ವಸತಿ ಯೋಜನೆಯ ಕಾಮಗಾರಿ ನಿಲ್ಲಿಸುವಂತಿಲ್ಲ; ಗುತ್ತಿಗೆದಾರರಿಗೆ ಸಚಿವ ಜಮೀರ್‌ ಸೂಚನೆ

Date:

ಬಿಲ್ ಪಾವತಿ ಬಾಕಿ ನೆಪವೊಡ್ಡಿ ಗುತ್ತಿಗೆ ಸಂಸ್ಥೆಗಳು ವಸತಿ ಯೋಜನೆಗಳ ಕಾಮಗಾರಿ ನಿಲ್ಲಿಸುವಂತಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಸೂಚನೆ ನೀಡಿದರು.

ಶುಕ್ರವಾರ ಸುವರ್ಣಸೌಧದಲ್ಲಿ ಶಿವಮೊಗ್ಗ ಶಾಸಕ ಚೆನ್ನಬಸಪ್ಪ ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, “ವಸತಿ ಯೋಜನೆಗಳು ಕಾಲಮಿತಿಯಲ್ಲಿ ಪೂರ್ಣಗೊಂಡು ಫಲಾನುಭವಿಗಳಿಗೆ ಹಂಚಿಕೆ ಆಗಬೇಕು. ಬಿಲ್ ಪಾವತಿ ಅಥವಾ ಇತರೆ ಕಾರಣಗಳಿಗೆ ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿದರೆ ಕಪ್ಪು ಪಟ್ಟಿಗೆ ಸೇರಿಸಲಾಗುವುದು” ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

“ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಹದಿನಾರು ಕೊಳೆಗೇರಿಗಳಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಿಕೊಡಲಾಗುತ್ತಿರುವ 1590 ಒಂಟಿ ಮನೆ ಯೋಜನೆ ಮೂರು ತಿಂಗಳಲ್ಲಿ ಪೂರ್ಣಗೊಳಿಸಲು” ಸೂಚನೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹದಿನಾರು ಕೊಳೆಗೇರಿಗಳಲ್ಲಿ 1590 ಮನೆ ನಿರ್ಮಾಣಕ್ಕೆ 88.59 ಕೋಟಿ ರೂ. ಯೋಜನೆ ರೂಪಿಸಲಾಗಿದೆ. ಎನ್ಪಿಎಸ್ ಸಂಸ್ಥೆಗೆ ಗುತ್ತಿಗೆ ನೀಡಿದ್ದು 884 ಮನೆಗಳಿಗೆ ಸಂಬಂಧಿಸಿದಂತೆ 36 ಕೋಟಿ ರೂ. ಪಾವತಿ ಆಗಿದ್ದು, 1.5 ಕೋಟಿ ರೂ. ಬಾಕಿ ಇದ್ದು, ಕಾಮಗಾರಿ ಸ್ಥಗಿತ ಮಾಡಿರುವ ಬಗ್ಗೆ ಸಿಡಿಮಿಡಿಗೊಂಡ ಸಚಿವರು ಮೊದಲು ಕಾಮಗಾರಿ ಪ್ರಾರಂಭಿಸಿ ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ನಂತರ ಬಾಕಿ ಬಿಲ್ ಪಾವತಿಸಲಾಗುವುದು ಎಂದು ಗುತ್ತಿಗೆ ಸಂಸ್ಥೆಯವರಿಗೆ ನಿರ್ದೇಶನ ನೀಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಕಣದಿಂದ ಹಿಂದೆ ಸರಿದ ದಿಂಗಾಲೇಶ್ವರ ಸ್ವಾಮೀಜಿ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್‌ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ...

ಚಿಕ್ಕಮಗಳೂರು | ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ

ಮಾಜಿ ಸಚಿವ ಮಾಧುಸ್ವಾಮಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು...

ತೆಲಂಗಾಣ | ಮಸೀದಿಯತ್ತ ಬಾಣದ ಸನ್ನೆ; ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ ಲೋಕಸಭಾ ಕೇತ್ರದಲ್ಲಿ ಎಐಎಂಐಎಂ ಪಕ್ಷದ ಅಧ್ಯಕ್ಷ, ಸಂಸದ ಅದಾದುದ್ದೀನ್ ಓವೈಸಿ...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...