ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ: ಹಿರಿಯ ಸಾಹಿತಿ ಲಲಿತಾ ನಾಯ್ಕ್

Date:

SIR ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ ಎಂದು ಮೌನವಾಗಿ ಕುಳಿತಿರುವ ಜನ ಕಾರಣವೇ ಎಂಬ ಪ್ರಶ್ನೆಯನ್ನು ನಾವೆಲ್ಲರೂ ಕೇಳಿಕೊಳ್ಳಬೇಕಿದೆ ಎಂದು ಹಿರಿಯ ಸಾಹಿತಿ ಹಾಗೂ ಮಾಜಿ ಸಚಿವೆ ಬಿ ಟಿ ಲಲಿತಾ ನಾಯ್ಕ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಸ್‌ಐಆರ್‌ (SIR) ವಿರೋಧಿಸಿ ಪ್ರಜಾತಾಂತ್ರಿಕ ಹಕ್ಕುಗಳಿಗಾಗಿ ನಡೆದ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಇಲ್ಲಿ ನೆರೆದಿರುವ ನಮ್ಮೆಲ್ಲರಿಗೂ ಈ ಸಮಸ್ಯೆಯ ತೀವ್ರತೆ ಗೊತ್ತಿದೆ. ನಮ್ಮ ಮೂಲಕ ಈ ಆತಂಕದ ವಿಚಾರ ರಾಜ್ಯದ ಪ್ರತಿ ಮನೆಗೂ ತಲುಪಬೇಕಿದೆ. ಮತದಾನದ ಮಹತ್ವ ನಮಗೆ ತಿಳಿದಿದೆ. ಆದರೆ, ಮತ ಹಾಕದಂತೆ ಅಡ್ಡಿಪಡಿಸುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ. ಕಡುಬಡವರ ಬಳಿ ಇಲ್ಲದ ದಾಖಲೆಗಳನ್ನು ಕೇಳುವ ಮೂಲಕ ಅವರನ್ನು ಮತದಾನಕ್ಕೆ ಅಯೋಗ್ಯರು ಎಂದು ಬಿಂಬಿಸಲಾಗುತ್ತಿದೆ. ನಾಗರಿಕ ಸಮಾಜದ ಒಬ್ಬ ವ್ಯಕ್ತಿಯಾಗಿ ತನ್ನ ಹಕ್ಕು ಚಲಾಯಿಸಲು ಸಾಧ್ಯವಾಗದ ಸ್ಥಿತಿ ಎದುರಾಗಿದೆ. SIRನ ಅನಾಹುತಗಳು ಕೇವಲ ಒಬ್ಬರ ಸಮಸ್ಯೆಯಲ್ಲ, ಇದು ಇಡೀ ರಾಜ್ಯದ ಅಸ್ತಿತ್ವದ ಪ್ರಶ್ನೆಯಾಗಿದೆ ಎಂಬುವುದನ್ನು ನಾವು ಗಂಭೀರವಾಗಿ ಅರ್ಥ ಮಾಡಿಕೊಳ್ಳಬೇಕು” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮತದಾರರ ಹಕ್ಕುಗಳನ್ನು ಉಳಿಸಿಕೊಳ್ಳಲು ಆಯೋಜಿಸಲಾದ ಈ ಸಮಾವೇಶದ ಉದ್ದೇಶವನ್ನು ಎಲ್ಲರೂ ಅರಿತು ಸೂಕ್ತವಾಗಿ ಸ್ಪಂದಿಸಬೇಕಿದೆ ಎಂದು ಅವರು ಕರೆ ನೀಡಿದರು. ಇದೇ ವೇಳೆ ಮಾಧ್ಯಮಗಳ ಜವಾಬ್ದಾರಿಯನ್ನು ನೆನಪಿಸಿದ ಅವರು, “ಮಾಧ್ಯಮಗಳು ಮನಸ್ಸು ಮಾಡಿದರೆ SIRನ ಅಪಾಯಗಳನ್ನು ಹಳ್ಳಿ-ಹಳ್ಳಿಗಳಿಗೂ ತಲುಪಿಸಬಲ್ಲವು. ಈ ವಿಷಯದಲ್ಲಿ ಮಾಧ್ಯಮದವರು ಹೆಚ್ಚಿನ ಕಾಳಜಿ ವಹಿಸಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಮತದಾನ ನಮ್ಮ ಜನ್ಮಸಿದ್ದ ಹಕ್ಕು, SIR ಒಪ್ಪುವುದಿಲ್ಲ: ಪೀಟರ್ ಮಚಾಡೋ

“ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸುವ ಭರವಸೆಯನ್ನು ನೀಡಬೇಕು. ಸರ್ಕಾರ ನಮಗೆ ತಾಯಿಯಂತೆ ಜೊತೆ ನಿಲ್ಲಬೇಕು. ಪ್ರಜಾಪ್ರಭುತ್ವದಲ್ಲಿ ನಾವು ನಂಬಿರುವುದು ಸರ್ಕಾರ ಮತ್ತು ನ್ಯಾಯಾಂಗವನ್ನು ಮಾತ್ರ. ಅವರೇ ನಮ್ಮನ್ನು ಕೈಬಿಟ್ಟರೆ ನಾವು ಅನಾಥರಾಗುತ್ತೇವೆ. ಹಾಗಾಗಿ, ಜನರಿಗೆ ಈಗ ಸರ್ಕಾರದ ಬೆಂಬಲದ ಅವಶ್ಯಕತೆ ಇದೆ. ಪ್ರಜೆಗಳು ಪ್ರಾಮಾಣಿಕವಾಗಿ ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ಮುಂದುವರಿಸಬೇಕು” ಎಂದು ಲಲಿತಾ ನಾಯ್ಕ್ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...