ಹುಬ್ಬಳ್ಳಿ | ಪೊಲೀಸ್ ಆಯುಕ್ತರಿಗೆ ಗೌರಿ ಲಂಕೇಶ್ ಹತ್ಯೆ ಆರೋಪಿ ಸನ್ಮಾನ; ಫೋಟೋ ವೈರಲ್

Date:

ಹುಬ್ಬಳ್ಳಿ–ಧಾರವಾಡ ಅವಳಿ ನಗರದ ನೂತನ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರಿಗೆ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಆರೋಪಿ ಸನ್ಮಾನಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಘಟನೆಯು ಸಾಮಾಜಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement -

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯಾಗಿರುವ ಅಮಿತ್ ಬದ್ದಿ ಮತ್ತು ಮಾದಕ ವಸ್ತು ಸಾಗಾಟ ಪ್ರಕರಣದಲ್ಲಿ ಆರೋಪಿಯಾಗಿರುವ ಖೇತ್‌ಸಿಂಗ್ ರಾಜಪುರೋಹಿತ್ – ಇಬ್ಬರೂ ನೂತನ ಪೊಲೀಸ್ ಆಯುಕ್ತ ಬೋರಸೆ ಅವರನ್ನು ಭೇಟಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಭೂಷಣ್ ಬೋರಸೆ ಅವರು ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಹಲವು ಗಣ್ಯರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದ್ದರು. ಇದೇ ಸಂದರ್ಭದಲ್ಲಿ, ಈ ಇಬ್ಬರು ವ್ಯಕ್ತಿಗಳು ಆಯುಕ್ತರನ್ನು ಭೇಟಿ ಮಾಡಿ ಹೂಗುಚ್ಛ ನೀಡಿ ಸನ್ಮಾನಿಸಿ, ಅವರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.

ಅವರ ಭೇಟಿಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದೀಗ, ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿರುವ ವ್ಯಕ್ತಿಗಳು ಪೊಲೀಸ್ ಆಯುಕ್ತರ ಕಚೇರಿಗೆ ಹೇಗೆ ಪ್ರವೇಶಿಸಿದರು? ಅವರನ್ನು ಭೇಟಿ ಮಾಡಲು ಅವಕಾಶ ನೀಡಿದ್ದು ಹೇಗೆ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

ವಿಶೇಷವಾಗಿ ಪೊಲೀಸ್ ಆಯುಕ್ತರಂತಹ ಮಹತ್ವದ ಹುದ್ದೆಯಲ್ಲಿರುವ ಅಧಿಕಾರಿಯನ್ನು ಭೇಟಿ ಮಾಡುವವರ ಕುರಿತು ಭದ್ರತೆ ಮತ್ತು ಶಿಷ್ಟಾಚಾರದ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸದೇ ಇರುವ ಬಗ್ಗೆಯೂ ಆಕ್ಷೇಪಗಳು ವ್ಯಕ್ತವಾಗಿವೆ.

ನೂತನ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಲು ಆರೋಪಿಗಳಿಗೆ ಅವಕಾಶ ಸಿಕ್ಕಿದ್ದು, ಪೊಲೀಸ್ ಇಲಾಖೆಯ ಆಂತರಿಕ ಭದ್ರತೆ ಮತ್ತು ಪ್ರೋಟೋಕಾಲ್ ಕುರಿತೂ ಕಳವಳ ವ್ಯಕ್ತವಾಗಿವೆ.

ವೈರಲ್ ಆಗಿರುವ ಫೋಟೋಗಳ ಕುರಿತು ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರ ಅಧಿಕೃತ ಪ್ರತಿಕ್ರಿಯೆ ಇನ್ನೂ ಲಭ್ಯವಾಗಿಲ್ಲ. ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಪ್ರತಿಕ್ರಿಯೆ ದೊರೆತಿಲ್ಲ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿ ಇನ್‌ಸ್ಟಾಗ್ರಾಮ್‌ಗೆ ಪದಾರ್ಪಣೆ: ‘ಬಿಲಾಂಗಿಂಗ್’ ಆತ್ಮಕಥೆಯ ಮೊದಲ ನೋಟ ಬಿಡುಗಡೆ

ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಾಮಾಜಿಕ ಜಾಲತಾಣ...

ಎಪ್‌ಸ್ಟೀನ್ ಫೋಟೊ ಬಾಂಬ್‌! ಮೋದಿ-ಪುರಿ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...

ಛಾಯಾಚಿತ್ರ ಪ್ರದರ್ಶನಕ್ಕೂ ಸೆನ್ಸಾರ್: ರೇಹಾನ್ ವಾದ್ರಾರ 74 ಚಿತ್ರಗಳು ತೆರವು; ಖಾಲಿ ಫ್ರೇಮ್‌ಗಳಿಗೂ ನಿರ್ಬಂಧ!

ದೆಹಲಿಯ ಬಿಕಾನೇರ್ ಹೌಸ್‌ನಲ್ಲಿ ನಡೆಯುತ್ತಿದ್ದ ಯುವ ಛಾಯಾಗ್ರಾಹಕ ರೇಹಾನ್ ರಾಜೀವ್ ವಾದ್ರಾ...