ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌

Date:

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣದ ತನಿಖೆಗೆ ಈ ಹಿಂದೆ ನೀಡಿದ ತಡೆಯಾಜ್ಞೆಯನ್ನು ಹೈಕೋರ್ಟ್ ಬುಧವಾರ ತೆರವುಗೊಳಿಸಿದೆ. ಇದರಿಂದಾಗಿ ಮತ್ತೆ ಈ ಪ್ರಕರಣದ ತನಿಖೆಯು ಮುಂದುವರೆಯಲಿದೆ.

- Advertisement -

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದು ಕೋರಿ ಸಾಮಾಜಿಕ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ವಿಠಲ್‌ಗೌಡ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್ ಅವರ ಏಕಸದಸ್ಯ ಪೀಠ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ: ಸಾಕ್ಷಿದಾರ ಪ್ರದೀಪ್ ಹೇಳಿಕೆ ಕೋರ್ಟ್‌ನಲ್ಲಿ ದಾಖಲು

ಸರ್ಕಾರದ ಪರ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ವಾದ ಮಂಡಿಸಿದ್ದು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಅನುಮತಿ‌ ಪಡೆದಿಲ್ಲ ಎಂದು ಕೋರ್ಟ್‌ಗೆ ಸುಳ್ಳು ಮಾಹಿತಿಯನ್ನು ನೀಡಿ ತಡೆಯಾಜ್ಞೆ ಪಡೆದುಕೊಂಡಿದ್ದಾರೆ. ಮ್ಯಾಜಿಸ್ಟ್ರೇಟ್ ಅನುಮತಿ ಪಡೆಯಲಾಗಿದೆ. ಈ ಸಂಬಂಧದ ಆದೇಶವನ್ನು ಪೀಠ ಪರಿಶೀಲಿಸಬಹುದು ಎಂದು ಹೇಳಿದ್ದಾರೆ.

ಅರ್ಜಿದಾರರಿಗೆ ನೋಟಿಸ್‌ ನೀಡುತ್ತಿದ್ದಂತೆ ಕಿರುಕುಳ ಎಂದು ಆರೋಪಿಸಿ ಕೋರ್ಟ್‌ ಮೊರೆ ಹೋಗಿದ್ದಾರೆ. ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ತಡೆಯಾಜ್ಞೆ ತೆರವುಗೊಳಿಸದಿದ್ದರೆ ತನಿಖೆಗೆ ಅಡ್ಡಿಯಾಗುತ್ತದೆ. ಆದ್ದರಿಂದ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಜಗದೀಶ್‌ ವಾದಿಸಿದ್ದಾರೆ.

ವಾದ ಆಲಿಸಿದ ಪೀಠವು ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ. ಹಾಗೆಯೇ ಅರ್ಜಿದಾರ/ಆರೋಪಿಗಳಿಗೆ ಕಿರುಕುಳ ನೀಡದಂತೆ ಮಾಡಿರುವ ಮಧ್ಯಂತರ ಆದೇಶ ವಿಸ್ತರಿಸಿದೆ.

ಹೈಕೋರ್ಟ್‌ನ ಈ ಆದೇಶದಿಂದಾಗಿ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ವಿಠಲ್‌ಗೌಡ ಎಸ್‌ಐಟಿ ವಿಚಾರಣೆಗೆ ಹಾಜರಾಗಬೇಕಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...