ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಾನೇನು ಲಾಬಿ ನಡೆಸುತ್ತಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Date:

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಬೆನ್ನಲ್ಲೇ ಪಕ್ಷದ ಸಾಂಘಿಕ ವಲಯದಲ್ಲೂ ಭಾರಿ ಬದಲಾವಣೆಗಳಾಗಲಿವೆ ಎಂಬ ಚರ್ಚೆ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ (ಕೆಪಿಸಿಸಿ) ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಳ್ಳಲು ಸತೀಶ್‌ ಜಾರಕಿಹೊಳಿ ಪ್ರಯತ್ನ ಮಾಡುತ್ತಿದ್ದಾರೆ ಎಂಬ ವದಂತಿಗಳೂ ಹರಿದಾಡುತ್ತಿವೆ. ಈ ವದಂತಿಗಳನ್ನು ತಳ್ಳಿಹಾಕಿರುವ ಜಾರಕಿಹೊಳಿ, “ನಾವೊಬ್ಬ ಪಕ್ಷದ ನಿಷ್ಠಾವಂತ ಸೈನಿಕ. ಪಕ್ಷದ ಪ್ರಮುಖ ಹುದ್ದೆಗಳ ಭರ್ತಿ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಂಪೂರ್ಣ ಹಕ್ಕು ಹೈಕಮಾಂಡ್‌ಗೆ ಸೇರಿದ್ದು. ನಾನು ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

“ಪಕ್ಷದ ಸಾಂಸ್ಥಿಕ ಬದಲಾವಣೆಗಳ ಕುರಿತು ಕೇಂದ್ರದ ಹಿರಿಯ ನಾಯಕರು ಸದ್ಯ ಚರ್ಚೆಗಳಲ್ಲಿ ಬ್ಯುಸಿಯಾಗಿದ್ದಾರೆ. ಆದ್ದರಿಂದ, ನಾನು ಈ ವಿಷಯದ ಬಗ್ಗೆ ಅವರೊಂದಿಗೆ ಇನ್ನು ಮಾತನಾಡಿಲ್ಲ” ಎಂದು ಜಾರಕಿಹೊಳಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನಾನು ಹೈಕಮಾಂಡ್ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ ಎಂದಿದ್ದಾರೆ. ಪಕ್ಷದ ದೃಷ್ಟಿಯಿಂದ ನಾನೇ ಅಧ್ಯಕ್ಷನಾಗಬೇಕು ಎಂದೇನೂ ಇಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ” ಎಂದು ಅವರು ಹೇಳಿದ್ದಾರೆ.

ಪಕ್ಷದ ಒಗ್ಗಟ್ಟನ್ನು ಕಾಯ್ದುಕೊಳ್ಳಲು ಹಿರಿಯ ನಾಯಕರನ್ನೊಳಗೊಂಡ ‘ಸಮನ್ವಯ’ ಅಥವಾ ‘ಕೋರ್ ಕಮಿಟಿ’ ರಚಿಸುವ ಪ್ರಸ್ತಾಪದ ಕುರಿತು ಮಾತನಾಡಿದ ಜಾರಕಿಹೊಳಿ, “ಇದೇನೂ ಹೊಸ ಆಲೋಚನೆಯಲ್ಲ, ಕಳೆದ ಮೂರು ವರ್ಷಗಳಿಂದಲೂ ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಹಿಂದೆ ಕೂಡ ಈ ಪ್ರಸ್ತಾಪವಿತ್ತು. ಆದರೆ, ಜಾರಿಗೆ ಬಂದಿರಲಿಲ್ಲ. ಈಗ ಮತ್ತೊಮ್ಮೆ ಚರ್ಚೆಯಾಗುತ್ತಿದೆ. ನಾಯಕತ್ವ ಏನು ನಿರ್ಧರಿಸುತ್ತದೆ ಎಂಬುದನ್ನು ಕಾದು ನೋಡಬೇಕು” ಎಂದಿದ್ದಾರೆ.

“ಈಗ ಹೊಸ ಮುಖ್ಯಮಂತ್ರಿಗಳು ಬಂದಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರೂ ಇದ್ದಾರೆ. ಸಂಪುಟ ರಚನೆಯು ಎರಡು ಹಂತಗಳಲ್ಲಿ ನಡೆಯುವ ಸಾಧ್ಯತೆಯಿದೆ. ಮೊದಲ ಪಟ್ಟಿಯಲ್ಲಿ ಹಿರಿಯ ನಾಯಕರಿಗೆ ಸ್ಥಾನ ಸಿಗಬಹುದು,” ಎಂಬ ಸುಳಿವು ನೀಡಿದ್ದಾರೆ.

ಈ ಲೇಖನ ಓದಿದ್ದೀರಾ?: ಸಾಲುಸಾಲು ಸವಾಲು ಗೆಲ್ಲಲು ‘ಇಮೇಜ್’ ಬದಲಾಯಿಸಿಕೊಳ್ಳಬಲ್ಲರೆ ‘ಡಿಕೆಶಿ’?

ಇನ್ನು, ಸಿದ್ದರಾಮಯ್ಯ ರಾಜೀನಾಮೆ ನೀಡುವ ಮುನ್ನ ಅವರ ವಿರುದ್ಧ 37 ಶಾಸಕರ ಗುಂಪೊಂದು ಸಹಿ ಸಂಗ್ರಹಿಸಿ ಪತ್ರ ಬರೆದಿತ್ತು ಎಂಬ ಆರೋಪಗಳನ್ನು ಜಾರಕಿಹೊಳಿ ತಿರಸ್ಕರಿಸಿದ್ದಾರೆ. ಅಂತಹ ವದಂತಿ ಸಂಪೂರ್ಣ ಆಧಾರರಹಿತ. ಹೈಕಮಾಂಡ್‌ಗೆ ಇಂತಹ ಯಾವುದೇ ಪತ್ರ ರವಾನೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಒಂದು ವೇಳೆ 37 ಪ್ರಭಾವಿ ಶಾಸಕರು ನಿಜವಾಗಿಯೂ ಅಂತಹ ದಾಖಲೆಗೆ ಸಹಿ ಮಾಡಿದ್ದರೆ, ಅದಕ್ಕೊಂದು ಸಾಕ್ಷಿ ಇರಬೇಕಿತ್ತಲ್ಲವೇ? ಅಂತಹ ಯಾವುದೇ ಪತ್ರ ಅಸ್ತಿತ್ವದಲ್ಲಿಲ್ಲ. ಇವೆಲ್ಲ ಬರೀ ವದಂತಿಗಳು ಮತ್ತು ಸೃಷ್ಟಿಸಿದ ಕಟ್ಟುಕಥೆಗಳು, ಇವುಗಳಿಗೆ ಅತಿಯಾದ ಮಹತ್ವ ನೀಡುವ ಅಗತ್ಯವಿಲ್ಲ” ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆಯ ನಂತರ ಸರ್ಕಾರ ಮತ್ತು ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನವು ಪಕ್ಷದ ಅಧಿಕಾರ ರಚನೆಯನ್ನು ನಿರ್ಧರಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...