ತುಂಗಭದ್ರಾ ಅಣೆಕಟ್ಟು | ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳಿಂದ ಐತಿಹಾಸಿಕ ತೀರ್ಮಾನ: ಸಿಎಂ ಡಿಕೆಶಿ

Date:

“ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ಗುರುವಾರ ಕೊಪ್ಪಳ ಜಿಲ್ಲೆ ಮುನಿರಾಬಾದ್ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ತುಂಗಭದ್ರಾ ಅಣೆಕಟ್ಟೆಯ 33 ಸ್ಪಿಲ್ ವೇ ಗೇಟುಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

ಇದನ್ನೂ ಓದಿ: ತುಂಗಭದ್ರಾ ಅಣೆಕಟ್ಟು ಗೇಟಿನ ದುರಸ್ಥಿಗೆ ಉನ್ನತಮಟ್ಟದ ತಂತ್ರಜ್ಞರ ತಂಡ: ಡಿಸಿಎಂ ಡಿ.ಕೆ. ಶಿವಕುಮಾರ್

“ಇದು ದಕ್ಷಿಣ ಭಾರತದ ಐತಿಹಾಸಿಕ ಕಾರ್ಯಕ್ರಮ. 19ನೇ ಗೇಟ್ ತುಂಡರಿಸಿದಾಗ ಈ ಜಿಲ್ಲೆಯ ಉಸ್ತುವಾರಿ ಮಂತ್ರಿಗಳಾದ ಶಿವರಾಜ್ ತಂಗಡಗಿ ಹಾಗೂ ಅಧಿಕಾರಿಗಳು ಮಧ್ಯರಾತ್ರಿ ನನಗೆ ಕರೆ ಮಾಡಿ, ಅಣೆಕಟ್ಟು ನಡುಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ನಾನು ಅಂದು ಬೆಳಗ್ಗೆ 8 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿದೆವು. ತಕ್ಷಣವೇ ಏನು ಮಾಡಬೇಕು ಎಂದು ತಜ್ಞರೊಂದಿಗೆ ಚರ್ಚಿಸಿ ಒಂದೇ ವಾರದಲ್ಲಿ ಗೇಟ್ ಬದಲಾವಣೆ ಮಾಡಲಾಯಿತು. ಆಮೂಲಕ ಈ ಭಾಗದ ರೈತರನ್ನು ರಕ್ಷಣೆ ಮಾಡಲಾಯಿತು” ಎಂದು ತಿಳಿಸಿದರು.

“ಗೇಟ್ ತುಂಡರಿಸಿದಾಗ ವಿರೋಧ ಪಕ್ಷಗಳು ಟೀಕೆಗಳನ್ನು ಮಾಡಿದರು. ನಮ್ಮ ಸರ್ಕಾರ 33 ಗೇಟ್ ಬದಲಾಯಿಸಲು ತೀರ್ಮಾನಿಸಿ ಈ ಮೂರು ರಾಜ್ಯಗಳ ರೈತರ ರಕ್ಷಣೆ ನಿರ್ಧರಿಸಿದ್ದಾರೆ. ಅಂದು ನಾನು ನೀರಾವರಿ ಸಚಿವನಾಗಿದ್ದೆ. ಇಂದು ಮುಖ್ಯಮಂತ್ರಿಯಾಗಿದ್ದೇನೆ. ಆದರೂ ನಾನು ನಿಮ್ಮ ಸೇವಕ ಹಾಗೂ ನಿಮ್ಮ ಬಂಧು” ಎಂದರು.

ಮೂರು ರಾಜ್ಯಗಳು ಸೇರಿ ತುಂಗಭದ್ರಾ ಅಣೆಕಟ್ಟು ರಕ್ಷಣೆ

“ತುಂಗಭದ್ರಾ ಅಣೆಕಟ್ಟು ರಕ್ಷಣೆ ಮಾಡಲಾಗಿದೆ. ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ ಎಂಬ ಮಾತಿದೆ. ಇಂದು ಸಿ.ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಚಂದ್ರಬಾಬು ನಾಯ್ಡು, ರೇವಂತ್ ರೆಡ್ಡಿ ಅವರು ಸೇರಿದಂತೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಇತಿಹಾಸ ನಿರ್ಮಿಸಿದ್ದೇವೆ. ನಾವು ಇತಿಹಾಸ ಓದುವುದು ಹಾಗೂ ಸ್ಮರಿಸುವುದಕ್ಕಿಂತ ಇತಿಹಾಸ ಸೃಷ್ಟಿಸುವುದು ನಮ್ಮ ಗುರಿ. ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ಹೇಳುತ್ತಿರುತ್ತೇನೆ. ಸಿ.ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಒಟ್ಟಾಗಿ ಸೇರಿ ಮೂರು ರಾಜ್ಯಗಳ ರಕ್ಷಣೆ ಮಾಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ತುಂಗಭದ್ರಾ ಕ್ರಸ್ಟ್‌ಗೇಟ್ ಘಟನೆ | ತಕ್ಷಣವೇ ರೈತರಿಗೆ ವಿಶೇಷ ಬೆಳೆ ಪರಿಹಾರ ಘೋಷಿಸಿ: ರೈತ ಸಂಘ ಆಗ್ರಹ

ಒಂದು ತಾಸು ಚರ್ಚಿಸಿ, ಐತಿಹಾಸಿಕ ತೀರ್ಮಾನ

“ಈ ಅಣೆಕಟ್ಟಿನ 33 ಟಿಎಂಸಿ ನೀರನ್ನು ಉಳಿಸುವ ಬಗ್ಗೆ ರೈತ ಮುಖಂಡರು ಸಲ್ಲಿಸಿರುವ ಮನವಿ ಸೇರಿದಂತೆ ಯಾವ ರೀತಿ ರಕ್ಷಿಸಿ, ರೈತ ಕುಟುಂಬಗಳನ್ನು ಕಾಪಾಡಬೇಕು ಎಂದು ನಾವು ಚರ್ಚೆ ಮಾಡಿದ್ದೇವೆ. ನವಿಲಿ ಸಮನಾಂತರ ಜಲಾಶಯ, ಹೂಳೆತ್ತುವ ವಿಚಾರ ಸೇರಿದಂತೆ ಎಲ್ಲಾ ಅವಕಾಶಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿ ನಾವೆಲ್ಲರೂ ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದೇವೆ. ಈ ತೀರ್ಮಾನವನ್ನು ಕೇಂದ್ರ ಸಚಿವರೇ ಪ್ರಕಟಿಸಲಿದ್ದಾರೆ. ಇಂದು ನಾವು ಒಂದು ತಾಸುಗಳ ಕಾಲ ಮಾಡಿರುವ ಚರ್ಚೆ ದೇಶದ ನೀರಾವರಿ ಹಾಗೂ ಒಕ್ಕೂಟ ವ್ಯವಸ್ಥೆಯಲ್ಲಿ ಇತಿಹಾಸದ ಪುಟಕ್ಕೆ ಸೇರಲಿದೆ. ನಮ್ಮ ನೀರು, ನಮ್ಮ ಹಕ್ಕು ಆಶಯದ ಅಡಿ ಮೂರು ರಾಜ್ಯಗಳ ರೈತರ ರಕ್ಷಣೆಗೆ ನಾವು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದೇವೆ” ಎಂದರು.

ಅಣೆಕಟ್ಟು ಇತಿಹಾಸ ಸ್ಮರಣೆ

ತುಂಗಭದ್ರಾ ನದಿಗೆ ಜಲಾಶಯ ನಿರ್ಮಿಸುವ ಆಲೋಚನೆಗೆ 1860 ರಲ್ಲೇ ಬ್ರಿಟಿಷ್ ಇಂಜಿನಿಯರ್ ಸರ್ ಆರ್ಥರ್ ಕಾಟನ್ ಅವರು ನಾಂದಿ ಹಾಡಿದ್ದರು. ತದನಂತರ 1949ರಲ್ಲಿ ಇದರ ಕಾಮಗಾರಿ ಆರಂಭಗೊಂಡು ಪೂರ್ಣಗೊಳ್ಳುವ ಹೊತ್ತಿಗೆ ಅನೇಕ ಮಹನೀಯರು ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದರು.

“ನಾನು ಸಿಎಂ ಆದ ಬಳಿಕ ಇದು ಎರಡನೇ ಸಾರ್ವಜನಿಕ ಕಾರ್ಯಕ್ರಮ. ರೈತನಿಗೆ ಸಂಬಳವಿಲ್ಲ, ಬಡ್ತಿ ಇಲ್ಲ, ಪಿಂಚಣಿ ಇಲ್ಲ, ರಜೆಯೂ ಇಲ್ಲ ಹಾಗೂ ನಿವೃತ್ತಿಯೂ ಇಲ್ಲ. ಇಂತಹ ಕಷ್ಟದ ಪರಿಸ್ಥಿತಿಯಲ್ಲೂ ದೇಶಕ್ಕೆ ಅನ್ನ ನೀಡುವ ರೈತನ ಬದುಕನ್ನು ಉಳಿಸಬೇಕು ಮತ್ತು ಈ ಭಾಗದ ಭತ್ತದ ಕಣಜವನ್ನು ಕಾಪಾಡಬೇಕು ಎಂಬ ದೃಢ ತೀರ್ಮಾನವನ್ನು ನಿಮ್ಮೆಲ್ಲರ ಆಶೀರ್ವಾದದೊಂದಿಗೆ ನಾವು ತೆಗೆದುಕೊಂಡಿದ್ದೇವೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

ಕೋಲಾರ | ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ: ಡಾ. ನಾಗರಾಜ್

ಆಗ್ನೇಯ ಪದವೀಧರರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ...

ಬಾಗೇಪಲ್ಲಿ | ನಟ ಪ್ರಕಾಶ್ ರಾಜ್ ಭಾಷಣಕ್ಕೆ ನಿರ್ಬಂಧ : ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಕ್ರಮಕ್ಕೆ ಡಿ.ವೈ.ಎಫ್.ಐ ತೀವ್ರ ಆಕ್ರೋಶ

ಪಟ್ಟಣದ ತಾ.ಪಂ.ಪಕ್ಕೆ ಆಯೋಜಿಸಲಾಗಿದ್ದ ಡಿ.ವೈ.ಎಫ್.ಐ (ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್) ಸಮಾವೇಶದಲ್ಲಿ...

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಕೃಷ್ಣರಾಜ...