ಕೈಗಾರಿಕಾ ಅಭಿವೃದ್ಧಿಗೆ ಬೆಂಗಳೂರು ಹೊರತುಪಡಿಸಿ ಐದು ನಗರ ಗುರುತಿಸಿ: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಸೂಚನೆ

Date:

ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರು ಹೊರತುಪಡಿಸಿ ಬೇರೆ ಐದು ನಗರಗಳನ್ನು ಗುರುತಿಸುವಂತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ಆಗಸ್ಟ್ 6ರಿಂದ ಮುಂಗಾರು ಅಧಿವೇಶನ: ಸಿಎಂ ಡಿ ಕೆ ಶಿವಕುಮಾರ್

ರಾಜ್ಯದ ವಿವಿಧ ನಗರಗಳಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಹೂಡಿಕೆದಾರರಿಗೆ ವಿಶೇಷ ರಿಯಾಯಿತಿ ಸೌಲಭ್ಯಗಳನ್ನು ನೀಡುವ ಮೂಲಕ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಉದ್ದೇಶಿಸಲಾಗಿದೆ. ಇದಕ್ಕೆ ವಿಮಾನ ನಿಲ್ದಾಣ ಮತ್ತಿತರ ಮೂಲಸೌಕರ್ಯ ಹೊಂದಿರುವ ಸೂಕ್ತ ಐದು ನಗರಗಳನ್ನು ಗುರುತಿಸುವಂತೆ ತಿಳಿಸಿದರು.

ಕೈಗಾರಿಕೋದ್ಯಮಗಳ ಸ್ಥಾಪನೆಗೆ ಏಕಗವಾಕ್ಷಿ ಅನುಮೋದನೆಯ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಸಂಬಂಧಿಸಿದ ಎಲ್ಲ ಇಲಾಖೆಗಳಿಗೆ ನಿಗದಿತ ಕಾಲ ಮಿತಿಯೊಳಗೆ ಅನುಮೋದನೆ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ ನೀಡಿದರು. ಈ ಕುರಿತು ಆಯಾ ಇಲಾಖಾ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಈ ವ್ಯವಸ್ಥೆಯಲ್ಲಿ 22 ಇಲಾಖೆಗಳು ಹಾಗೂ 119 ಸೇವೆಗಳನ್ನು ಸಂಯೋಜಿಸಲಾಗಿದ್ದು, ಡಿಜಿಟಲ್ ಹಾಗೂ ಸಮಯೋಚಿತ ಅನುಮೋದನೆಗೆ ಒತ್ತು ನೀಡಲಾಗಿದೆ. ನೀತಿ ಆಯೋಗದ ಹೂಡಿಕೆದಾರ ಸ್ನೇಹಿ ಸೂಚ್ಯಂಕದಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದೆ. ಇದನ್ನು ಇನ್ನಷ್ಟು ಉತ್ತಮ ಪಡಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಆಂಧ್ರಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು ಹಾಗೂ ಮಧ್ಯಪ್ರದೇಶ ಮತ್ತಿತರ ರಾಜ್ಯಗಳಲ್ಲಿ ಹೂಡಿಕೆ ಆಕರ್ಷಿಸಲು ಕೈಗೊಳ್ಳುತ್ತಿರುವ ಕ್ರಮಗಳ ಕುರಿತೂ ಸಿಎಂ ಚರ್ಚಿಸಿದರು. ಹೂಡಿಕೆದಾರರು ರಾಜ್ಯದಿಂದ ಅಪೇಕ್ಷಿಸುವ ಸುಧಾರಣೆಗಳ ಕುರಿತು ಸಮಾಲೋಚಿಸಿದರು.

ಇದನ್ನೂ ಓದಿ: ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: ಕೇಂದ್ರಕ್ಕೆ ಸಿಎಂ ಡಿಕೆಶಿ ಒತ್ತಾಯ

ಉತ್ಪಾದನಾ ವಲಯ ಹೂಡಿಕೆಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ

ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ತಯಾರಿಕಾ ವಲಯದಲ್ಲಿ 5.58 ಲಕ್ಷ ಕೋಟಿ ರೂ. ಹೂಡಿಕೆ ಆಕರ್ಷಿಸುವ ಮೂಲಕ ಮೂರನೇ ಸ್ಥಾನದಲ್ಲಿದೆ. ಸೆಮಿಕಂಡಕ್ಟರ್ಸ್, ಏರೋಸ್ಪೇಸ್ & ಡಿಫೆನ್ಸ್, ಕ್ಲೀನ್ ಮೊಬಿಲಿಟಿ/ ಸೆಲ್ ಉತ್ಪಾದನೆ, ಇತರ ಉದಯೋನ್ಮುಖ ವಲಯಗಳಲ್ಲಿ ಹೂಡಿಕೆಗೆ ವಿಶೇಷ ಉತ್ತೇಜನ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ರಾಜ್ಯದಲ್ಲಿ ಉತ್ಪಾದನಾ ವಲಯವನ್ನು ಇನ್ನಷ್ಟು ಸುಧಾರಿಸಲು “ಉತ್ಪಾದನಾ ಮಂಥನ” ಎಂಬ ಸಮಾಲೋಚನಾ ಸಭೆಯಲ್ಲಿ 80 ಸಿಇಓಗಳೊಂದಿಗೆ ಚರ್ಚಿಸಲಾಯಿತು. ಸಭೆಯಲ್ಲಿ ಸ್ವೀಕರಿಸಲಾದ 55 ಸಲಹೆಗಳಲ್ಲಿ 35 ಸಲಹೆಗಳನ್ನು ಈಗಾಗಲೇ ಬಗೆಹರಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಸಿಎಂ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...