5 ವರ್ಷ ನಾನೇ ಮುಖ್ಯಮಂತ್ರಿ, ನಮ್ಮ ಸರ್ಕಾರ ಕಲ್ಲು ಬಂಡೆ ತರ ಇರುತ್ತದೆ: ಸಿಎಂ ಸಿದ್ದರಾಮಯ್ಯ

Date:

ಐದು ವರ್ಷ ನಾನೇ ಮುಖ್ಯಮಂತ್ರಿ, ನಮ್ಮ ಸರ್ಕಾರ ಕಲ್ಲು ಬಂಡೆ ತರ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

- Advertisement -

ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಬಿರುಸಾಗಿ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹೇಳಿಕೆ ನೀಡಿರುವುದು ಕುತೂಹಲ ಸೃಷ್ಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ನಂದಿಬೆಟ್ಟದಲ್ಲಿ ಬುಧವಾರ ನಡೆಯುತ್ತಿರುವ ಸಚಿವ ಸಂಪುಟ ಸಭೆಗೂ ಮುನ್ನ ನಂದಿ ಗ್ರಾಮದಲ್ಲಿರುವ ಭೋಗನಂದೀಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

“ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುತ್ತೇನೆ. ನಿಮಗೆ ಅನುಮಾನವೇ? ನಮ್ಮ ಸರ್ಕಾರ ಬಂಡೆ ತರ ಭದ್ರವಾಗಿದೆ ನಿಮಗ್ಯಾಕೆ” ಎಂದು ಮಾಧ್ಯಮದವರನ್ನು ಸಿಎಂ ಪ್ರಶ್ನಿಸಿದರು.

‘ರಾಜ್ಯದಲ್ಲಿ ನಾಯಕತ್ವ ಬದಲಾಗಲಿದೆ. ಈ ಸರ್ಕಾರ ಪತನವಾಗಲಿದೆ’ ಎಂಬ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, “ಆರ್‌ ಅಶೋಕ್‌ ಬಾಯಿಗೆ ಬಂದಂಗೆ ಮಾತನಾಡುತ್ತಾರೆ. ಅವರೇನು ನಮ್ಮ ಹೈಕಮಂಡಾ? ಬಿಜೆಪಿ-ಜೆಡಿಎಸ್‌ನವರು ಸುಳ್ಳು ಹೇಳುವುದರಲ್ಲಿ ಪರಿಣಿತರು. ಸತ್ಯ ಹೇಳುವುದು ಅವರಿಗೆ ಗೊತ್ತೇ ಇಲ್ಲ” ಎಂದು ವಾಗ್ದಾಳಿ ನಡೆಸಿದರು.

ಹಿಂದೆ ಬಿಜೆಪಿ-ಕುಮಾರಸ್ವಾಮಿ ಜತೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿ ಏನು ಮಾಡಿದ್ದಾರೆ ಎಲ್ಲವೂ ಗೊತ್ತಿದೆ. ಸುಳ್ಳು ಹೇಳಿಕೊಂಡು ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವನ್ನು ಇವರಿಬ್ಬರು ನಡೆಸಿದ್ದಾರೆ. ಇದನ್ನು ಬಿಟ್ಟರೆ ಇವರು ಇನ್ನೇನೂ ಮಾಡಿಲ್ಲ” ಎಂದು ಕಿಡಿಕಾರಿದರು.

“ಬಿಜೆಪಿಯವರು ಜೆಡಿಎಸ್‌ನವರು ಅಧಿಕಾರದ ಹಗಲುಗನಸು ಕಾಣುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಇವರು ಏನೂ ಮಾಡಲಿಲ್ಲ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳುವ ಹಾಗೆ ಏನು ಮಾಡಿದ್ದಾರೆ ಎಂಬುದರ ಸಾಕ್ಷಿಗುಡ್ಡೆ ಹಾಕಲಿ” ಎಂದರು.

ಜಾತಿಗಣತಿ: ಆನ್ ಲೈನ್ ಮೂಲಕ ಜಾತಿ ನಮೂದಿಸಬಹುದು

“ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ ಆನ್ ಲೈನ್ ಮಾಡಲು ತೊಂದರೆಯಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಗಳು ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ ಅಥವಾ ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟರ ಜಾತಿ/ವರ್ಗ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವರು ಸಾಮಾಜಿಕ ಕಳಂಕ ಇದ್ದರೆ ಆನ್ ಲೈನ್ ನಲ್ಲಿ ಜಾತಿಯ ಹೆಸರನ್ನು ದಾಖಲಿಸಬಹುದು” ಎಂದರು.

ಸಚಿವ ಸ್ಥಾನ :ವರಿಷ್ಠರಿಂದ ಅಂತಿಮ ತೀರ್ಮಾನ

“ಪ್ರಜಾಪ್ರಭುತ್ವದಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು. 142 ಜನ ನಮ್ಮ ಪಕ್ಷದವರಿದ್ದಾರೆ. 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು. ಎಲ್ಲರನ್ನು ಮಾಡಲಾಗುವುದಿಲ್ಲ. ಶೇ.15% ಜನರನ್ನು ಮಾತ್ರ ಮಾಡಬಹುದು” ಎಂದರು.

ರಾಜ್ಯದ ಎಲ್ಲ ಕಂದಾಯ ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ

“ರಾಜ್ಯದ ಎಲ್ಲ ಕಂದಾಯ ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕೆಂದು ತೀರ್ಮಾನಿಸಿ ಗುಲ್ಬರ್ಗಾ, ಮೈಸೂರು, ಬೆಂಗಳೂರು ವಿಭಾಗಗಳಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಇನ್ನು ಕೆಲವೇ ದಿನಗಳಲ್ಲಿ ಬೆಳಗಾವಿ ಹಾಗೂ ವಿಜಯಪುರದಲ್ಲಿ ಕೂಡ ನಡೆಸಲಾಗುವುದು. ಚಿಕ್ಕಬಳ್ಳಾಪುರದಲ್ಲಿ ಬೆಂಗಳೂರು ಕಂದಾಯ ವಿಭಾಗದ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಬಜೆಟ್ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಸಣ್ಣಪುಟ್ಟ ಕೆಲಸಗಳಿದ್ದರೆ ಮಾಡಿ ಕೊಡಲಾಗುವುದು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...