ನಾನು ಹಿಂದುಳಿದ ಜಾತಿಗೆ ಸೇರಿದವ ಎಂದು ಗೊತ್ತೇ ಇರಲಿಲ್ಲ: ಸಂಸದ ಯದುವೀರ್

Date:

ಚುನಾವಣೆಗೆ ಮೊದಲು ನನಗೆ ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ. ಮೈಸೂರು ರಾಜ ವಂಶಸ್ಥರು ಹಿಂದುಳಿದ ವರ್ಗಕ್ಕೆ ಸೇರಿದವರು ಎಂಬುದು ನನಗೆ ತಿಳಿದಿರಲಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ನಾನು ಹಿಂದುಳಿದ ವರ್ಗಗಳ ಅಭ್ಯರ್ಥಿ ಎಂಬ ವಿಚಾರದಿಂದ ನನ್ನ ಜಾತಿ ಗೊತ್ತಾಯಿತು ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

- Advertisement -

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಭಾನುವಾರ (ಸೆ.29) ಉಡುಪಿಯ ಕುಂಜಿಬೆಟ್ಟು ಶಾರದ ಕಲ್ಯಾಣ ಮಂಟಪದಲ್ಲಿ ಕರಾವಳಿಯ ಸಾಹಿತಿಗಳು – ಕಲಾವಿದರು – ಲೇಖಕರು – ಕವಿಗಳು – ಚುಟುಕು ಬರಹಗಾರರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ರಾಜವಂಶಸ್ಥರು ಹಿಂದುಳಿದ ವರ್ಗದವರು ಎಂದು ಹೇಳಿದರೆ ಎಲ್ಲರೂ ನಗುತ್ತಾರೆ. ಅದಕ್ಕಾಗಿ ನನಗೆ ಜಾತಿ ಲೆಕ್ಕದಲ್ಲಿ ಅಲ್ಲ, ಎಲ್ಲ ಸಮುದಾಯವನ್ನು ಪ್ರತಿನಿಧಿಸುವ ಸೌಭಾಗ್ಯ ಸಿಕ್ಕಿರುವುದು ಸಂತೋಷ ತಂದಿದೆ. ನಮ್ಮ ದೇಶದಲ್ಲಿ ಒಂದು ರೀತಿಯಲ್ಲಿ ಜಾತಿ ವ್ಯವಸ್ಥೆ ಇರುವುದು ಒಳ್ಳೆಯದಾಗಿದೆ. ಈ ಮೂಲಕ ಭಾರತೀಯ ವೈವಿಧ್ಯತೆಯನ್ನು ಸಂರಕ್ಷಣೆ ಮಾಡಬಹುದಾಗಿದೆ. ಆದರೆ ಇನ್ನೊಂದು ಅರ್ಥದಲ್ಲಿ ಜಾತಿ ಶಾಪವು ಕೂಡ ಆಗಿದೆ. ಇದನ್ನು ಬೇರೆಬೇರೆ ಕಾರಣಗಳಿಂದ ದುರುಪಯೋಗಪಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಜಾತಿಯನ್ನು ಸರಿಯಾದ ದಾರಿಯಲ್ಲಿ ತೆಗೆದುಕೊಂಡು
ಹೋಗಬೇಕಾಗಿರುವುದು ಬಹಳ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಆಸ್ಕರ್ 2025 | ಭಾರತವನ್ನು ಪ್ರತಿನಿಧಿಸಲಿದೆ ‘ಲಾಪತಾ ಲೇಡೀಸ್’

ಭಾರತೀಯ ತತ್ವದಡಿ ಒಗ್ಗೂಡಬೇಕು ನಾವೆಲ್ಲರೂ ಕನ್ನಡ ಭಾಷೆಯ ಮೂಲಕ ಒಗ್ಗಟ್ಟಾಗಿದ್ದೇವೆ. ಇದಕ್ಕೂ ಮುಖ್ಯವಾಗಿ ಭಾರತೀಯರಾಗಿ ಒಗ್ಗಟ್ಟಾಗಿರುವುದು ಬೇಕಾಗಿದೆ. ಪ್ರತಿಯೊಬ್ಬ ಭಾರತೀಯ ಕನ್ನಡಿಗ ಅಲ್ಲ, ಆದರೆ ಪ್ರತಿಯೊಬ್ಬ ಕನ್ನಡಿಗ ಕೂಡ ಭಾರತೀಯ ಎಂಬ ತತ್ವದಡಿಯಲ್ಲಿ ನಾವು ಮುಂದುವರೆಯಬೇಕಿರುವುದು ಇಂದಿನ ಅಗತ್ಯವಾಗಿದೆ. ಕಲಾವಿದರು ರಾಷ್ಟ್ರೀಯತೆ, ಭಾರತದ ನೇತೃತ್ವ ವಹಿಸಿಕೊಂಡು ಕೆಲಸ ಮಾಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ನಮ್ಮ ಕಲೆ, ಪರಂಪರೆ, ಭಾಷೆ ವಿಚಾರದಲ್ಲಿ ಕನ್ನಡದ ಸಾಹಿತ್ಯದ ಪಾತ್ರ ಅತ್ಯಂತ ಅಮೂಲ್ಯವಾಗಿದೆ. ಈ ಪ್ರಾಮುಖ್ಯತೆಯನ್ನು ಗಮನಿಸಿಯೇ ಅಂದು ಮೈಸೂರು ಸಂಸ್ಥಾನದವರಿಂದ ಬೆಂಗಳೂರಿನಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತನ್ನು ರಚಿಸಲಾಯಿತು. ಎಲ್ಲ ಕಾಲಘಟ್ಟದಲ್ಲಿಯೂ ಕಲೆ ಮತ್ತು ಕಲಾವಿದರು ಸಂಸ್ಕೃತಿ, ಭಾಷೆ ಅಸ್ತಿತ್ವ ಉಳಿಯಲು ಮಹತ್ವದ ಕೊಡುಗೆಯಾಗುತ್ತಿದ್ದಾರೆ ಎಂದು ಹೇಳಿದರು

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಕಿರಣ್ ಕೊಡ್ಗಿ, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಈಶ್ವರ ನಾಯಕ್, ದಿನೇಶ್ ಅಮೀನ್, ಶಿಲ್ಪಾ ಸುವರ್ಣ, ವಿಠಲ ಪೂಜಾರಿ, ಈಶ್ವರ್ ನಾಯ್ಕ್, ಪೃಥ್ವಿ ರಾಜ್ ಶೆಟ್ಟಿ, ಸಂಧ್ಯಾ ರಮೇಶ್, ಕಮಲಾಕ್ಷ ಹೆಬ್ಬಾರ್, ಚಂದ್ರ ಪಂಚವಟಿ, ಕುಮಾರ್ ದಾಸ, ರೂಢಫ್ ಡಿ’ಸೋಜಾ, ಎ.ಎನ್. ಮಹಾಂತೇಶ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ದಿನಸಿ ಬೆಲೆ ಏರಿಕೆ ಬರೆ; ಗ್ರಾಮೀಣ ಕುಟುಂಬಗಳ ಬಜೆಟ್‌ಗೆ ಕತ್ತರಿ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...