಇತ್ತೀಚೆಗೆ ಅನಂತಕುಮಾರ್‌ ಹೆಗಡೆ, “ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ನನ್ನ ಪುತ್ರ ಅಶುತೋಷ್ ಹೆಗಡೆಯ ವಿರುದ್ಧ ಬೆಂಗಳೂರಿನ ದಾಬಸ್‌ ಪೇಟೆ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕು. ಇಲ್ಲದೇ ಇದ್ದರೆ ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಆತನ ಶೈಕ್ಷಣಿಕ ಭವಿಷ್ಯಕ್ಕೆ ಧಕ್ಕೆಯಾಗುತ್ತದೆ” ಎಂದು ಹೈಕೋರ್ಟ್‌ಗೆ ಮನವಿಯೊಂದನ್ನು ಮಾಡಿದ್ದಾರೆ. ಎಫ್‌ಐಆರ್ ಮತ್ತು ಆರೋಪ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದೇ ಇರುವುದರಿಂದ ಪ್ರಕರಣದಿಂದ ಕೈಬಿಡಬೇಕು ಎಂದು ಅಶುತೋಷ್‌ ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಹಿಂದುತ್ವದ ಹೆಸರಿನಲ್ಲಿ ರಾಜಕೀಯ; ಬಡವರ ಮಕ್ಕಳು ಜೈಲಿನಲ್ಲಿ, ಅನಂತಕುಮಾರ್‌ ಹೆಗಡೆ ಮಗ ವಿದೇಶದಲ್ಲಿ!

ಈ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಸ್‌ ಸುನೀಲ್‌ ದತ್‌ ಯಾದವ್‌ ಅವರ ಏಕಸದಸ್ಯ ಪೀಠ, “ನಾಲ್ಕನೇ ಆರೋಪಿ ಅಶುತೋಷ್‌ ವಿರುದ್ಧ ಮೇಲ್ನೋಟಕ್ಕೆ ಅಪರಾಧ ಎನ್ನುವ ಆರೋಪಗಳಿಲ್ಲ. ಆದ್ದರಿಂದ ಮುಂದಿನ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ನಾಲ್ಕನೇ ಆರೋಪಿಗೆ ಮಾತ್ರ ಮಧ್ಯಂತರ ಆದೇಶ ಸೀಮಿತವಾಗಿದೆ” ಎಂದು ಹೇಳಿದ್ದಾರೆ.

ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ಪುತ್ರನ ಮೇಲೆ ವೇಗವಾಗಿ ಕಾರು ಚಲಾಯಿಸಿ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದು, ಅದರ ಚಾಲಕನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಆರೋಪವಿದೆ. ಯಲ್ಲಾಪುರಕ್ಕೆ ತೆರಳುತ್ತಿದ್ದಾಗ ಈತನ ಕಾರು ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಮಾಜಿ ಸಂಸದನ ಪುತ್ರ ಎನ್ನುವ ದುರಹಂಕಾರದಲ್ಲಿ ಅಶುತೋಶ್ ಇನ್ನೊಂದು ಕಾರಿನ ಚಾಲಕನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭದಲ್ಲಿ ಅನಂತಕುಮಾ‌ರ್ ಹೆಗಡೆ ಕೂಡ ಸ್ಥಳದಲ್ಲಿ ಉಪಸ್ಥಿತರಿದ್ದರು ಎಂದು ಅನೇಕ ವರದಿಗಳು ಹೇಳುತ್ತವೆ. ಜೊತೆಗೆ ಅನಂತಕುಮಾರ್ ಹೆಗಡೆಯ ಭದ್ರತಾ ಸಿಬ್ಬಂದಿಯೂ ಕೂಡ ಈ ಹಲ್ಲೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪಗಳು ಇವೆ.

ತುಮಕೂರಿನಲ್ಲಿ ಮದುಗೆ ಹೋಗಿ ಇನ್ನೋವಾ ಕಾರಿನಲ್ಲಿ ಬರುತ್ತಿದ್ದಾಗ ಹಳೇ ನಿಜಗಲ್‌ ಬಳಿ ಹಿಂದಿನಿಂದ ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದು ಕಾರು ಗುದ್ದಿದೆ. ಬಳಿಕ ನಮ್ಮ ಕಾರನ್ನು ನಿಲ್ಲಿಸುವಂತೆ ಹೇಳಿದರು. ಕಾರು ನಿಲಿಸುತ್ತಿದ್ದಂತೆ ಮುಖಕ್ಕೆ ಗುದ್ದಿದ್ದಾರೆ. ಮತ್ತೊಬ್ಬ ವ್ಯಕ್ತಿ ನಮ್ಮನ್ನು ಕಾರಿನಿಂದ ಹೊರಗೆ ಎಳೆದುಕೊಂಡು ಹಲ್ಲೆ ನಡೆಸಿದ್ದಾನೆ. ಇದರಿಂದ‌ ಕಾರಿನಲ್ಲಿದ್ದ ಸಲ್ಮಾನ್‌ ಖಾನ್‌ ಎಂಬವರ ಮೂರು ಹಲ್ಲುಗಳು ಮುರಿದಿವೆ ಎಂದು ಗಾಯಾಳು ಹಾಲೇನಹಳ್ಳಿಯ ಸೈಫ್‌ ಖಾನ್‌ ದೂರು ನೀಡಿದ್ದರು.

ಕಾರಿನಲ್ಲಿ ಅನಂತಕುಮಾರ್ ಹೆಗಡೆ ಕೂಡಾ ಇದ್ದರು. ಹೆಗಡೆ ರೆದ ತಕ್ಷಣವೇ ಉಳಿದವರು ಬಂದು ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ. ನಮ್ಮ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಪಿಸ್ತೂಲ್‌ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದೂ ದೂರು ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...