ಎಲ್ಲ ಧರ್ಮದ ಮೂಲ ಮಾನವೀಯತೆ, ಇದೇ ಸಂವಿಧಾನದ ಆಶಯ: ಸಿಎಂ ಸಿದ್ದರಾಮಯ್ಯ

Date:

Advertisements

ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲ ಜಾತಿ, ಎಲ್ಲ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ಆಯೋಜಿಸಿದ್ದ ಸಂತ ಮೇರಿ ಮಾತೆಯ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.

ದಯೆಯಿಲ್ಲದ ದರ್ಮ ಯಾವುದಯ್ಯ-ದಯೆಯೇ ಧರ್ಮದ ಮೂಲವಯ್ಯ ಎನ್ನುವ ಬಸವಣ್ಣರ ಮಾತನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಧಾರ್ಮಿಕ ಸಹಿಷ್ಣತೆ ಮತ್ತು ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಆಶಯವೂ ಆಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಿಜೆ ಬ್ಯಾನ್‌ನಿಂದ ಕಲೆಗೆ ಪ್ರೋತ್ಸಾಹ, ಕೋಮು ಉದ್ವಿಗ್ನತೆಗೆ ಕಡಿವಾಣ

ಬಸವಣ್ಣನವರು ಹೇಳಿದ ಮೌಲ್ಯಗಳನ್ನೇ ಗಾಂಧಿ, ಅಂಬೇಡ್ಕರ್ ಅವರೂ ಹೇಳಿದ್ದಾರೆ. ಈ ಮೌಲ್ಯಗಳಿಗೆ ನಮ್ಮ ಸರ್ಕಾರ ಬದ್ದವಾಗಿದ್ದು ಎಲ್ಲರಿಗೂ ಸಮಾನ ರಕ್ಷಣೆ ನೀಡುತ್ತದೆ ಎಂದರು.

ಮಹಾಧರ್ಮಾಧ್ಯಕ್ಷರಾದ ಪೀಟರ್ ಮಚಾದೋ ಅವರು ಮುಂದಿಟ್ಟಿರುವ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.

ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ಯಲ್ಲಿ ಮಹಾಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪೀಟರ್ ಮಚಾಡೋ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

Download Eedina App Android / iOS

X