ಹೈಕಮಾಂಡ್ ಕರೆದರೆ ನಾನು, ಸಿದ್ದರಾಮಯ್ಯ ಹೋಗುತ್ತೇವೆ: ಡಿ ಕೆ ಶಿವಕುಮಾರ್

Date:

ಹೈಕಮಾಂಡ್ ನಾಯಕರು ದಿಲ್ಲಿಗೆ ಕರೆದರೆ ಹೋಗುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

- Advertisement -

ಅವರು ವಿಧಾನಸೌಧದ ಬಳಿ ಕೇಳಿದಾಗ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದಿಲ್ಲಿಗೆ ಕರೆದು ಚರ್ಚೆ ಮಾಡುತ್ತೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ಹೈಕಮಾಂಡ್ ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆದರೆ ನಾವು ಮಾತನಾಡಿಕೊಂಡು ದೆಹಲಿಗೆ ಹೋಗುತ್ತೇವೆ” ಎಂದರು.

ಇದುವರೆಗೂ ಕರೆದಿಲ್ಲ:

“ಇದುವರೆಗೂ ಯಾರೂ ನನ್ನನ್ನು ದೆಹಲಿಗೆ ಕರೆದಿಲ್ಲ. ಇಂದಿರಾ ಗಾಂಧಿ ಅವರು ಆರಂಭಿಸಿದ ಅಂಗನವಾಡಿ ಯೋಜನೆಯ 50 ವರ್ಷದ ಕಾರ್ಯಕ್ರಮವಿದೆ. ಮುಂಬೈನಲ್ಲಿ ನನಗೆ ಖಾಸಗಿ ಕಾರ್ಯಕ್ರಮವಿದ್ದು, ಅಲ್ಲಿಗೆ ಹೋಗಿ ಇಂದೇ (ಗುರುವಾರ) ಮರಳುತ್ತೇನೆ” ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್​​ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಿಮಿಸಿದೆ.

ಮುಖ್ಯಮಂತ್ರಿ ಹುದ್ದೆಯ ವಿವಾದವನ್ನು ಶೀಘ್ರದಲ್ಲೇ ಇತ್ಯರ್ಥಪಡಿಸಲಾಗುವುದು. ಈ ಸಂಬಂಧ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ನಾನು ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...