‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

Date:

Advertisements

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ರಾಜ್ಯ ಸರಕಾರ ಆಯ್ಕೆ ಮಾಡಿದೆ.

ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಿ ಗೌರವಿಸುತ್ತದೆ.

“ರಾಷ್ಟ್ರಪಿತ ಮಹಾತ್ಮಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ, ಜನಸಾಮಾನ್ಯರು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಆಚರಿಸಲು ರಾಜ್ಯ ಸರಕಾರವು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಆಚರಣೆಯ ಅಂಗವಾಗಿ ಗಾಂಧೀಜಿಯವರ ತತ್ವ ಮೌಲ್ಯ ಹಾಗೂ ಸಮಾಜಮುಖಿ ಚಿಂತನೆಗಳನ್ನು ಜನಮನಗಳಲ್ಲಿ ಬಿತ್ತುವಲ್ಲಿ ಮಹತ್ವದ ಪಾತ್ರವಹಿಸಿರುವ ಡಾ.ರಾಮಚಂದ್ರ ಗುಹಾ ಅವರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ” ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

Advertisements

ಡಾ. ಗುಹಾ ಅವರು ಭಾರತದ ಸಮಕಾಲೀನ ಇತಿಹಾಸ, ರಾಜಕೀಯ ಚಳವಳಿಗಳು, ಪರಿಸರ ಹೋರಾಟಗಳು ಹಾಗೂ ಕ್ರಿಕೆಟ್‌ ಕುರಿತ ತಮ್ಮ ಅಧ್ಯಯನ ಮತ್ತು ಗ್ರಂಥ ರಚನೆಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ. ಗಾಂಧಿ ಕುರಿತು ಗುಹಾ ಅವರು ‘ದಿ ಇಯರ್ಸ್ ದಟ್ ಚೇಂಜ್ಡ್ ದಿ ವರ್ಲ್ಡ್ (2018) ಮತ್ತು ‘ಗಾಂಧಿ ಬಿಫೋರ್ ಇಂಡಿಯಾ’ (2013) ಕೃತಿಗಳನ್ನು ಬರೆದಿದ್ದಾರೆ.

2011-12ನೇ ಸಾಲಿನಲ್ಲಿ, ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅಂಡ್ ಪೊಲಿಟಿಕಲ್ ಸೈನ್ಸ್ (ಎಲ್ಎಸ್ಇ), ಇತಿಹಾಸ ಮತ್ತು ಅಂತರರಾಷ್ಟ್ರೀಯ ವ್ಯವಹಾರಗಳಲ್ಲಿ ಫಿಲಿಪ್ ರೋಮನ್ ಚೇರ್ ನಲ್ಲಿ ಸಂದರ್ಶಕ ಸ್ಥಾನವನ್ನು ಹೊಂದಿದ್ದರು.ಗುಹಾ ಅವರನ್ನು 20 ನೇ ಶತಮಾನದ ಉತ್ತರಾರ್ಧ ಮತ್ತು 21 ನೇ ಶತಮಾನದ ಆರಂಭದ ಪ್ರಮುಖ ಇತಿಹಾಸಕಾರರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.

ಅಮೆರಿಕನ್ ಹಿಸ್ಟಾರಿಕಲ್ ಅಸೋಸಿಯೇಷನ್ (ಎಎಚ್‌ಎ) ತನ್ನ ಗೌರವ ವಿದೇಶಿ ಸದಸ್ಯ ಪ್ರಶಸ್ತಿಯನ್ನು 2019ರಲ್ಲಿ ರಾಮ್‌ಚಂದ್ರ ಗುಹಾ ಅವರಿಗೆ ನೀಡಿದೆ. ಈ ಮೊದಲು 2009 ಮತ್ತು 1952 ರಲ್ಲಿ ಈ ಗೌರವವನ್ನು ಕ್ರಮವಾಗಿ ರೋಮಿಲಾ ಥಾಪರ್ ಮತ್ತು ಜಡುನಾಥ್ ಸರ್ಕಾರ್ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ʼಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ಗೆ ʼಶಕ್ತಿ ಯೋಜನೆʼ ಸೇರ್ಪಡೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೋಜನೆ'ಯು...

Download Eedina App Android / iOS

X