ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

Date:

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು ಹೋರಾಟಕ್ಕೆ ಮುಂದಾಗಬೇಕು ಎಂದು ಸಾಮಾಜಿಕ ಹೋರಾಟಗಾರ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ ನೀಡಿದರು.

- Advertisement -

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯಿಂದ ಮತಗಳನ್ನು ಅಳಿಸುವ ವಿಚಾರವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

“ಪ್ರಧಾನಮಂತ್ರಿ ವೋಟ್ ಚೋರ್ (ಮತ ಕಳ್ಳ). ಮತಗಳನ್ನು ಅಳಿಸಿ ಪ್ರಧಾನಿಯಾಗಿದ್ದಾರೆ. ಮತಗಳನ್ನು ಅಳಿಸುವ ಮೂಲಕ ದೇಶದ ಪ್ರಜಾಪ್ರಭುತ್ವದ ಸಾವಿಗೆ ಕಾರಣರಾಗಿದ್ದಾರೆ. ಇದರ ಹಂತಕ ನರೇಂದ್ರ ಮೋದಿ” ಎಂದು ಅಭಿಜೀತ್ ದೀಪ್ಕೆ ಆರೋಪಿಸಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಮತದಾರರ ಪಟ್ಟಿಯಿಂದ ಮತಗಳನ್ನು ಅಳಿಸುವ ಪ್ರಕ್ರಿಯೆ ದೇಶದಾದ್ಯಂತ ನಡೆಯುತ್ತಿದೆ. ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎಂದು ದೂರಿದರು. “ಯಾರು ಅವರಿಗೆ ಮತ ಹಾಕುವುದಿಲ್ಲವೋ ಅವರ ಮತಗಳನ್ನು ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ” ಎಂದು ಹೇಳಿದರು.

ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಜವಾಹರಲಾಲ್ ನೆಹರು ಅವರ ಕೊಡುಗೆಗಳನ್ನು ಸ್ಮರಿಸಿದ ದೀಪ್ಕೆ, “ಗಾಂಧಿ ದೇಶದ ಆತ್ಮ, ಬಾಬಾಸಾಹೇಬರು ದೇಶದ ಬೆನ್ನೆಲುಬು, ನೆಹರು ದೇಶದ ಮನಸ್ಸು” ಎಂದು ಬಣ್ಣಿಸಿದರು.

ಸ್ವಾತಂತ್ರ್ಯಾನಂತರ ದೇಶದ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದ ಸಂವಿಧಾನಾತ್ಮಕ ವ್ಯವಸ್ಥೆಯನ್ನು ಉಲ್ಲೇಖಿಸಿದ ಅವರು, ಇಂದು ಅದೇ ಮತದಾನದ ಹಕ್ಕನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ “ವೋಟ್ ಚೋರ್, ಗದ್ದಿ ಛೋಡ್” ಎಂಬ ಘೋಷಣೆ ಮೊಳಗಿತು.

dipke1 1
ಮತದಾನದ ಹಕ್ಕು ಕಳೆದುಕೊಂಡವರೊಂದಿಗೆ ಅಭಿಜೀತ್ ದೀಪ್ಕೆ

ಒಂದು ದೇಶ, ಒಂದು ಚುನಾವಣೆ ವಿಚಾರವನ್ನು ಪ್ರಸ್ತಾಪಿಸಿದ ಅಭಿಜೀತ್ ದೀಪ್ಕೆ, “ಒಂದು ದೇಶ, ಒಂದು ಚುನಾವಣೆ ಎಂಬುದು ಕೇವಲ ಘೋಷಣೆಯಲ್ಲ. ಅದರ ಹಿಂದೆ ಒಂದು ದೇಶ, ೊಂದು ಪಕ್ಷ ಎಂಬ ಉದ್ದೇಶವಿದೆ” ಎಂದು ಆರೋಪಿಸಿದರು. ಇದೇ ವೇಳೆ ಹಿಟ್ಲರ್‌ನ ರಾಜಕೀಯ ಮಾದರಿಯೊಂದಿಗೆ ಕೇಂದ್ರ ಸರ್ಕಾರದ ಆಡಳಿತ ಮಾದರಿಯನ್ನು ಹೋಲಿಕೆ ಮಾಡಿದರು. ಮೋದಿ ಸರ್ಕಾರ ಇತಿಹಾಸದಿಂದ ಪಾಠ ಕಲಿಯಬೇಕು ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಡೆದ ಸ್ಥಾನಗಳನ್ನೂ ಪ್ರಸ್ತಾಪಿಸಿದ ಅವರು, ಚುನಾವಣೆಯಲ್ಲಿ ಮತಗಳ ವ್ಯತ್ಯಾಸ ಕಡಿಮೆಯಾಗಿದ್ದರೂ ಸ್ಥಾನಗಳ ಸಂಖ್ಯೆ ಗಣನೀಯವಾಗಿತ್ತು ಎಂದು ಹೇಳಿದರು. ಕೆಲವು ಕ್ಷೇತ್ರಗಳಲ್ಲಿ ಅಲ್ಪ ಮತಗಳ ಅಂತರದಿಂದ ಫಲಿತಾಂಶ ಬದಲಾಗಿದೆ ಎಂದು ಉಲ್ಲೇಖಿಸಿ, ಮತದಾರರ ಪಟ್ಟಿಯಲ್ಲಿ ನಡೆಯುತ್ತಿರುವ ಬದಲಾವಣೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

“ಪ್ರಾದೇಶಿಕ ನಾಯಕರನ್ನು ದುರ್ಬಲಗೊಳಿಸುವುದು ಮತ್ತು ಸಂಸ್ಥೆಗಳನ್ನು ಹಾಳು ಮಾಡುವುದು ಇವರ ಉದ್ದೇಶ” ಎಂದು ಆರೋಪಿಸಿದ ಅವರು, ಯಾವುದೇ ಕಾರಣಕ್ಕೂ ಪ್ರಜಾಪ್ರಭುತ್ವ ವಿರೋಧಿ ಪ್ರಯತ್ನಗಳಿಗೆ ಅವಕಾಶ ನೀಡಬಾರದು ಎಂದರು.

“ದೇಶ ಉಳಿಯುವುದು ಮತ ಉಳಿದರೆ ಮಾತ್ರ. ಮತ ಹೋದರೆ ನಾವು ಎಲ್ಲವನ್ನೂ ಕಳೆದುಕೊಳ್ಳಬೇಕಾಗುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ನಾವೆಲ್ಲರೂ ರಸ್ತೆಗಿಳಿಯಬೇಕಾಗುತ್ತದೆ” ಎಂದು ಹೇಳಿದರು.

ದಕ್ಷಿಣ ಭಾರತದ ರಾಜ್ಯಗಳ ಕ್ಷೇತ್ರ ಪುನರ್‌ವಿಂಗಡಣೆ (ಡಿಲಿಮಿಟೇಶನ್) ಕುರಿತ ಆತಂಕವನ್ನೂ ವ್ಯಕ್ತಪಡಿಸಿದ ಅವರು, ಭವಿಷ್ಯದಲ್ಲಿ ದಕ್ಷಿಣ ಭಾರತದ ಲೋಕಸಭಾ ಸ್ಥಾನಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಕೊನೆಯಲ್ಲಿ, “ಈಗ ರಸ್ತೆಗಳು ನಮ್ಮವು. ಇದೇ ರಸ್ತೆಗಳಿಂದ ನಮ್ಮ ಪ್ರಜಾಪ್ರಭುತ್ವವನ್ನು ಮರಳಿ ಪಡೆಯುತ್ತೇವೆ” ಎಂದು ಕರೆ ನೀಡಿದ ಅವರು, ಹೋರಾಟ ಮುಂದುವರಿಸುವುದಾಗಿ ಘೋಷಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...

ಬೀದರ್‌ | ಜಿಲ್ಲಾ ಪಂಚಾಯತಿ 34, ತಾಲೂಕು ಪಂಚಾಯತಿ 123 ಸ್ಥಾನಗಳಿಗೆ ಮೀಸಲಾತಿ ಪ್ರಕಟ

ರಾಜ್ಯ ಸರ್ಕಾರವು ಬೀದರ್ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲೆಯ ಎಂಟು ತಾಲ್ಲೂಕು...