ಭ್ರಷ್ಟರ ಪಾಲಿಗೆ ನಾನು ‘ಡಾಬರಮನ್ ನಾಯಿಯೇ’: ಬಿಜೆಪಿ ಶಾಸಕ ಬಿಪಿ ಹರೀಶ್

Date:

Advertisements

ಸಚಿವ ಎಸ್‌ಎಸ್ ಮಲ್ಲಿಕಾರ್ಜುನ​​ ಅವರಿಗೆ ಹುಷಾರ್​​ ಆಗಿ ಇರಲು ಹೇಳಿ. ಅವರೇ ಹೇಳಿದ ಹಾಗೇ ನಾನು ಭ್ರಷ್ಟರ ಪಾಲಿಗೆ ಡಾಬರಮನ್ ನಾಯಿಯೇ ಎಂದು ಬಿಜೆಪಿ ಶಾಸಕ ಬಿಪಿ ಹರೀಶ್ ತಿರುಗೇಟು ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, “ಡಾಬರಮನ್ ನಾಯಿ ಬಾಯಿ ಹಾಕಿದರೆ ಎಲ್ಲಿ ಹಾಕುತ್ತದೆ ಅವರಿಗೆ ಗೊತ್ತಿದೆ. ನಾನು ಅಷ್ಟು ಸುಲಭಕ್ಕೆ ಬಿಡುವ ಮನುಷ್ಯ ಅಲ್ಲ. ಅಧಿಕಾರಿಗಳನ್ನು ಬಳಸಿಕೊಂಡು ಸಚಿವ ಮಲ್ಲಿಕಾರ್ಜುನ್​​ ಎಫ್​​ಐಆರ್​ ಮಾಡಿಸಿದ್ದಾರೆ. ನಾನು ನೀಡಿದ ಹೇಳಿಕೆಗೆ ಈಗಲೂ ಬದ್ಧ” ಎಂದಿದ್ದಾರೆ.

“ಎಸ್​ಪಿಗೆ ನಾನು ಪೊಮೆರೇನಿಯನ್ ನಾಯಿ ಎಂದು ಹೇಳಿಲ್ಲ. ಪೊಮೆರೇನಿಯನ್ ನಾಯಿ ಮರಿಗಳಂತೆ ಅಧಿಕಾರಿಗಳು ಉಸ್ತುವಾರಿ ಸಚಿವರ ಹಿಂದೆ ಸುತ್ತುತ್ತಿದ್ದಾರೆ ಎಂದು ಹೇಳಿದ್ದೇನೆ. ಎಸ್​ಪಿ ಉಮಾ ಪ್ರಶಾಂಶ್​ಗೆ ಬೇಸರ ಆಗಿದ್ದರೆ ನಾನೇನು ಮಾಡಲು ಆಗುವುದಿಲ್ಲ” ಎಂದರು.

ಎಸ್‌ಪಿಗೆ ಅವಹೇಳ ಪ್ರಕರಣ ವಿಚಾರವಾಗಿ ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಅರ್ಜಿ ರದ್ದು ಪಡಿಸಬೇಕೆಂದು ಕೋರಿ ಶಾಸಕ ಬಿಪಿ ಹರೀಶ್​​ ಹೈಕೋರ್ಟ ಮೊರೆ ಹೋಗಿದ್ದರು. ವಿಚಾರಣೆ ನಡೆಸಿ ಶಾಸಕ ಬಿಪಿ ಹರೀಶ್ ವಿರುದ್ದ ಅವಸರದ ಕ್ರಮ ಬೇಡ ಎಂದು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ನ್ಯಾಯಮೂರ್ತಿ ಎಂ.ಐ. ಅರುಣ್ ಆದೇಶಿಸಿದ್ದಾರೆ.

ಬಿ.ಪಿ.ಹರೀಶ್​ಗೆ ಶಿಕಾರಿಪುರ ಡಿವೈಎಸ್​ಪಿಯಿಂದ ನೋಟಿಸ್

ಇನ್ನು ಎಸ್​​ಪಿ ಉಮಾ ಪ್ರಶಾಂತ್ ವಿರುದ್ಧ ಕೀಳುಮಟ್ಟದ ಹೇಳಿಕೆ ವಿಚಾರವಾಗಿ ಶಾಸಕ ಬಿ.ಪಿ.ಹರೀಶ್​ಗೆ ಶಿಕಾರಿಪುರ ಡಿವೈಎಸ್​ಪಿಯಿಂದ ನೋಟಿಸ್​ ನೀಡಲಾಗಿದ್ದು, ಸೆ.17ರಂದು ಬೆಳಗ್ಗೆ 10 ಗಂಟೆಗೆ ಶಿಕಾರಿಪುರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X