ʼRSS – BJPಯ ಹಿಟ್‌ಲಿಸ್ಟ್‌ & ಹೇಟ್‌ಲಿಸ್ಟ್‌ನಲ್ಲಿ ನಾನೇ ಮೊದಲುʼ: ಪ್ರಿಯಾಂಕ್‌ ಖರ್ಗೆ

Date:

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ, RSS​​ ಮತ್ತು BJPಗರ ಹಿಟ್​​ಲಿಸ್ಟ್​​ನಲ್ಲಿ ಹಾಗೂ ಹೇಟ್‌ಲಿಸ್ಟ್‌ನಲ್ಲಿ ನಾನೇ ಮೊದಲ ಸ್ಥಾನದಲ್ಲಿದ್ದೇನೆ. ಅದಕ್ಕೆಲ್ಲ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಂದೇ ಮಾತರಂ ಗಾಯನದ ವಿಚಾರದಿಂದ ಹಿಡಿದು ದೇಶದ ವಿದೇಶಾಂಗ ನೀತಿಯವರೆಗೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು. “ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿರುವುದನ್ನು ಸಮರ್ಥಿಸಿಕೊಂಡರು, 1937ರಲ್ಲೇ ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ, ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್ ಹಾಗೂ ರವೀಂದ್ರನಾಥ ಟ್ಯಾಗೋರ್ ಸೇರಿದಂತೆ ಎಂಟು ಪ್ರಮುಖ ನಾಯಕರು ಸಭೆ ಸೇರಿ ಎರಡು ಚರಣಗಳನ್ನು ಹಾಡುವ ನಿರ್ಧಾರ ಕೈಗೊಂಡಿದ್ದರು. ಇಂತಹ ನಿರ್ಧಾರ ತೆಗೆದುಕೊಂಡಿದ್ದ ಈ ನಾಯಕರಿಗಿಂತ ಬಿಜೆಪಿಯವರು ದೊಡ್ಡವರೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

“ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಹಾಗೂ ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಅವಧಿಯಲ್ಲೂ ಈ ನಿಯಮ ಬದಲಿಸಲು ಏಕೆ ಮುಂದಾಗಲಿಲ್ಲ . ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಕೊಡುಗೆ ಶೂನ್ಯ” ಎಂದು ಕಿಡಿಕಾರಿದರು.

“ನೇತಾಜಿ ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ವಿರುದ್ಧ ಸೇನೆ ಕಟ್ಟುತ್ತಿದ್ದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಹಾಗೂ ಸಾವರ್ಕರ್ ಬ್ರಿಟಿಷ್ ಸೇನೆಗೆ ಜನರನ್ನು ಸೇರಿಸುತ್ತಿದ್ದರು. ಬ್ರಿಟಿಷರಿಂದ 60 ರೂಪಾಯಿ ಪಿಂಚಣಿ ಪಡೆದವರಿಂದ ಇಂದು ದೇಶಭಕ್ತಿಯ ಪಾಠ ಕಲಿಯಬೇಕಾದ ಅಗತ್ಯವಿಲ್ಲ ” ಎಂದು ವ್ಯಂಗ್ಯವಾಡಿದರು. ಇದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ED) ದಾಳಿಯ ಕುರಿತು ಪ್ರತಿಕ್ರಿಯಿಸಿದ ಅವರು, ಇಂತಹ ದಾಳಿಗಳು ರಾಜಕೀಯ ಪ್ರೇರಿತವಾಗಿದ್ದು, ಪ್ರತಿಪಕ್ಷ ನಾಯಕರ ಮೇಲೆಯೇ ಇಂತಹ ದಾಳಿಗಳು ಏಕೆ ನಡೆಯುತ್ತಿವೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ವಂದೇ ಮಾತರಂ ವಿವಾದ | ʼಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಕಾನೂನು ಬದಲಿಸಲಿʼ: ಜೆ&ಕೆ ಸಿಎಂ ಒಮರ್‌ ಅಬ್ದುಲ್ಲಾ

ರಾಜ್ಯ ಸರ್ಕಾರದ ಇನ್ನೂ ಹಲವು ಸಚಿವರು ‘ಕಿಕ್‌ಔಟ್’ ಆಗಲಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆಯೂ ತೀವ್ರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಆರೋಪಗಳಿಗೆ ದಾಖಲೆಗಳಿದ್ದರೆ ವಿಧಾನಸಭೆ ಅಧಿವೇಶನದಲ್ಲಿ ಅವುಗಳನ್ನು ಮಂಡಿಸಿ ರಾಜೀನಾಮೆ ಕೇಳಲಿ ಎಂದು ಸವಾಲು ಹಾಕಿದರು. ಇದೇ ವೇಳೆ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನೂ ಟೀಕಿಸಿದ ಅವರು, “ಭಾರತೀಯ ರೂಪಾಯಿ ಕುರಿತಂತೆ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ವಿಫಲವಾಗಿದೆ. ಚೀನಾದಿಂದ ಎದುರಾಗುತ್ತಿರುವ ಸವಾಲುಗಳಿಗೆ ವಿದೇಶಾಂಗ ಸಚಿವರು ಸಮರ್ಪಕವಾಗಿ ಪ್ರತಿಕ್ರಿಯಿಸಿಲ್ಲ . ಇದರಿಂದ ಸರ್ಕಾರದ ವಿದೇಶಾಂಗ ನೀತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ ಎಂದು ಕಾಣುತ್ತಿದೆ” ಎಂದು ಹೇಳಿದರು.

“ಪ್ರಧಾನಿ ಗುಜರಾತ್‌ನಲ್ಲಿ ಜೋಕಾಲಿಯಲ್ಲಿ ಕುಳಿತರು, ಮಹಾಬಲಿಪುರಂನಲ್ಲಿ ಮಾತುಕತೆ ನಡೆಸಿದರು. ಅದರ ನಂತರ ಏನಾಯಿತು? ಅರುಣಾಚಲ ಪ್ರದೇಶವನ್ನು ತಮ್ಮ ಭೂಭಾಗ ಸೇರಿದಂತೆ ಭಾರತದ ಇತರ ಪ್ರದೇಶಗಳನ್ನೂ ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ನಮ್ಮ ಗಡಿಯೊಳಗೆ ಗ್ರಾಮಗಳನ್ನು ನಿರ್ಮಿಸುತ್ತಿದ್ದಾರೆ. ಆದರೆ ಚೀನಾ ಸರ್ಕಾರ ಮಾಡುತ್ತಿರುವುದು ತಪ್ಪು ಎಂದು ಹೇಳುವಷ್ಟು ಧೈರ್ಯ ಪ್ರಧಾನಿಗೆ ಇಲ್ಲ ಏಕೆ” ಎಂದು ಪ್ರಶ್ನಿಸಿದರು.

ಭಾರತೀಯ ಸೇನೆ ಗಸ್ತು ನಡೆಸುತ್ತಿದ್ದ ಪ್ರಮುಖ ಸ್ಥಳಗಳನ್ನು ನೀವು ಕಳೆದುಕೊಂಡಿದ್ದೀರಿ. ಸೇನೆಗೆ ಸೇರಿದ ಪ್ರಮುಖ ಪ್ರದೇಶಗಳನ್ನೂ ಕಳೆದುಕೊಂಡಿದ್ದೀರಿ. ಆದರೂ ಅವರ ವಿರುದ್ಧ ಧ್ವನಿ ಎತ್ತುವ ಧೈರ್ಯ ನಿಮಗಿಲ್ಲ. ಮೋದಿ ಅವರ ‘56 ಇಂಚಿನ ಎದೆಗಾರಿಕೆ’ ಕೇವಲ ಕಾಂಗ್ರೆಸ್ ಪಕ್ಷದ ವಿರುದ್ಧ ತೋರಿಸುವುದಕ್ಕಷ್ಟೇ ಸೀಮಿತವೇ? ದೇಶದ ಶತ್ರುಗಳ ಮುಂದೆ ಆ ಶಕ್ತಿ ಏಕೆ ಕಾಣಿಸುವುದಿಲ್ಲ ಎಂದು ಖರ್ಗೆ ಖಾರವಾಗಿ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ರಾಯಚೂರು | ಮೀಸಲಾತಿ ಬದಲಾವಣೆಗೆ 150ಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ!

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಕುರಿತು...

ಸಶಸ್ತ್ರ ಪಡೆಗಳಿಗೆ 2.12 ಲಕ್ಷ ಕೋಟಿ ರೂ. ವೆಚ್ಚದ ಶಸ್ತ್ರಾಸ್ತ್ರ ಖರೀದಿ: ರಕ್ಷಣಾ ಮಂಡಳಿ ಅನುಮೋದನೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ರಕ್ಷಣಾ ಸ್ವಾಧೀನ ಮಂಡಳಿಯು (DAC)...