ಕೇಂದ್ರ ಪರಿಹರಿಸಬೇಕಾದ ಸಮಸ್ಯೆಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ: ರೈತ ಮುಖಂಡರಿಗೆ ಸಿಎಂ ಪ್ರಶ್ನೆ

Date:

ಸಕ್ಕರೆಗೆ ಎಮ್ಎಸ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್‌ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ. ಹೀಗಿರುವಾಗ ಅವರಿಂದ ಆಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೇಳಿದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಮುಖಂಡರಿಗೆ ಪ್ರಶ್ನಿಸಿದರು.

- Advertisement -

ಕಬ್ಬು ಬೆಳೆಗಾರರ ಹೋರಾಟ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಂತರ ರೈತ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, “ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್‌ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದರು.

“FRP ದರ ನಿಗದಿ ಮಾಡುವಾಗ ಕೇಂದ್ರ ಅವೈಜ್ಞಾನಿಕ ಕ್ರಮ ಅನುಸರಿಸಿದೆ. ಉತ್ಪಾದನಾ ವೆಚ್ಚ ಹಿಂದಿನ ವರ್ಷಗಳಿಗಿಂತ 4 ಸಾವಿರ ಕಡಿಮೆ ತೋರಿಸಿದ್ದಾರೆ. ಇದ್ಯಾವ ಲೆಕ್ಕಾಚಾರ” ಎಂದು ರೈತ ಮುಖಂಡರು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...