ಸಿಎಂ, ಡಿಸಿಎಂ ಮನೆಗೆ ಹುಸಿ ಬಾಂಬ್ ಬೆದರಿಕೆ

Date:

ಹುಸಿ ಬಾಂಬ್ ಬೆದರಿಕೆ ಪ್ರಕರಣ ಹೆಚ್ಚಳ‌ ಹಿನ್ನೆಲೆ ಬುಧವಾರವಷ್ಟೇ ರಾಜ್ಯ ಸರ್ಕಾರ ಎಸ್​​ಐಟಿ ರಚನೆ ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬೆಂಗಳೂರು ಮನೆಗೇ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆ ಮೂಲಕ ಬಾಂಬ್ ಬೆದರಿಕೆ ಕಾಟ ಇದೀಗ ಮತ್ತೊಂದು ಮಜಲಿಗೆ ತಲುಪಿದೆ. ತಮಿಳುನಾಡಿನ ವ್ಯಕ್ತಿಯೊಬ್ಬನಿಂದ ಬೆದರಿಕೆ ಸಂದೇಶ ಕಳುಹಿಸಿರುವ ಅನುಮಾನಗಳು ವ್ಯಕ್ತವಾಗಿದ್ದು, ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

- Advertisement -

ಆರ್ನಾ ಅಶ್ವಿನ್ ಶೇಖರ್ ([email protected]) ಎಂಬಾತನ ಐಡಿಯಿಂದ ಡಿಸಿಎಂ ಡಿಕೆ ಶಿವಕುಮಾರ್​​ ಇ-ಮೇಲ್​ ಐಡಿಗೆ ಬಾಂಬ್​ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಆರು ಆರ್​​ಡಿಎಕ್ಸ್ ಬಾಂಬ್​​ಗಳು ಇಬ್ಬರ ಮನೆಯಲ್ಲೂ ಫಿಕ್ಸ್ ಆಗಿದೆ.​ ರಿಮೋಟ್ ಮೂಲಕ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನೊಳಗೊಂದು ಆರೆಸ್ಸೆಸ್ ಆನೆ ಅವಿತಿರುವ ದುರಂತ!

ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಬಾಂಬ್ ಸ್ಕ್ವಾಡ್ ತಕ್ಷಣ ನಿವಾಸಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಹುಸಿಬಾಂಬ್ ಕರೆ ಬಂದ ಹಿನ್ನೆಲೆ ಅಶ್ವತ್ಥ್ ನಾರಾಯಣಸ್ವಾಮಿ ಎಂಬುವವರ ದೂರು ಆಧರಿಸಿ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಇನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶಾಲಾ, ಕಾಲೇಜು, ಹೋಟೆಲ್, ಕೋರ್ಟ್ ಸೇರಿದಂತೆ ಈ ವರ್ಷ ಸುಮಾರು 30ಕ್ಕೂ ಹೆಚ್ಚು ವಿವಿಧ ರೀತಿಯಲ್ಲಿ ಬಾಂಬ್ ಬೆದರಿಕೆಗಳು ಬಂದಿವೆ. ಹೀಗಾಗಿ ಹುಸಿ ಬಾಂಬ್ ಬೆದರಿಕೆ ಕೇಸ್​ಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಉತ್ತರ ವಿಭಾಗ ಡಿಸಿಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ಎಸ್​​ಐಟಿ ರಚನೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...