ಹಿಜಾಬ್‌ಗೆ ಅನುಮತಿ; ರಾಜ್ಯ ಸರ್ಕಾರದ ಆದೇಶ ಸ್ವಾಗತಿಸಿದ ಬ್ಯಾರಿಸ್ ಸೆಂಟ್ರಲ್ ಕಮಿಟಿ

Date:

ಬೆಂಗಳೂರು, ಮೇ 15: ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಹಕ್ಕುಗಳನ್ನು ಗೌರವಿಸುವ ದಿಸೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಬ್ಯಾರಿಸ್ ಸೆಂಟ್ರಲ್ ಕಮಿಟಿಯು ಸ್ವಾಗತಿಸುತ್ತದೆ ಎಂದು ಬೆಂಗಳೂರಿನ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಶಬೀರ್ ಬ್ರಿಗೇಡ್ ಹೇಳಿದರು.

- Advertisement -

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಮಾನ್ಯವಾಗಿ ಧರಿಸುವ ಪೇಟ/ಟರ್ಬನ್, ಜನಿವಾರ/ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ತಲೆವಸ್ತ್ರ/ಹಿಜಾಬ್ ಸೇರಿದಂತೆ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತ ಸಂಕೇತಗಳನ್ನು ಶಿಸ್ತು, ಸುರಕ್ಷತೆ ಮತ್ತು ಗುರುತಿಸುವಿಕೆಗೆ ಅಡ್ಡಿಯಾಗದ ರೀತಿಯಲ್ಲಿ ಧರಿಸಲು ಅವಕಾಶ ಕಲ್ಪಿಸಿರುವುದು ಸಂವಿಧಾನಬದ್ಧ ಹಕ್ಕುಗಳಿಗೆ ಗೌರವ ನೀಡಿದಂತಾಗಿದೆ. ವಿಶೇಷವಾಗಿ, ಇಂತಹ ಸೀಮಿತ ಸಾಂಪ್ರದಾಯಿಕ ಅಥವಾ ಧಾರ್ಮಿಕ ಸಂಕೇತಗಳನ್ನು ಧರಿಸಿರುವ ಕಾರಣಕ್ಕೆ ಯಾವುದೇ ವಿದ್ಯಾರ್ಥಿಗೆ ಶಿಕ್ಷಣ ಸಂಸ್ಥೆ, ತರಗತಿ ಕೊಠಡಿ, ಪರೀಕ್ಷಾ ಕೇಂದ್ರ ಅಥವಾ ಇತರೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿರಾಕರಿಸಬಾರದು ಎಂಬ ಸ್ಪಷ್ಟ ಸೂಚನೆ ಸಮಾನತೆ ಮತ್ತು ಶಿಕ್ಷಣದ ಹಕ್ಕನ್ನು ಬಲಪಡಿಸುತ್ತದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಳಿಕ‌ ಮಾತನಾಡಿದ ಬಿಸಿಸಿಯ ಕಾನೂನು ಸಲಹೆಗಾರರಾದ ಅಡ್ವೊಕೇಟ್ ಖಲಂದರ್ ಕೊಯಿಲ, ವೈವಿಧ್ಯತೆಯೇ ಭಾರತದ ಶಕ್ತಿಯಾಗಿದ್ದು, ಶಿಕ್ಷಣ ಸಂಸ್ಥೆಗಳು ಸಹಿಷ್ಣುತೆ, ಪರಸ್ಪರ ಗೌರವ ಮತ್ತು ಸಂವಿಧಾನಿಕ ಮೌಲ್ಯಗಳನ್ನು ಬೆಳೆಸುವ ಕೇಂದ್ರಗಳಾಗಬೇಕು. ವಿದ್ಯಾರ್ಥಿಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಗುರುತನ್ನು ಗೌರವಿಸುವ ಮೂಲಕ ಸಮಾನ ಹಾಗೂ ಒಳಗೊಂಡ ಶಿಕ್ಷಣ ವಾತಾವರಣ ನಿರ್ಮಾಣ ಸಾಧ್ಯ. ಈ ಮಾರ್ಗಸೂಚಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸಂಬಂಧಿತ ಅಧಿಕಾರಿಗಳನ್ನು ಆಗ್ರಹಿಸುತ್ತದೆ. ಜೊತೆಗೆ, ಯಾವುದೇ ವಿದ್ಯಾರ್ಥಿಯ ಶಿಕ್ಷಣ ಹಕ್ಕಿಗೆ ಧಕ್ಕೆ ಉಂಟಾಗದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಸೂಕ್ಷ್ಮತೆಯಿಂದ ವರ್ತಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಗಳು ವೈಚಾರಿಕತೆ, ವೈಜ್ಞಾನಿಕತೆ, ಸಮಾನತೆ, ಭ್ರಾತೃತ್ವ, ಘನತೆ, ಪರಸ್ಪರ ಗೌರವ ಮತ್ತು ಜಾತ್ಯತೀತ ದೃಷ್ಟಿಕೋನವನ್ನು ಉತ್ತೇಜಿಸಬೇಕು. ಸಾಂವಿಧಾನಿಕ ಅರ್ಥದಲ್ಲಿ ಜಾತ್ಯತೀತತೆ ಎಂದರೆ ವೈಯಕ್ತಿಕ ನಂಬಿಕೆಗಳಿಗೆ ವಿರುದ್ಧವಲ್ಲ ಬದಲಾಗಿ ಎಲ್ಲರಿಗೂ ಸಮಾನ ಗೌರವ ನೀಡುವಿಕೆ, ಸಾಂಸ್ಥಿಕ ನಿಷ್ಪಕ್ಷಪಾತತೆ ಮತ್ತು ತಾರತಮ್ಯ ರಹಿತ ವರ್ತನೆಯಾಗಿದೆ. ಸರ್ಕಾರವು ಸಾಂವಿಧಾನಿಕ ತತ್ವಗಳಿಗೆ ಅನುಗುಣವಾಗಿ ಎಲ್ಲಾ ಧರ್ಮ ಮತ್ತು ಸಂಪ್ರದಾಯಗಳ ಬಗ್ಗೆ ತಟಸ್ಥ ಮತ್ತು ಸಮಾನ ನಿಲುವು ಹೊಂದಿರಬೇಕಿದೆ. ಮುಸ್ಲಿಂ ಹೆಣ್ಣು ಮಕ್ಕಳು ಧರಿಸುವ ಹಿಜಾಬ್ ಮತ್ತು ನಖಾಬ್ ಬಗ್ಗೆ ಸಮಾಜದಲ್ಲಿ ವ್ಯವಸ್ಥಿತವಾಗಿ ಗೊಂದಲ ಸೃಷ್ಟಿ ಮಾಡಲಾಗಿದೆ. ನಖಾಬ್ ಬೇರೆಯೇ, ಹಿಜಾಬ್ ಬೇರೆಯೇ ಎಂಬ‌ ವಾಸ್ತವ ಸತ್ಯವನ್ನು ಮಾಧ್ಯಮಗಳು ಜನರಿಗೆ ತಿಳಿಸಬೇಕು ಎಂದು ಖಲಂದರ್ ಕೊಯಿಲ ಮನವಿ ಮಾಡಿದರು.

ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣವಾಗಿಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪರಿಷ್ಕೃತ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಜಾತಿ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸ ಆಗಬಾರದು. ಸೌಹಾರ್ದತೆ ಇದ್ದಾಗ ಮಾತ್ರ ನಮ್ಮ ದೇಶವು ಮುಂದುವರಿಯಲು ಸಾಧ್ಯ ಎಂದು ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಪದಾಧಿಕಾರಿ ಮುಹಮ್ಮದ್ ಸಲಿತ್ ಹೇಳಿದರು.

ಯಾರಿಗೂ ತೊಂದರೆಯಾಗದಂತಹ ಸೀಮಿತ ಸಾಂಪ್ರದಾಯಿಕ ಅಥವಾ ನಂಬಿಕೆ ಆಧಾರಿತ ಆಚರಣೆಗಳಿಂದಾಗಿ ಯಾವುದೇ ವಿದ್ಯಾರ್ಥಿಗೆ ಶಿಕ್ಷಣ ಹಕ್ಕು ನಿರಾಕರಣೆ ಆಗದಂತೆ ನೋಡಿಕೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಿಗದಿತ ಸಮವಸ್ತ್ರಕ್ಕೆ ಪೂರಕವಾಗಿ ಮತ್ತು ಅದಕ್ಕೆ ಹೊಂದಿಕೊಳ್ಳುವಂತೆ ಸೀಮಿತ ಸಾಂಪ್ರದಾಯಿಕ ಅಥವಾ ನಂಬಿಕೆ ಆಧಾರಿತ ಗುರುತುಗಳನ್ನು ಧರಿಸಲು ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಸಾರ್ವಜನಿಕ ಸುವ್ಯವಸ್ಥೆ, ಸುರಕ್ಷತೆ, ತರಗತಿಯ ವಾತಾವರಣ ಮತ್ತು ಶಿಕ್ಷಣ ಸಂಸ್ಥೆಗಳ ಜಾತ್ಯತೀತ ಸ್ವರೂಪಕ್ಕೆ ಧಕ್ಕೆಯಾಗದಂತೆ ಶಿಕ್ಷಣ ವ್ಯವಸ್ಥೆಯಲ್ಲಿ ಶಿಸ್ತು, ಸಮಾನತೆ ಮತ್ತು ಘನತೆಯನ್ನು ಮರುಸ್ಥಾಪಿಸಬೇಕು ಎಂಬುದು ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಆಗ್ರಹವಾಗಿದೆ. ಜನಿವಾರ, ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ, ಸಾಮಾಜಿಕ ಆಚರಣೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗೆ ಯಾವುದೇ ಕಾರಣಕ್ಕೂ ಅಡ್ಡಿ ಆಗಬಾರದು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಇರ್ಷಾದ್ ವೇಣೂರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಪದಾಧಿಕಾರಿ ಶಫೀಕ್ ಮಲ್ಲೇಶ್ವರಂ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....