ಲೋಕಸಭೆಗೆ ಜನರು ನಿಂತುಕೊಳ್ಳಿ ಎಂದರೆ ಯತೀಂದ್ರ ನಿಂತುಕೊಳ್ಳುತ್ತಾರೆ: ಸಿದ್ದರಾಮಯ್ಯ

Date:

“ಮೈಸೂರು ಲೋಕಸಭೆ ಚುನಾವಣೆಯಲ್ಲಿ ಪುತ್ರನನ್ನು ಗೆಲ್ಲಿಸಲು ಸಿದ್ದರಾಮಯ್ಯ ಅವರು ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ ರೂಪಿಸಿದ್ದಾರೆ” ಎಂದು ಆರೋಪಿಸಿರುವ ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರಿಗೆ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ನಾನು ನನ್ನ ಮಗ ಯತೀಂದ್ರ ಅವರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸಲು ಹೋಗಲ್ಲ. ಆದರೆ, ಜನರು ನಿಂತುಕೊಳ್ಳಿ ಎಂದರೆ ಅವರೇ ನಿಂತುಕೊಳ್ಳುತ್ತಾರೆ. ಲೆಹರ್ ಸಿಂಗ್ ಸಿರೋಯಾ ಅವರು ಮೊದಲು ಸಂಸತ್‌ ನಲ್ಲಿ ಆದ ಭದ್ರತಾ ಲೋಪದ ಬಗ್ಗೆ ತಲೆಕೆಡಿಸಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

“ಮಹಿಳೆಯನ್ನು ಬೆತ್ತಲೆಗೊಳಿಸಿರುವ ಪ್ರಕರಣದ ಬಗ್ಗೆ ಕಾನೂನು ರೀತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕು ಅದನ್ನೆಲ್ಲ ತೆಗೆದುಕೊಂಡಿದ್ದೇವೆ. ನಮ್ಮ ಗೃಹ ಸಚಿವರು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹೋಗಿ ಭೇಟಿ ನೀಡಿದ್ದಾರೆ. ಪರಿಹಾರವೂ ಕೊಟ್ಟಿದ್ದೇವೆ” ಎಂದು ತಿಳಿಸಿದರು.

“ಜೆ ಪಿ ನಡ್ಡಾ ಮತ್ತು ಬಿಜೆಪಿಯವರು ಮಹಿಳಾ ವಿವಸ್ತ್ರ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಹೊರಟಿದ್ದಾರೆ. ಅವರ ಕಾಲದಲ್ಲಿ ಎನ್‌ಸಿಬಿ (ನ್ಯಾಷನಲ್‌ ಕ್ರೈಮ್‌ ಬ್ಯೂರೊ ತೆಗೆದುನೋಡಿ ಎಷ್ಟು ಮಹಿಳೆಯರ ಮೇಲೆ ದೌರ್ಜನ್ಯ ಆಗಿದೆ ಎಂಬುದು ಗೊತ್ತಾಗುತ್ತದೆ” ಎಂದು ಹರಿಹಾಯ್ದರು.

ಉತ್ತರ ಪ್ರದೇಶಶ ಬಿಜೆಪಿ ಶಾಸಕನಿಗೆ ಜೈಲು ಆಗಿದೆ. ಬಿಜೆಪಿ ಎಂಎಲ್‌ಎ 9 ವರ್ಷದ ಹುಡುಗಿ ಮೇಲೆ ಅತ್ಯಾಚಾರ ಮಾಡಿದ್ದ. ಇದಕ್ಕೆ ನಡ್ಡಾ ಏನು ಹೇಳುತ್ತಾರೆ? ಪ್ರಲ್ಹಾದ್‌ ಜೋಶಿ ಏನು ಹೇಳುತ್ತಾರೆ? ಮಹಿಳೆಯ ವಿವಸ್ತ್ರ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದರು.

“ಜಾತಿ ಗಣತಿ ವರದಿಯೇ ಬಂದಿಲ್ಲ. ಎಲ್ಲರೂ ಊಹೆ ಮೇಲೆ ಮಾತನಾಡುತ್ತಿದ್ದಾರೆ. ಮುಂದೆ ನೋಡೋಣ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...