ನಾನು ಮೊದಲಿಂದಲೂ ಸನಾತನವಾದಿ RSSಗೆ ವಿರುದ್ಧವಾಗಿದ್ದೇನೆ: ಸಿದ್ದರಾಮಯ್ಯ

Date:

ಎಲ್ಲ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSSಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

- Advertisement -

ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

“ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ RSS ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು RSS ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ” ಎಂದರು.

“ನೂರು ವರ್ಷದ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಾಣಕ್ಕೆ ಪ್ರದೇಶ ಕುರುಬರ ಸಂಘದಿಂದ ಬೇಡಿಕೆ ಮತ್ತು ಒತ್ತಾಯ ಬಹಳ ವರ್ಷಗಳಿಂದ ಇತ್ತು. ಈಗ ಎಲ್ಲರನ್ನೂ ಒಪ್ಪಿಸಿ ಹಳೆ ಕಟ್ಟಡ ನೆಲಸಮ‌ ಮಾಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಕೂಡ ಆಗಿದೆ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ 18 ತಿಂಗಳಲ್ಲಿ ನೂತನ‌ ಕಟ್ಟಡ ನಿರ್ಮಾಣ ಆಗಲಿದೆ” ಎಂದು ಹೇಳಿದರು.

“ಹಳೆ ಕಟ್ಟಡದಲ್ಲಿದ್ದ ಹಾಸ್ಟೆಲ್ ನಲ್ಲಿ ಓದಿದವರು ಒಳ್ಳೊಳ್ಳೆ ಅಧಿಕಾರಿಗಳಾಗಿದ್ದಾರೆ. ಜಡ್ಜ್ ಗಳೂ ಆಗಿದ್ದಾರೆ. ನಾನು 1983 ರಲ್ಲಿ ಶಾಸಕನಾಗಿ 1984 ರಲ್ಲಿ ಮಂತ್ರಿ ಆದೆ. ನಾನು ಸಾರಿಗೆ ಮಂತ್ರಿ ಆಗಿದ್ದಾಗ 1988 ರಲ್ಲೇ ಕನಕದಾಸರ 500ನೇ ಜಯಂತ್ಸೋವವನ್ನು ಆಚರಣೆ ಮಾಡಿಸಿದೆ. ಇದೇ ಸಂದರ್ಭದಲ್ಲಿ ಸಮಾಜಕ್ಕೊಂದು ಗುರುಪೀಠ ಬೇಕು ಎಂದು ತೀರ್ಮಾನಿಸಿದೆ. ಆಗ ಸಂಘದ ಕಟ್ಟಡದ ಮೇಲೆ 3 ಕೋಟಿ ರೂಪಾಯಿ ಸಾಲ ಇತ್ತು. ಆ ಸಾಲದ ಸುಳಿಯಿಂದ ಸಂಘವನ್ನು ಬಿಡಿಸಿದ್ದು ನಾವು. ಇದು ಇತಿಹಾಸ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು” ಎಂದರು.

“ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ, ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ” ಎಂದು ಇತಿಹಾಸದ ಘಟನೆಗಳನ್ನು ವಿವರಿಸಿದರು.

“ಸರ್ಕಾರದಿಂದ 600 ಕುರುಬ ಸಮುದಾಯ ಭವನಗಳನ್ನು ಮಾಡಲು ಮುಂದಾಗಿದ್ದು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ದಾವಣಗೆರೆ ಸೇರಿ ರಾಜ್ಯದ ಹತ್ತು ಹಲವು ಕಡೆಗಳಲ್ಲಿ ಸಂಘಕ್ಕೆ ಜಾಗ-ಕಟ್ಟಡ ಉಳಿಸಿಕೊಟ್ಟಿದ್ದೇನೆ. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮಾಡಿದ್ದು ನಾನೇ, ಸಂಗೊಳ್ಳಿ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ನಾನೇ. ಈಗ ನನಗೂ ಮುಕುಡಪ್ಪನಿಗೂ ಆಗುವುದಿಲ್ಲ. ಆದರೆ ಕುರುಬ ಸಮಾಜಕ್ಕೆ ಆಸ್ತಿ ಉಳಿಸಿ, ಬೆಳೆಸುವ ಕಾರ್ಯದಲ್ಲಿ ಮುಕುಡಪ್ಪ ಸೇರಿ ಶಿವಣ್ಣ, ಮಾಸ್ತಿ, ಸಿದ್ದಲಿಂಗಯ್ಯ, ನಾಗಣ್ಣ ರೀತಿಯ ಹಲವರು ಜೊತೆಗೆ ನಿಂತು ಸಹಕಾರ ಮಾಡಿದರು” ಎಂದು ಸ್ಮರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಧಾರಣೆಯಾಗಬೇಕಾದದ್ದು ಜೈಲುಗಳೋ, ರಾಜ್ಯ ಸರ್ಕಾರವೋ?

ಜೀವಬೆದರಿಕೆಯಿಂದ ಸಂಘದ ಚುನಾವಣೆವರೆಗೂ

“ಹಿಂದೆ ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು. ನಾನು ಹೆದರಲಿಲ್ಲ. ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ ಬೆದರಿಕೆ ಇತ್ತು. ಆದರೂ ನಾನು ಹೆದರದೆ ಗ್ರಾಮೀಣ ಭಾಗದ ಸಂಘದ ನಿರ್ದೇಶಕರ ಬೆಂಬಲದಲ್ಲಿ ದಾವಣಗೆರೆಯ ಮಲ್ಲಪ್ಪ ಅವರನ್ನು ರೌಡಿ ಪುಟ್ಟಸ್ವಾಮಿ ವಿರುದ್ಧ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ನಿಲ್ಲಿಸಿದೆ. ಪುಟ್ಟಸ್ವಾಮಿ ನ್ಯಾಯಾಲಯಕ್ಕೆ ಹೋದರೂ ತೀರ್ಪು ನಮ್ಮ ಪರವಾಗಿ ಬಂತು. ಹೀಗೆ ಸಂಘವನ್ನು ನಾನು ಉಳಿಸಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS: ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಆದೇಶ

ರಾಜ್ಯಾದ್ಯಂತ ತೀವ್ರ ಸಂಚಲನ ಹಾಗೂ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ...

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ...

ಇಂದಿನಿಂದ ವಿಶೇಷ ಅಧಿವೇಶನ: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ನಿರ್ಣಯ ಸಾಧ್ಯತೆ

ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಪಾಲಿಗೆ ನುಂಗಲಾರದ ತುತ್ತಾಗಿರುವ 'ಕಸ್ತೂರಿ...

ರಿಯಾಯಿತಿ ನೆಪದಲ್ಲಿ ನಿಯಮ ಉಲ್ಲಂಘನೆ: 16 ಫಾರ್ಮಸಿಗಳ ಲೈಸೆನ್ಸ್ ರದ್ದುಗೊಳಿಸಿದ FDA

ಭಾರಿ ಪ್ರಮಾಣದ ಡಿಸ್ಕೌಂಟ್ (ರಿಯಾಯಿತಿ) ನೀಡಿ ಔಷಧ ಮಾರಾಟ ಮಾಡುತ್ತಿದ್ದ ಹಾಗೂ...