ನಾನೇ ಜೆಡಿಎಸ್‌ ಅಧ್ಯಕ್ಷ, ಮುಂದೇನಾಗುತ್ತದೆ ಎಂದು ಪರದೆ ಮೇಲೆ ನೋಡಿ: ಸಿಎಂ ಇಬ್ರಾಹಿಂ

Date:

  • ರಾಜ್ಯಾಧ್ಯಕ್ಷ ಸ್ಥಾನದಿಂದ ನನ್ನನ್ನು ಯಾರಿಂದಲೂ‌ ತೆಗೆಯಲು ಸಾಧ್ಯವಿಲ್ಲ
  • ಪಕ್ಷ ಕುಟುಂಬದ ಸ್ವತ್ತಲ್ಲ, ಜೆಡಿಎಸ್‌ನದ್ದು ಜಾತ್ಯತೀತ ಸಿದ್ಧಾಂತ: ಇಬ್ರಾಹಿಂ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ನನ್ನನ್ನು ಯಾರಿಂದಲೂ‌ ತೆಗೆಯಲು ಸಾಧ್ಯವಿಲ್ಲ.‌ ನಾನೇ ಅದರ ಅಧ್ಯಕ್ಷ. ಇದು ನನ್ನ ಮನೆ. ಮುಂದೇನಾಗುತ್ತದೆ ಎಂಬುದನ್ನು ಪರದೆ ಮೇಲೆ ನೋಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಸವಾಲು ಹಾಕುವ ರೀತಿ ಮಾತನಾಡಿದರು.

- Advertisement -

ಜೆಡಿಎಸ್ ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದ ಅವರು, “ನಿತೀಶ್ ಕುಮಾರ್, ಶರದ್ ಪವಾರ್ ಸೇರಿದಂತೆ ಕಾಂಗ್ರೆಸ್‌ನವರೂ ನನ್ನ ಜೊತೆ ಮಾತನಾಡಿದ್ದಾರೆ. ಸಭೆಯ‌ ಚರ್ಚೆಯನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರಿಗೆ ತಿಳಿಸುತ್ತೇನೆ. ಹೊಸ ಸಮಿತಿ ರಚನೆ ಮಾಡಿ, ಅದರ ಸಭೆ ಕರೆಯುತ್ತೇನೆ. ನಂತರ ಮುಂದಿನ ತೀರ್ಮಾನ ನಿರ್ಧಾರ ಕೈಗೊಳ್ಳುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನನ್ನನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಪಕ್ಷ ಕುಟುಂಬದ ಸ್ವತ್ತಲ್ಲ. ಜೆಡಿಎಸ್ ಪಕ್ಷದ್ದು ಜಾತ್ಯತೀತ ಸಿದ್ಧಾಂತ. ಬಿಜೆಪಿ ಸಿದ್ಧಾಂತವೇ ಬೇರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟ ಸೋಲಬೇಕಿದೆ. ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತೇವೆ” ಎಂದು ಎಚ್‌ ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

ಜೆಡಿಎಸ್ ಯಾವ ಕಾರಣಕ್ಕೂ ಎನ್ ಡಿ ಎ ಜೊತೆಗೆ ಹೋಗಲ್ಲ. 19 ಜನ ಶಾಸಕರ ಜೊತೆಗೆ ನಾನೇ ಮಾತನಾಡುತ್ತೇನೆ.‌ ಒಕ್ಕಲಿಗರು ಕೂಡ ಕೈಬಿಟ್ಟಿದ್ದಾರೆ. ಮುಸ್ಲಿಮರನ್ನು ನಂಬಿ ರಾಜಕೀಯ ಮಾಡಿಲ್ಲ ಅಂತಾರೆ. ಆದರೆ ಯಾರನ್ನು ‌ನಂಬಿ ರಾಜಕೀಯ ಮಾಡಿದ್ದರೋ ಅವರೇ ಕೈ ಬಿಟ್ಟರು” ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ವ್ಯಾಖ್ಯಾನ ಬದಲಿಸಿದ ಕಾಂಚಾಣ

“ಎಚ್ ಡಿ ಕುಮಾರಸ್ವಾಮಿ ಅವರು ಯಾರ ಅಭಿಪ್ರಾಯ ಕೇಳಿ ಮೈತ್ರಿ ಮಾಡಿಕೊಂಡಿದ್ದಾರೆ? ಏಕಾಏಕಿ ದೆಹಲಿಗೆ ಹೋಗಿ ಅಮಿತ್ ಶಾ ಜೊತೆಗೆ ಫೋಟೋ ತೆಗೆಸಿ ಮೈತ್ರಿ ಘೋಷಣೆ ಮಾಡಿದ್ದಾರೆ. ಜೆಡಿಎಸ್ ಪ್ರಜಾಪ್ರಭುತ್ವ ‌ಹಾಗೂ‌ ಜಾತ್ಯತೀತದಲ್ಲಿ ನಂಬಿಕೆ ಇಟ್ಟ ಪಕ್ಷ.‌ ನಾವು ಅಲ್ಲಿ‌ ಹೋಗೋದು‌ ಅಲ್ಲ‌ ಅವರು ಇಲ್ಲಿ ಬರಲಿ” ಎಂದರು.

“ಬಿಜೆಪಿಯವರು ಎನ್‌ಆರ್‌ಸಿ, ಮುಸ್ಲಿಂ ಪರ್ಸನಲ್‌ ಲಾ ಕೈ ಹಾಕಲ್ಲ ಎಂದು ಭರವಸೆ ಕೊಡುತ್ತಾರಾ? ನಾನಂತೂ ಮೈತ್ರಿ ಒಪ್ಪಲ್ಲ. ಕುಮಾರಸ್ವಾಮಿ ವೈಯಕ್ತಿಕವಾಗಿ ಮಾತನಾಡಿದ್ದಾರೆ. ಮೈತ್ರಿಯ ಬಗ್ಗೆ ಪಕ್ಷದಲ್ಲಿ‌ ಸಭೆ ಆಗಿದೆಯಾ? ಎಂಎಲ್‌ಎಗಳು ಒಪ್ಪಿದ್ದಾರಾ? ದೇವೇಗೌಡರ ಜೊತೆಗೆ ಮಾತನಾಡುವೆ” ಎಂದು ಹೇಳಿದರು.

”ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಬಗ್ಗೆ ವೈಯಕ್ತಿಕ ದ್ವೇಷ ಇಲ್ಲ. ಆದರೆ ತತ್ವ ಸಿದ್ಧಾಂತ ಬೇರೆ ಇದೆ, ಅದಕ್ಕೆ‌ ನಾವು ವಿರೋಧ ಮಾಡುತ್ತೇವೆ. ನಾನು ಹೆದರುವನು ಅಲ್ಲ, ಬೆದರಿಕೆ ಹಾಕುವವನೂ ಅಲ್ಲ” ಎಂದು ಸ್ಪಷ್ಟಪಡಿಸಿದರು.

“ದೇವೇಗೌಡರು ನಮ್ಮ ರಾಷ್ಟ್ರದ ನಾಯಕರು, ತಂದೆಯ ಸಮಾನ. ಅವರ ಮನಸ್ಸಿನಲ್ಲಿ ನೋವಿದೆ. ಆದರೆ ಸ್ವಯಂ ನಿರ್ಣಯ ತೆಗೆದುಕೊಳ್ಳಲು ಆಗುತ್ತಿಲ್ಲ. ಈಗಲೂ ಅವಕಾಶ ಇದೆ, ಅವರ ಜೊತೆ ಹೋಗಲ್ಲ ಎಂದು ವಾಪಸ್ ಬಂದರೆ ಹೀರೋ ಆಗುತ್ತಾರೆ” ಎಂದರು.

ಚಿಂತನ ಮಂಥನ ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಸಿಎಂ ಜೆ ಎಚ್ ಪಟೇಲ್ ಪುತ್ರ ಹಾಗೂ ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಜೆ ಪಟೇಲ್ ಅವರು‌, ಇಬ್ರಾಹಿಂ ಜೆಡಿಎಸ್ ಸೇರ್ಪಡೆ ಆದಾಗ ನಮಗೂ ಆಹ್ವಾನಿಸಿದ್ದರು. ಆದರೆ ನೀವು ಸ್ವಲ್ಪ ಸಮಯ ಅಲ್ಲೇ ಇರಿ‌ ಎಂದಿದ್ದೆ. ಇವಾಗ ಮತ್ತೆ ಜೊತೆಗೆ ಸೇರುವಂತಹ ಸಮಯ ಬಂದಿದೆ‌ ಎಂದು ಪರೋಕ್ಷವಾಗಿ ಸಿಎಂ ಇಬ್ರಾಹಿಂ ಜೆಡಿಯು ಸೇರ್ಪಡೆ ಆಗುವ ಸುಳಿವು ನೀಡಿದರು. ಆದರೆ, ಅಧಿಕೃತವಾಗಿ ಇಬ್ರಾಹಿಂ ಅವರು ಇಂತಹದ್ದೇ ಪಕ್ಷ ಸೇರುತ್ತೇನೆ ಎಂದು ಈವರೆಗೂ ಸ್ಪಷ್ಟಪಡಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...