ರಾಜ್ಯದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲ, ಈ ವರ್ಷವೂ ಗಣೇಶೋತ್ಸವಕ್ಕೆ ವಿಘ್ನ: ಆರ್‌ ಅಶೋಕ್

Date:

Advertisements

ಕಳೆದ ವರ್ಷ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಅಮಾಯಕ ಹಿಂದೂಗಳ ಮೇಲೆ ಮತಾಂಧ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ, ಅಂಗಡಿ-ಮುಂಗಟ್ಟುಗಳು, ವಾಹನಗಳಿಗೆ ಬೆಂಕಿ ಹಚ್ಚಿಲು ಬಿಟ್ಟು ಗಣೇಶ ಮೂರ್ತಿಯನ್ನು ಪೊಲೀಸ್ ವ್ಯಾನ್ ಹತ್ತಿಸುವ ಪಾಪದ ಕೆಲಸ ಮಾಡಿದ್ದ ಹಿಂದೂ ವಿರೋಧಿ ಕಾಂಗ್ರೆಸ್‌ ಸರ್ಕಾರದ ಈ ವರ್ಷವೂ ಗಣೇಶ ವಿಸರ್ಜನೆ ವೇಳೆ ಹಿಂದುಗಳಿಗೆ ಸೂಕ್ತ ಭದ್ರತೆ ಒದಗಿಸಲು ವಿಫಲವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಮದ್ದೂರಿನಲ್ಲಿ ಭಾನುವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಎರಡು ಕೋಮುಗಳ ನಡುವೆ ನಡೆದ ಕಲ್ಲು ತೂರಾಟ ವಿಚಾರವಾಗಿ ಎಕ್ಸ್‌ ಖಾತೆಯಲ್ಲಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು, “ಕಳೆದ ವರ್ಷ ನಾಗಮಂಗಲ, ಶಿವಮೊಗ್ಗ ಸೇರಿದಂತೆ ಅನೇಕ ಕಡೆ ಗಣೇಶೋತ್ಸವ ವೇಳೆ ಕೋಮು ದಳ್ಳುರಿ ನಡೆದಿದ್ದರೂ ಈ ಬಾರಿ ಎಚ್ಚೆತ್ತುಕೊಳ್ಳದ ಕಾಂಗ್ರೆಸ್ ಸರ್ಕಾರ ಈ ವರ್ಷ ಮದ್ದೂರು, ಹುಬ್ಬಳ್ಳಿ, ಬಾಗಲಕೋಟೆ, ಸಾಗರ, ಧಾರವಾಡ ಸೇರಿದಂತೆ 4-5 ಕಡೆಗಳಲ್ಲಿ ನೆಮ್ಮದಿಯ ಗಣೇಶೋತ್ಸವಕ್ಕೆ ಭಂಗ ಉಂಟುಮಾಡಿದೆ” ಎಂದು ಆರೋಪಿಸಿದ್ದಾರೆ.

ಗೃಹ ಸಚಿವ ಪರಮೇಶ್ವರ್‌ ಅವರ ಪ್ರಕಾರ ಇವೆಲ್ಲವೂ “ಆಕಸ್ಮಿಕ”, “ಸಣ್ಣ” ಘಟನೆಗಳೋ ಅಥವಾ ಈ ಘಟನೆಗಳ ಬಗ್ಗೆ “ಗೊತ್ತಿಲ್ಲ” ಎಂದು ಎಂದಿನಂತೆ ತಿಪ್ಪೆ ಸರಿಸುತ್ತಾರೋ ಆ ಭಗವಂತನೇ ಬಲ್ಲ. ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಕರ್ನಾಟಕದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲ. ಹಿಂದೂಗಳು ತಮ್ಮ ಹಬ್ಬ, ಹರಿದಿನಗಳನ್ನ, ಉತ್ಸವ, ಜಾತ್ರೆಗಳನ್ನ ನೆಮ್ಮದಿಯಿಂದ ಆಚರಿಸಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

Download Eedina App Android / iOS

X