ವಕ್ಫ್‌ ಆಸ್ತಿ | ರೈತರಿಗೆ ನೋಟಿಸ್ ಕೊಟ್ಟಿದ್ದರೆ ತಕ್ಷಣ ವಾಪಸ್‌: ಸಚಿವ ಜಮೀರ್

Date:

Advertisements

ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿದ್ದರೆ ಅದನ್ನು ತಕ್ಷಣ ಹಿಂದಕ್ಕೆ ಪಡೆಯಲಾಗುವುದು, ರೈತರ ಜಮೀನನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಕ್ಫ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ವಿಜಯನಗರದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ವಿಜಯಪುರದಲ್ಲಿ 1,200 ಎಕರೆ ಜಮೀನು ವಕ್ಫ್‌ ಪಾಲಾಗುತ್ತದೆ ಎಂದು ಗುಲ್ಲೆಬ್ಬಿಸಿದರು, ಅಲ್ಲಿ ವಕ್ಫ್’ಗೆ ಸೇರಿದ 11 ಎಕರೆ ಜಮೀನಷ್ಟೇ ಇದೆ ಎಂದರು. 

ರೈತರ ಜಮೀನನ್ನು ವಕ್ಫ್ ಆಸ್ತಿ ಎಂದು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಸಚಿವರು ಹೇಳಿದರು ಎಂದು ಅಧಿಕಾರಿಗಳು ಸಹ ಅದನ್ನು ಮಾಡಲು ಸಾಧ್ಯವಿಲ್ಲ’ ಎಂದು ಅವರು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಲೆಕೇರಿ ಬಹುಕೋಟಿ ಹಗರಣದತ್ತ ಮಾಧ್ಯಮಗಳ ಮೌನವೇಕೆ?

‘ವಕ್ಫ್ ಬಳಿ 1.12 ಲಕ್ಷ ಎಕರೆ ಜಮೀನಿದೆ. ಅದೆಲ್ಲವೂ ದಾನಿಗಳು ಕೊಟ್ಟಂತಹ ಜಮೀನು ಹೊರತು ಸರ್ಕಾರ ಕೊಟ್ಟಿದ್ದಲ್ಲ. ರೈತರಿಗೆ ಯಾವ ಕಾರಣಕ್ಕೂ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ. ರೈತರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರೆ ಚಿಂತೆಯೇ ಬೇಡ, ಆ ಜಮೀನನ್ನು ಸ್ವಾಧೀನಕ್ಕೆ ಪಡೆಯುವುದಿಲ್ಲ. ನೋಟಿಸ್ ನೀಡಿದ್ದರೆ ಅದನ್ನು ಹಿಂದಕ್ಕೆ ಪಡೆಯಲಾಗುವುದು’ ಎಂದು ಸಚಿವರು ಪುನುರುಚ್ಚರಿಸಿದರು.

‘ವಕ್ಫ್ ಆಸ್ತಿ ಸಂಬಂಧ ನೋಟಿಸ್ ಕೊಡುವುದು ಈಗ ನಡೆದಿರುವ ಬೆಳವಣಿಗೆ ಅಲ್ಲ, ಬಿಜೆಪಿ ಅಧಿಕಾರ ಅವಧಿಯಲ್ಲಿ ಸಾವಿರಾರು ನೋಟಿಸ್‌ಗಳನ್ನು ನೀಡಲಾಗಿತ್ತು. ಅದನ್ನು ಮರೆಮಾಚಿ, ಈಗ ರಾಜಕೀಯ ಕಾರಣಕ್ಕಾಗಿ ವಿಷಯ ಎತ್ತಿದ್ದಾರೆ’ ಎಂದು ಜಮೀರ್ ಆರೋಪಿಸಿದರು.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣಾ ತುಕಾರಾಂ ಅವರು 30 ಸಾವಿರದಿಂದ 40 ಸಾವಿರ ಮತಗಳ
ಅಂತರದಲ್ಲಿ ಗೆಲುವು ಸಾಧಿಸುವುದು ನಿಶ್ಚಿತ. ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ವಿವಿಧ ಕಾಮಗಾರಿಗಳಿಗೆ ₹1,618 ಕೋಟಿ ಅನುದಾನ ಮಂಜೂರು ಮಾಡಿದೆ. ತುಕಾರಾಂ ಅವರ ಕೆಲಸವೇ ಅವರನ್ನು ಕೈ ಹಿಡಿಯಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X