ಕಾಂಗ್ರೆಸ್‌ನವರಿಗೆ ಬದ್ಧತೆ ಇದ್ದರೆ, ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡಲಿ: ಬೊಮ್ಮಾಯಿ ಆಗ್ರಹ

Date:

ಕಾಂಗ್ರೆಸ್‌ನವರು 2013 ರಿಂದ ನ್ಯಾ. ಸದಾಶಿವ ಆಯೊಗದ ವರದಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳುತ್ತ ಬಂದಿದ್ದಾರೆ. ಇವರಿಗೆ ಬದ್ಧತೆ ಇದ್ದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಬೆಂಗಳೂರಿನ ಉತ್ತರಾದಿ ಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಜಯಶ್ರೀ ಅರವಿಂದ ಅವರು ಸಂಗೀತ ಸಂಯೋಜನೆ ಮಾಡಿರುವ ಶ್ರೀರಾಮನ ಕುರಿತ ಗೀತೆಗಳ ಧ್ವನಿ ಸುರಳಿಯನ್ನು ಬಿಡುಗಡೆ ಮಾಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

“ಸದಾಶಿವ ಆಯೋಗದ ವರದಿ ಜಾರಿ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಮೊದಲಿನಿಂದಲೂ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಸಂವಿಧಾನ ತಿದ್ದುಪಡಿ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಹೇಳುತ್ತಾರೆ. ಇನ್ನೊಂದೆಡೆ ಸದಾಶಿವ ಆಯೋಗದ ವರದಿಯನ್ನು ತಾವೇ ಜಾರಿ ಮಾಡುವುದಾಗಿ ಹೇಳುತ್ತಾರೆ. ಇವರಿಗೆ ಬದ್ಧತೆ ಇದ್ದರೆ, ಸದಾಶಿವ ಆಯೋಗದ ವರದಿ ಜಾರಿ ಮಾಡಿ, ಒಳಮೀಸಲಾತಿ ಆಧಾರದಲ್ಲಿ ನೇಮಕಾತಿ ಹಾಗೂ ಭಡ್ತಿ ನೀಡಲಿ” ಎಂದು ಆಗ್ರಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

ಈ ಸುದ್ದಿ ಓದಿದ್ದೀರಾ? ಕರ್ನಾಟಕ ವಿಶ್ವದಲ್ಲಿಯೇ 4ನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್‌: ಸಿಎಂ ಸಿದ್ದರಾಮಯ್ಯ

ಕೇಂದ್ರದಿಂದ ಅನುದಾನದ ಬರುತ್ತಿಲ್ಲ ಎಂದು ಆರೋಪಿಸಿರುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಕೇಂದ್ರದಿಂದ ಅನುದಾನ ಕುರಿತು ರಾಜ್ಯದ ವಿಚಾರಗಳಿಗೆ ಕಾಂಗ್ರೆಸ್ ತಿರುಚುವ ಕೆಲಸ ಮಾಡುತ್ತಿದೆ. ಅವರು ಬಹಿರಂಗ ಚರ್ಚೆಗೆ ಪ್ರಧಾನಿಗೆ ಆಹ್ವಾನ ಕೊಟ್ಟಿರುವುದಕ್ಕೆ ನಾವು ಉತ್ತರ ಕೊಟ್ಟಿದ್ದೇವೆ.
ಮೋದಿಯವರು ಬಹಳ ದೊಡ್ಡ ಕೆಲಸ ಮಾಡಿದ್ದಾರೆ. 14 ನೇ ಹಣಕಾಸಿಗಿಂತ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯಕ್ಕೆ 1 ಲಕ್ಷ ಕೋಟಿ ರೂ. ಹೆಚ್ಚಿಗೆ ಬಂದಿದೆ. ಕೇವಲ ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ 62 ಲಕ್ಷ ಜನರಿಗೆ ಪ್ರಯೋಜನವಾಗಿದೆ” ಎಂದರು.

“ಕಾಂಗ್ರೆಸ್ ಅವಧಿಯಲ್ಲಿ ಆ ಯೋಜನೆಯನ್ನು ಅಳವಡಿಸಿಕೊಳ್ಳಲು ಹಿಂದೇಟು ಹಾಕಿದ್ದರು. ನಂತರ ಯೋಜನೆ ಒಳ್ಳೆಯದಿದೆ ಅಂತ ಒಪ್ಪಿಕೊಂಡರು. ಇವರು ಮೊದಲು ಕೇಂದ್ರದ ಯೋಜನೆಗಳಿಗೆ ರಾಜ್ಯದ ಪಾಲು ಬಿಡುಗಡೆ ಮಾಡಬೇಕು. ಕೆಲವು ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿವೆ. ಹೀಗಾಗಿ ಇವರು ರಾಜ್ಯಕ್ಕೆ ಕಡಿಮೆ ಅನುದಾನ ಬರುತ್ತಿದೆ ಎಂದು ದಾರಿ ತಪ್ಪಿಸುತ್ತಿದ್ದಾರೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾಗೆ ಚಾಲನೆ | ಚುನಾಯಿತ ಸರ್ಕಾರಗಳನ್ನು ಉರುಳಿಸುವ ದುರ್ಬುದ್ಧಿ ಬಾರದಿರಲಿ; ಚಾಮುಂಡಿ ದೇವಿಗೆ ಹಂಪನಾ ಪ್ರಾರ್ಥನೆ

ವಿಶ್ವವಿಖ್ಯಾತ ಮೈಸೂರು ದಸರಾಗೆ ಗುರುವಾರ ಅದ್ಧೂರಿ ಚಾಲನೆ ದೊರೆಯಿತು. ಖ್ಯಾತ ಸಾಹಿತಿ...

ಮೈಸೂರು | ಸಿಎಂ ಸಿದ್ದರಾಮಯ್ಯ ಪರ ಜಿಟಿಡಿ ಅಬ್ಬರ; ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ

ಆಪಾದಿತ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸುತ್ತಿರುವ...

ಮೈಸೂರು ದಸರಾದಲ್ಲೂ ಕೋಮು ದ್ವೇಷ; ದೀಪಾಲಂಕಾರಕ್ಕೂ ಬಿಜೆಪಿ ಅಪಸ್ವರ

ಮೈಸೂರು ದಸರಾ ಸಮಯದಲ್ಲಿ ಬಿಜೆಪಿ ನಿರಂತರವಾಗಿ ವಿವಾದ ಹುಟ್ಟುಹಾಕುತ್ತಲೇ ಇದೆ. ಈ...

50 ಕೋಟಿ ರೂ.ಗಾಗಿ ಜೀವ ಬೆದರಿಕೆ: ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಜೆಡಿಎಸ್‌ ನಾಯಕ ದೂರು

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ...