ಹಿರಿಯೂರು ಉಪಚುನಾವಣೆ | BJPಗೆ ಟಿಕೆಟ್‌, ಸ್ಪರ್ಧೆಯಿಂದ JDS ಔಟ್‌?

Date:

ಕಾಂಗ್ರೆಸ್‌ ಶಾಸಕ-ಸಚಿವ ಡಿ ಸುಧಾಕರ್ ಅವರ ಮರಣದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದೆ. ಈಗಾಗಲೇ, ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದಲ್ಲಿ ಟಿಕೆಟ್‌ ವಿಚಾರವಾಗಿ ಚರ್ಚೆಗಳು ನಡೆಯುತ್ತಿವೆ. ಉಪಚುನಾವಣೆಯಲ್ಲಿ ಬಿಜೆಪಿಯೇ ಸ್ಪರ್ಧಿಸಲಿದೆ. ಟಿಕೆಟ್‌ ವಿಚಾರದಲ್ಲಿ ಜೆಡಿಎಸ್‌ ಮನವೊಲಿಸುತ್ತೇವೆ ಎಂದು ವಿಧಾನಸಭಾ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೊಂಡಿದ್ದಾರೆ. ಮುಂದಿನ ಉಪಚುನಾವಣಾ ಕಣದಿಂದ ಜೆಡಿಎಸ್‌ ಹೊರಗುಳಿಯುವ ಸಾಧ್ಯತೆಗಳಿವೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, “ಹಿರಿಯೂರು ಕ್ಷೇತ್ರ ನಮ್ಮ ಪಕ್ಷಕ್ಕೇ ಸಿಗಬೇಕು ಎಂದು ರಾಜ್ಯ ಬಿಜೆಪಿ ಘಟಕ ನಿರ್ಧರಿಸಿದೆ. ನಾನು ಕೂಡ ಜೆಡಿಎಸ್‌ ನಾಯಕ, ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರೊಂದಿಗೆ ಮಾತನಾಡುತ್ತೇನೆ. ಅಂತಿಮವಾಗಿ ನಮ್ಮ ಕೇಂದ್ರ ನಾಯಕರು ಜೆಡಿಎಸ್ ನಾಯಕರನ್ನು ಒಪ್ಪಿಸಿ, ಆ ಸ್ಥಾನ ಬಿಜೆಪಿಗೆ ಸಿಗುವಂತೆ ನೋಡಿಕೊಳ್ಳುತ್ತಾರೆ ಎಂಬ ನಂಬಿಕೆಯಿದೆ. ಅಲ್ಲದೆ, ಬಿಜೆಪಿ ಹೈಕಮಾಂಡ್‌ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ರಾಜ್ಯ ಘಟಕ ಬದ್ಧವಾಗಿರುತ್ತದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಮತ್ತೊಂದೆಡೆ, ಹಿರಿಯೂರು ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಪಕ್ಷದಿಂದಲೇ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬುದು ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರ ಒಲವಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಇತ್ತೀಚೆಗಷ್ಟೇ ಹೇಳಿದ್ದರು. ಅಲ್ಲದೆ, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಪರಸ್ಪರ ಸಮನ್ವಯದ ಮೂಲಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದೂ ಕುಮಾರಸ್ವಾಇ ಹೇಳಿದ್ದರು.

ಈ ಲೇಖನ ಓದಿದ್ದೀರಾ?: ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ ಹಿನ್ನೆಲೆಯೇನು? ಪ್ರಸ್ತುತ ಮಹತ್ವವೇನು?

ಇನ್ನು, ಮುಂಬರುವ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳಲ್ಲಿ ಮೈತ್ರಿ ಸ್ಪರ್ಧೆಯ ಕುರಿತೂ ಮಾತನಾಡಿರುವ ಆರ್ ಅಶೋಕ್, “ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ನಡುವೆ  ಸಮನ್ವಯ ಇರಬೇಕು ಎಂಬ ಬಗ್ಗೆ ಭಾರೀ ಒಮ್ಮತವಿದೆ. ಮಂಡ್ಯ, ಉತ್ತರ ಕರ್ನಾಟಕ, ಕರಾವಳಿ ಭಾಗ ಹಾಗೂ ಕೋಲಾರ ಭಾಗದಲ್ಲಿ ಮೈತ್ರಿಯ ಕುರಿತು ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಆದರೂ, ಉಭಯ ಪಕ್ಷಗಳ ನಡುವೆ ಸಮನ್ವಯ ಇರಬೇಕು ಎಂಬುದೇ ಬಹುತೇಕರ ಭಾವನೆ” ಎಂದಿದ್ದಾರೆ.

ಉಪಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ, ಇದೇ ವಾರದಲ್ಲಿ ಎರಡೂ ಪಕ್ಷಗಳ ನಾಯಕರಿರುವ ರಾಜ್ಯ ಮಟ್ಟದ ಸಮನ್ವಯ ಸಮಿತಿಯನ್ನು ರಚಿಸಲಾಗುತ್ತದೆ. ನಂತರದಲ್ಲಿ, ಜಿಲ್ಲಾ ಮಟ್ಟದಲ್ಲೂ ಇದೇ ರೀತಿಯ ಸಮಿತಿಗಳನ್ನು ರಚಿಸಲಾಗುವುದು ಎಂದು ಅಶೋಕ್ ಹೇಳಿದ್ದಾರೆ.

“ಜಿಲ್ಲಾ ಮಟ್ಟದ ಸಮಿತಿಗಳು ಎರಡೂ ಪಕ್ಷಗಳ ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಲಿವೆ. ಜಿಲ್ಲೆಗಳಿಂದ ಬರುವ ವರದಿಗಳು ಮತ್ತು ಕಾರ್ಯಕರ್ತರ ಪ್ರತಿಕ್ರಿಯೆಯನ್ನು ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಕ್ಷೇತ್ರಮಟ್ಟದ ವಾಸ್ತವ ಸ್ಥಿತಿಯನ್ನು ಕೇಂದ್ರ ನಾಯಕತ್ವಕ್ಕೆ ವಿವರಿಸಲಾಗುವುದು” ಎಂದು ಅಶೋಕ್ ತಿಳಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಇ-ಸ್ವತ್ತು ದಾಖಲೆ ನಿಯಮ ಸರಳೀಕರಣ; ತ್ವರಿತ ಸ್ಪಂದನೆಗೆ ಸೂಚನೆ

ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರು ಇ-ಸ್ವತ್ತು ದಾಖಲೆ ಪಡೆಯಲು ಎದುರಿಸುತ್ತಿರುವ ತೊಡಕುಗಳನ್ನು...

ಧಾರವಾಡ | ಮಾನ್ಯಾ ಹತ್ಯೆ ಪ್ರಕರಣ: ತ್ವರಿತ ನ್ಯಾಯಕ್ಕೆ ಚೇತನ್ ಅಹಿಂಸಾ ಆಗ್ರಹ

ಅಂತರ್ಜಾತಿ ವಿವಾಹದ ಕಾರಣಕ್ಕೆ ನಡೆದ ಮಾನ್ಯಾ ಪಾಟೀಲ್ ಅವರ ಮರ್ಯಾದೆಗೇಡು ಹತ್ಯೆ...

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ ಸಿಲುಕಿದ ಸತ್ಯಾನ್ವೇಷಣೆ!

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ...