‌2028ಕ್ಕೆ ಮುಖ್ಯಮಂತ್ರಿ ಸ್ಥಾನ ಬೇಡುವೆ: ಸಚಿವ ಸತೀಶ ಜಾರಕಿಹೊಳಿ

Date:

  • ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಅಂತ ಹೇಳಿದ್ದಾರೆ
  • ರಾಜ್ಯದಲ್ಲಿ ಈಗ ಸಿಎಂ ಹುದ್ದೆ ಖಾಲಿ ಇಲ್ಲ: ಸತೀಶ ಜಾರಕಿಹೊಳಿ

ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ನಾನು ಕೂಡ ಬೇಡಿಕೆ ಇಡುತ್ತೇನೆ. ಆದರೆ, ಅದು ಈಗಲ್ಲ, 2028ಕ್ಕೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಅಂತ ಹೇಳಿದ್ದಾರೆ. ಬೇರೆಯವರು ಹೇಳುವ ಅಗತ್ಯವಿಲ್ಲ. ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಬದಲಾವಣೆ ಪರಿಸ್ಥಿತಿ ಉದ್ಭವಿಸಿಲ್ಲ. ಪಕ್ಷದ ತೀರ್ಮಾನವೇ ನನ್ನ ತೀರ್ಮಾನ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮುಖ್ಯಮಂತ್ರಿ ಹುದ್ದೆ ಬೇರೆಯವರು ಕೇಳೋದು ಅವರವರ ಇಷ್ಟ. ನಾನು 2028ರಲ್ಲಿ ಸಿಎಂ ಸ್ಥಾನಕ್ಕೆ ಬೇಡಿಕೆ ಇಡಲು ನಿರ್ಧರಿಸಿದ್ದೇನೆ. ರಾಜ್ಯದಲ್ಲಿ ಈಗ ಸಿಎಂ ಹುದ್ದೆ ಖಾಲಿ ಇಲ್ಲ” ಎಂದು ಹೇಳಿದರು.

ಮುಖ್ಯಮಂತ್ರಿ ಉಪಹಾರ ಕೂಟಕ್ಕೆ ಗೈರು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಅನಾರೋಗ್ಯದ ಕಾರಣ ಸಭೆಗೆ ಹೋಗಲು ಆಗಲಿಲ್ಲ. ಸಭೆಗೆ ಗೈರಾಗುವ ಬಗ್ಗೆ ಸಿಎಂ ಸಿದ್ದರಾಮಯ್ಯ ಗಮನಕ್ಕೂ ತಂದಿದ್ದೆ. ಮೀಟಿಂಗ್​ಗೆ ಹೋಗದಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ” ಎಂದರು.

“ಪ್ರಧಾನಿ ನರೇಂದ್ರ ಮೋದಿಯವರು ರಾಜಕೀಯ ಭಾಷಣ ಮಾಡುತ್ತಾರೆ. ನಮ್ಮ ಪಕ್ಷದಲ್ಲಿ ವಾಕ್ ಸ್ವಾತಂತ್ರ್ಯವಿದೆ. ಭಾರತೀಯ ಜನತಾ ಪಕ್ಷದಲ್ಲಿ ವಾಕ್​ ಸ್ವಾತಂತ್ರ್ಯವಿಲ್ಲ. ಒಂದು ರಾಜ್ಯದಲ್ಲಿ ಇನ್ನೊಂದು ರಾಜ್ಯದ ಬಗ್ಗೆ ಟೀಕಿಸುವುದು ಸಹಜ. ಪ್ರಧಾನಿ ಮೋದಿ ಆರೋಪ ಮಾಡಿದ್ದನ್ನು ಒಪ್ಪಬೇಕು ಅಂತಿಲ್ಲ. ನಾವು ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದೆವು. ನಾವು ಬಿಜೆಪಿ ವಿರುದ್ಧ ಆರೋಪ ಮಾಡಿದಾಗ ಅವರು ಒಪ್ಪಿಕೊಂಡಿದ್ದರಾ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...