ಮತಾಂತರ ಮಾಡಲಿಕ್ಕೆ ಭಗವದ್ಗೀತೆ ಪಠ್ಯದಲ್ಲಿ ಬೇಕು ಅಂತ ನಾನು ಹೇಳಿಲ್ಲ: ಹೆಚ್‌ ಡಿ ಕುಮಾರಸ್ವಾಮಿ

Date:

ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವಂತೆ ಹೇಳಿದ್ದೇನೆ. ಆ ಬಗ್ಗೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರವನ್ನೂ ಬರೆದಿದ್ದೇನೆ. ನಾನೇನು ಮತಾಂತರ ಮಾಡಲಿಕ್ಕೆ ಈ ಹೇಳಿಕೆ ನೀಡಿಲ್ಲ. ಇಂದಿನ ಮಕ್ಕಳ ಬದುಕು, ಇವತ್ತಿನ ಸಮಾಜವನ್ನು ಸಿದ್ದರಾಮಯ್ಯ ನೇತೃತ್ವದಲ್ಲಿ ಯಾವ ರೀತಿ ಬೆಳೆಸುತ್ತಿದ್ದಾರೆ ನೋಡಿ ಹೇಳಿದ್ದೇನೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

- Advertisement -

ಭಗವದ್ಗೀತೆಯನ್ನ ಶಾಲ ಪಠ್ಯದಲ್ಲಿ ಸೇರಿಸುವಂತೆ ಕೋರಿ ಕೇಂದ್ರದ ಶಿಕ್ಷಣ ಸಚಿವರಿಗೆ ಪತ್ರ ಬರೆದ ತಮ್ಮನ್ನು ಮನುವಾದಿ ಎಂದು ಕರೆದ ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡ್ಯದಲ್ಲಿ ತಿರುಗೇಟು ನೀಡಿ, “ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ? ಹಾಗಾದರೆ, ಸಿದ್ದರಾಮಯ್ಯ ಅವರು ಮಕ್ಕಳಿಗೆ ಏನು ಬೋಧಿಸಲು ಹೇಳುತ್ತಾರೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

“ತಂದೆ -ತಾಯಿ, ಅಣ್ಣ-ತಮ್ಮ ಕೊಲೆ ಮಾಡುವಂಥ ಕೆಟ್ಟ ವಾತಾವರಣ ನಿರ್ಮಾಣವಾಗಿದೆ. ಬದುಕಿನ ನಿಯಮಾವಳಿ ಕಲಿಸುವುದು ಸರ್ಕಾರದ ಕರ್ತವ್ಯ. ರಾಜ್ಯದಲ್ಲಿ ಕೆಟ್ಟ ಬೆಳವಣಿಗೆಗಳು ನಡೆಯುತ್ತಿದೆ. ಹಾಸನದಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡರು ಎಂದು ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈಗಿನ ಸಮಾಜ ವೇಗವಾಗಿ ಬೆಳೆಯುತ್ತಿದೆ. ತಾಯಿ ಹೃದಯ ಅನ್ನುವುದಿಲ್ಲ. ನಾನು ಚಿಕ್ಕವನಾಗಿದ್ದಾಗ ನೋಡಿದ್ದ ಸಮಾಜ ಈಗಿಲ್ಲ. ಮನುಷ್ಯ ಸಂಬಂಧಗಳನ್ನು ಬಲಪಡಿಸಿ ಸಮಾಜವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಭಗವದ್ಗೀತೆ ಬೋಧನೆ ಅಗತ್ಯವೆಂದು ಹೇಳಿದ್ದೇನೆ” ಎಂದು ತಿಳಿಸಿದರು.

“ಸಿದ್ದರಾಮಯ್ಯ ತಲೆಯಲ್ಲಿ ಇರುವುದು ಸಮಾಜದಲ್ಲಿ ಘರ್ಷಣೆ ಉಂಟು ಮಾಡುವುದಷ್ಟೆ. ಕಳೆದ 10 ವರ್ಷದಿಂದ ಅಹಿಂದ ಹೆಸರಿನಲ್ಲಿ ಸಿದ್ದರಾಮಯ್ಯ ಮಜಾ‌‌ ಮಾಡಿದ್ದಾರೆ. ಅವರಿಂದ ಅಹಿಂದಕ್ಕೆ ಸಿಕ್ಕ ಕೊಡುಗೆ ಏನು? ಅಹಿಂದ ಸಮಸ್ಯೆ ಎಷ್ಟು ಬಗೆ ಹರಿಸಿದ್ದಾರೆ? ಅಹಿಂದಲ್ಲಿ ಅನೇಕ ಸಣ್ಣ ಜಾತಿ‌ಗಳಿವೆ. ಆ ಸಮಾಜಗಳಿಗೆ ಅವರ ಕೊಡುಗೆ ಏನು? ಅವರು ಯಾರಿಗೆ ಆದ್ಯತೆ ಕೊಟ್ಟಿದ್ದಾರೆ? ಸಂಬಂಧಿಕರ ಜೊತೆ ರಕ್ತದೋಕುಳಿ ನಡೆಸುವುದು ಬೇಡ ಅನ್ನುವುದು ಭಗವದ್ಗೀತೆಯಲ್ಲಿದೆ. ಭಗವದ್ಗೀತೆ ಸಾರಾಂಶ ಜನರಿಗೆ ಮಕ್ಕಳಿಗೆ ಹೇಳುವ ಅವಶ್ಯಕತೆ ಇದೆ. ಈ ಸರ್ಕಾರ ಕಾನೂನುಬಾಹಿರ ಚಟುವಟಿಕೆ ಬೆಂಬಲಿಸುತ್ತದೆ. ಇದರಿಂದ ಭಗವದ್ಗೀತೆ ಈ ಸಂದರ್ಭದಲ್ಲಿ ಅವಶ್ಯಕತೆ ಇದೆ ಎಂದು ನಾನು ಪ್ರತಿಪಾದಿಸಿದ್ದೇನೆ” ಎಂದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...

ಹಾಸನ | ವರ್ಷಕ್ಕೊಮ್ಮೆ ನಡೆಯುವ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ 

ಶ್ರೀ ಹಾಸನಾಂಬೆ ದೇವಿ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ...

ಕಬ್ಬಿಗೆ ಬೆಂಬಲ ಬೆಲೆ: ಬೆಂಗಳೂರಿನಲ್ಲಿ ಕೇಂದ್ರ ತಜ್ಞರ ಸಮಿತಿಗೆ ಕಬ್ಬು ಬೆಳೆಗಾರರ ಅಹವಾಲು

ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ...

2011ರ ‘ನೇಮಕಾತಿ ರಕ್ಷಣೆ ಕಾಯ್ದೆ’ ರದ್ದುಗೊಳಿಸಿದ ಸುಪ್ರೀಂ ಕೋರ್ಟ್; 362 ಕೆಎಎಸ್‌ ಅಧಿಕಾರಿಗಳ ಉದ್ಯೋಗಕ್ಕೆ ಕುತ್ತು!

2011ನೇ ಸಾಲಿನ ‘ಕರ್ನಾಟಕ ಆಡಳಿತ ಸೇವೆ’ (ಕೆಎಎಸ್) ನೇಮಕಾತಿ ಪ್ರಕ್ರಿಯೆಯನ್ನು ಊರ್ಜಿತಗೊಳಿಸಲು...