ಆರ್ಥಿಕ ಸ್ವಾವಲಂಬಿ ಪತ್ನಿಗೆ ಮಕ್ಕಳನ್ನು ಸಾಕುವ ಜವಾಬ್ದಾರಿ ಇಲ್ಲದಿದ್ದರೆ, ಪತಿ ಜೀವನಾಂಶ ನೀಡುವ ಅಗತ್ಯವಿಲ್ಲ: ಕರ್ನಾಟಕ ಹೈಕೋರ್ಟ್‌

Date:

ಪತ್ನಿಯು ತನ್ನ ಪತಿಗಿಂತ ಗಣನೀಯವಾಗಿ ಹೆಚ್ಚು ಗಳಿಸುತ್ತಿದ್ದರೆ, ಆಕೆಗೆ ಮಕ್ಕಳನ್ನು ಸಲಹುವ ಅಥವಾ ಬೇರೆ ಯಾವುದೇ ಆರ್ಥಿಕ ಜವಾಬ್ದಾರಿಗಳು ಇಲ್ಲದಿದ್ದರೆ, ಆಕೆ ಪತಿಯಿಂದ ಜೀವನಾಂಶವನ್ನು ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಪತ್ನಿಗೆ ತಮಾಸಿಕ 20,000 ರೂ.ಗಳ ಮಧ್ಯಂತರ ಜೀವನಾಂಶವನ್ನು ಪಾವತಿಸುವಂತೆ ಪತಿಗೆ ಸೂಚಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

- Advertisement -

ನ್ಯಾಯಮೂರ್ತಿ ಡಾ. ಚಿಲ್ಲಾಕೂರ್ ಸುಮಲತಾ ಅವರ ಏಕಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ. “ಪತ್ನಿಯು ಆರ್ಥಿಕವಾಗಿ ಸದೃಢವಾಗಿದ್ದಾಗ, ಆಕೆಯ ಆದಾಯವು ಪತಿಯ ಆದಾಯಕ್ಕಿಂತ ಹೆಚ್ಚಾಗಿದ್ದಾಗ ಹಾಗೂ ಮಕ್ಕಳನ್ನು ನೋಡಿಕೊಳ್ಳುವಂತಹ ಯಾವುದೇ ಇತರ ಹೊಣೆಗಾರಿಕೆಗಳು ಆಕೆಗೆ ಇಲ್ಲದಿದ್ದಾಗ, ಕೇವಲ ಮಹಿಳೆಯರನ್ನು ಪುರುಷರು ಸಾಕಬೇಕು ಅಥವಾ ಪತ್ನಿಯನ್ನು ಪತಿಯೇ ನೋಡಿಕೊಳ್ಳಬೇಕು ಎನ್ನಲಾಗದು. ಅಂತಹ ಸನ್ನಿವೇಶಗಳಲ್ಲಿ ಪತ್ನಿಗೆ ಜೀವನಾಂಶವನ್ನು ನೀಡಲು ಪತಿಗೆ ಆದೇಶಿಸಲು ನ್ಯಾಯಾಲಯಗಳು ಒಲವು ತೋರಬಾರದು” ಎಂದು ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

“ಪತಿಯ ಜೀವನಮಟ್ಟಕ್ಕೆ ಅನುಗುಣವಾಗಿ ತನ್ನನ್ನು ತಾನು ನಿಭಾಯಿಸಿಕೊಳ್ಳಲು ಪತ್ನಿಯ ಬಳಿ ಯಾವುದೇ ಆರ್ಥಿಕ ಮೂಲಗಳಿಲ್ಲ ಎಂದು ಸಾಬೀತಾದಾಗ ಮಾತ್ರ ನ್ಯಾಯಾಲಯಗಳು ಮಧ್ಯಂತರ ಅಥವಾ ಅಂತಿಮ ಜೀವನಾಂಶವನ್ನು ನೀಡಬೇಕು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಪೀಠವು ಗಮನಿಸಿದೆ.

ಅರ್ಜಿದಾರ ಪತಿ ಜೀವನ್ ಎಸ್ ಮತ್ತು ಪ್ರತಿವಾದಿ ಸಹನಾ ದೇವಿ ಎ ಅವರು 2024ರಲ್ಲಿ ವಿವಾಹವಾಗಿದ್ದರು. ಮದುವೆಯ ನಂತರ ಅವರು ಅಲ್ಪಕಾಲ ಜೊತೆಯಾಗಿ ವಾಸಿಸುತ್ತಿದ್ದರು. ಆ ಬಳಿಕ ಪತ್ನಿಯು 2005ರ ‘ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ’ಯಡಿ ಅರ್ಜಿ ಸಲ್ಲಿಸಿ, ತಿಂಗಳಿಗೆ 1,13,515 ರೂ. ಮಧ್ಯಂತರ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದರು. ಈ ಅರ್ಜಿಯನ್ನು ಆಲಿಸಿದ್ದ ವಿಚಾರಣಾ ನ್ಯಾಯಾಲಯವು ಪತಿಯು ತಿಂಗಳಿಗೆ 20,000 ರೂ. ಮಧ್ಯಂತರ ಜೀವನಾಂಶವನ್ನು ನೀಡಬೇಕೆಂದು ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪತಿಯು ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಲೇಖನ ಓದಿದ್ದೀರಾ?: ಪ್ಯಾಲೆಸ್ತೀನ್ ಮಕ್ಕಳ ನರಮೇಧ: ಇಸ್ರೇಲ್‌ ಕುತಂತ್ರ ಬೆತ್ತಲೆ ಮಾಡಿದ ನ್ಯಾ. ಎಸ್ ಮುರಳೀಧರ್ ಯಾರು?

ಜೀವನಾಂಶ ಕೋರಿದ್ದ ಸಹನಾ ದೇವಿ, ತಾವು ಪೋಷಕರಿಗೆ ಒಬ್ಬಳೇ ಮಗಳಾಗಿದ್ದು, ಮದುವೆಗಾಗಿ ಸಾಲಗಳನ್ನು ಮಾಡಿಕೊಂಡಿರುವುದರಿಂದ ಅದನ್ನು ತೀರಿಸುವ ಜವಾಬ್ದಾರಿ ತಮ್ಮ ಮೇಲಿದೆ ಎಂದು ಹೇಳಿಕೊಂಡಿದ್ದರು. ಆದರೆ, ಈ ಸಾಲಗಳು ಅಥವಾ ಇಎಂಐಗಳ ಬಗ್ಗೆ ಯಾವುದೇ ಪೂರಕ ದಾಖಲೆಗಳನ್ನು ಆಕೆ ನ್ಯಾಯಾಲಯಕ್ಕೆ ಸಲ್ಲಿಸಿರಲಿಲ್ಲ. ಅಲ್ಲದೆ, ಆಕೆ ಸಲ್ಲಿಸಿದ ಆಸ್ತಿ ಮತ್ತು ಆದಾಯದ ಅಫಿಡವಿಟ್ ಪ್ರಕಾರ ಆಕೆಯ ಪ್ರಸ್ತುತ ಸಂಬಳವು ಆಕೆಯ ಪತಿಯ ಸಂಬಳಕ್ಕಿಂತ ಗಣನೀಯವಾಗಿ ಎಂದು ಕೋರ್ಟ್‌ ಗಮನಿಸಿದೆ.

“ಕೇವಲ ಮಹಿಳೆಯೊಬ್ಬಳು, ಅದರಲ್ಲೂ ಮುಖ್ಯವಾಗಿ ಪತ್ನಿಯು ಕೌಟುಂಬಿಕ ದೌರ್ಜನ್ಯ ಕಾಯ್ದೆ, ಹಿಂದೂ ದತ್ತು ಮತ್ತು ಜೀವನಾಂಶ ಕಾಯ್ದೆ ಅಥವಾ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಜೀವನಾಂಶದ ಹಕ್ಕನ್ನು ಚಲಾಯಿಸಿ ಅರ್ಜಿ ಸಲ್ಲಿಸಿದಾಕ್ಷಣ, ನ್ಯಾಯಾಲಯಗಳು ಪತಿಯು ಪಾವತಿಸಬೇಕಾದ ಜೀವನಾಂಶದ ಮೊತ್ತವನ್ನು ನೇರವಾಗಿ ಆದೇಶಿಸಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

ದಾವಣಗೆರೆ | ಬಿಸಿಯೂಟ ಸೇವಿಸಿದ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು...

ಹುಮನಾಬಾದ್ | ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ : ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಹುಮನಾಬಾದ್ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಹೊರರೋಗಿಗಳು, ಹೆರಿಗೆಗೆ ಬರುವ ಮಹಿಳೆಯರು...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...