ಬಡವರು, ಉಳ್ಳವರು ಎಂದು ಹೇಗೆ ವಿಂಗಡಣೆ ಮಾಡುತ್ತೀರಿ: ಬಿಜೆಪಿ ನಾಯಕರಿಗೆ ಸಿಎಂ ಡಿ ಕೆ ಶಿವಕುಮಾರ್ ಪ್ರಶ್ನೆ

Date:

“ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ಕೊಡಬೇಡಿ ಎಂದು ಹೇಳುತ್ತಿದ್ದೀರ. ಹಾಗಾದರೆ ನಿಮ್ಮ ಪ್ರಕಾರ, ಬಡವರು, ಉಳ್ಳವರು ಅಂದರೆ ಯಾರು, ಹೇಗೆ ವಿಂಗಡಿಸುತ್ತೀರಿ ಎನ್ನುವುದನ್ನು ವಿವರಿಸಿ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿ ನಾಯಕರನ್ನು ಪ್ರಶ್ನಿಸಿದರು.

- Advertisement -

ವಿಧಾನಸಭೆಯಲ್ಲಿ ಬುಧವಾರ ಬರ ಪರಿಸ್ಥಿತಿಯ ಚರ್ಚೆಯ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ ಅವರು, ರೈತರಿಗೆ ಗ್ಯಾರಂಟಿಗಳನ್ನು ನಿಲ್ಲಿಸಿ. ಆ ಹಣವನ್ನು ಬರಪರಿಹಾರಕ್ಕೆ ಬಳಸಿ ಎಂದು ಸಲಹೆ ನೀಡಿದರು. ಇದಕ್ಕೆ ದನಿಗೂಡಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ, ಬರಗಾಲದಲ್ಲಿ ಗ್ಯಾರಂಟಿಗಳನ್ನು ಬಡವರಿಗೆ ಮಾತ್ರ ತಲುಪುವಂತೆ ಮಾಡಿ ಎಂದು ಆಗ್ರಹಿಸಿದರು. ಆಗ ಸಿಎಂ ಹೀಗೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಹಂತಕ ಗೋಡ್ಸೆಯ ಹೇಳಿಕೆಯೇ ಇತಿಹಾಸವಲ್ಲ; ಸ್ವಾತಂತ್ರ್ಯ ಹೋರಾಟಗಾರರ ಚಾರಿತ್ರ್ಯಹರಣಕ್ಕೆ...

ಅಡ್ಡಂಡ ಕಾರ್ಯಪ್ಪನವರ ‘ಗಾಂಧಿ ಹತ್ಯೆಯ ಸತ್ಯ’ ಪುಸ್ತಕ ಮತ್ತು ನಾಟಕವನ್ನು ನಿಷೇಧಿಸಬೇಕೆಂಬ ಆಗ್ರಹಕ್ಕೆ ಬಲವಾದ ಐತಿಹಾಸಿಕ ಕಾರಣಗಳಿವೆ. ಮನಶಾಸ್ತ್ರದ ದೃಷ್ಟಿಯಿಂದಲೂ ಹಂತಕನ ಸಮರ್ಥನೆಗೆ ಎಚ್ಚರಿಕೆ ಅಗತ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ...

ಕಲ್ಯಾಣ ಯೋಜನೆಗಳಿಗೆ ‘ಆಧಾರ್’ ಬದಲು ‘ಎಪಿಕ್’: ಬಡಜನರ ಹೊಟ್ಟೆಯ...

ರಾಜಕೀಯ ಮತ್ತು ಸಾಮಾಜಿಕ ವಿಶ್ಲೇಷಕರು ಎಚ್ಚರಿಸುವಂತೆ, ಕಳೆದ ಒಂದು ದಶಕದ ಡಿಜಿಟಲ್ ಪರಿಶೀಲನಾ ವ್ಯವಸ್ಥೆಯ ಇತಿಹಾಸವನ್ನು ನೋಡಿದರೆ, ಹೊಸ ತಂತ್ರಜ್ಞಾನಗಳು ಬಂದಾಗಲೆಲ್ಲ ಅತ್ಯಂತ ದುರ್ಬಲ ವರ್ಗದವರನ್ನು ವ್ಯವಸ್ಥೆಯಿಂದ ಹೊರಗಿಡುತ್ತಲೇ ಬರಲಾಗಿದೆ. ಆಧಾರ್ ಜೋಡಣೆ...

ಇದನ್ನೂ ಓದಿ: ಬಿಜೆಪಿ ಶಾಸಕರ ಕ್ಷೇತ್ರಕ್ಕೆ ₹25 ಕೋಟಿ ನೀಡಿದ್ದರೂ ಗುಂಡಿ ಮುಚ್ಚಿಲ್ಲ ಯಾಕೆ: ಡಿ ಕೆ ಶಿವಕುಮಾರ್‌ ಪ್ರಶ್ನೆ

“ನಮ್ಮ ಶಕ್ತಿ ಯೋಜನೆ ಬಳಸಿ ರೈತ ಮಹಿಳೆಯರು ಓಡಾಡುತ್ತಿದ್ದಾರೆ. ರೈತನ ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆ ತಲುಪುತ್ತಿದೆ. ರೈತರ ಮನೆಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ರೈತ ಕುಟುಂಬಕ್ಕೂ 10 ಕೆಜಿ ಅಕ್ಕಿಯನ್ನೂ ಕೊಡುತ್ತಿದ್ದೇವೆ. ಇವರಲ್ಲಿ ಯಾರಿಗೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಅಂತ ಹೇಳಿ. ನಿಮ್ಮ ಸಲಹೆಯನ್ನು ಪರಿಗಣಿಸೋಣ” ಎಂದರು.

“ಸುರೇಶ್ ಅವರೇ, ನೀವು ಬಡವರು, ಉಳ್ಳವರು ಅಂತ ಹೇಗೆ ವಿಂಗಡಣೆ ಮಾಡ್ತೀರ? ಎನ್ನುವುದನ್ನು ವಿವರಿಸಿ” ಎಂದು ಸಿಎಂ ಕೇಳಿದಾಗ, ಸುರೇಶ್ ಗೌಡರು, ಬಿಪಿಎಲ್ ಕಾರ್ಡುದಾರರು ಮಾತ್ರ ಬಡವರು ಎಂದರು.

ಹಾಗಾದರೆ, ‘ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಗ್ಯಾರಂಟಿಗಳನ್ನು ಕೊಟ್ಟು ಮಿಕ್ಕವರಿಗೆ ಗ್ಯಾರಂಟಿ ಯೋಜನೆಯನ್ನು ರದ್ದು ಮಾಡಬೇಕೆ, ಅದನ್ನು ಎದ್ದು ನಿಂತು ಸದನಕ್ಕೆ ಹೇಳಿ” ಎಂದು ಸಿಎಂ ಸೂಚಿಸಿದರು.

ಸುರೇಶ್ ಗೌಡರು, “ಹೌದು, ನಾನು ಧೈರ್ಯವಾಗಿ ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳನ್ನು ಕೊಡಿ ಎಂದು ಹೇಳುತ್ತಿದ್ದೇನೆ. ಬರಗಾಲದಲ್ಲಿ ಸರ್ಕಾರ ನಡೆಸುವುದು ಕಷ್ಟ ಆಗುತ್ತದೆ” ಎಂದರು. ಹಾಗಾದರೆ, “ನಿಮ್ಮ ಪ್ರಕಾರ ಬಿಪಿಎಲ್ ಕಾರ್ಡು ಹೊಂದಿರುವವರಿಗೆ ಮಾತ್ರ ಗ್ಯಾರಂಟಿ ಯೋಜನೆ ನೀಡಬೇಕಾ’ ಅಂತ ಮತ್ತೆ ಸಿಎಂ ಮರುಪ್ರಶ್ನೆ ಮಾಡಿದರು.

ಮಧ್ಯೆ ಪ್ರವೇಶ ಮಾಡಿದ ಶಾಸಕ ವಿಜಯೇಂದ್ರ “ಸರ್ಕಾರದಲ್ಲಿ ಹಣ ಇಲ್ಲ ಅಂತ ಬಿಪಿಎಲ್ ಕಾರ್ಡ್ ಗಳನ್ನು ಸರ್ಕಾರವೇ ರದ್ದು ಮಾಡುತ್ತಿದೆ. ಈ ಬಗ್ಗೆ ನಾವ್ಯಾಕೆ ಮಾತನಾಡಬೇಕು” ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, “ವಿಜಯೇಂದ್ರ ಅವರೇ, ನೀವ್ಯಾಕೆ ಕಷ್ಟ ಪಡುತ್ತಿದ್ದೀರಿ. ನಿಮ್ಮ ಶಾಸಕರು ಅವರ ಭಾವನೆ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಅವಕಾಶ ಕೊಡಿ” ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ವಿಜಯೇಂದ್ರ, ನಿಮ್ಮ ಭಾವನೆಯನ್ನು ಅವರು ಬಹಳ ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದರು. ವಿಜಯೇಂದ್ರ ಅವರ ಮಾತಿಗೆ ಪ್ರತಿಕ್ರಿಯೆ ನೀಡಿದ ಸಿಎಂ, “ನಿಮ್ಮ ಶಾಸಕರು ನನ್ನ ಭಾವನೆ ಅರ್ಥ ಮಾಡಿಕೊಂಡಿರುವುದಕ್ಕೆ ನನಗೂ ಅವರಿಗೂ ಮಾತಿನ ಸಂಪರ್ಕ ಏರ್ಪಟ್ಟಿರುವುದು” ಎಂದು ಛೇಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನ.17, 18ರಂದು ಕಲಾ ಪ್ರತಿಭೋತ್ಸವ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಕ್ಕಳು ಮತ್ತು ಯುವಜನರಲ್ಲಿನ ಸುಪ್ತ ಕಲಾ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ...

ವಿಜಯಪುರ | ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ; 186 ಅಧಿಕಾರಿಗಳಿಗೆ ದಂಡ!

ಮಾಹಿತಿ ಹಕ್ಕು ಕಾಯ್ದೆಯಡಿ ನಿಗದಿತ ಅವಧಿಯಲ್ಲಿ ಮಾಹಿತಿ ನೀಡದೆ ಕರ್ತವ್ಯ ಲೋಪ...

ಇ.ಡಿ. ‘ಸೂಪರ್ ಕಾಪ್’ ಅಲ್ಲ, ಸ್ವತಂತ್ರವಾಗಿ ತನಿಖೆ ನಡೆಸಲು ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯಕ್ಕೆ...