ವಿಜ್ಞಾನ ಓದಿಯೂ ಮೌಢ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Date:

ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

- Advertisement -

ಬೆಂಗಳೂರಿನ ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಾಮಾಯಣ ಬರೆದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ ದಿಕ್ಕಿನಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ಸಮಾಜವನ್ನು ಮುನ್ನಡೆಸಬೇಕು ಎಂದು ಕರೆ ನೀಡಿದರು.

ವಿಜ್ಞಾನದ ಓದು ಮತ್ತು ಅಧ್ಯಯನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿರುವುದು ಅಪಾಯದ ಸಂಗತಿ‌. ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಶಿಕ್ಷಣ ಸಮಾಜದ ಮತ್ತು ದೇಶದ ಪ್ರಗತಿಗೆ ಅತ್ಯಗತ್ಯ ಎಂದರು.

ವಿಜ್ಞಾನ ಓದಿದವರೂ ಮೂಢನಂಬಿಕೆ ಮತ್ತು ಕಂದಾಚಾರಕ್ಕೆ ಗಂಟು ಬೀಳುವುದು ಶಿಕ್ಷಣ ಕಲಿಕೆಯಲ್ಲಿನ ಕೊರತೆಯಾಗಿದೆ‌ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಎರಡು ಸಂವೇದನಾಶೀಲ ನಿರ್ಧಾರಕ್ಕೆ ಅಭಿನಂದನೆಗಳು

ಬಹಳ ಹಿಂದೆಯೇ ಬಸವಾದಿ ಶರಣರು ಮೌಢ್ಯ, ಕಂದಾಚಾರಗಳ ವಿರುದ್ಧ ಕರೆ ನೀಡಿದರು. ಆದರೆ, ಇವತ್ತಿಗೂ ಮೌಡ್ಯ ಹೋಗಿಲ್ಲ. ಏಕೆಂದರೆ ನಮ್ಮದು ಜಾತಿ ತಾರತಮ್ಯದ ಸಮಾಜ ಆಗಿರುವುದರಿಂದ ಇದಕ್ಕೆ ಚಲನೆ ಇಲ್ಲ. ಪಟ್ಟಭದ್ರರು ತಾರತಮ್ಯವನ್ನು ಗಟ್ಟಿಗೊಳಿಸುವ ಸಲುವಾಗಿಯೇ ಮೌಡ್ಯವನ್ನು ಬಿತ್ತುತ್ತಾರೆ ಎಂದರು.

ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ “ಮೌಢ್ಯ ನಿಷೇಧ ಕಾಯ್ದೆ” ಜಾರಿಗೆ ತರಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಅಷ್ಟರಮಟ್ಟಿಗೆ ಮೌಢ್ಯ ಮತ್ತು ಮೌಢ್ಯ ಹಂಚುವ ಪಟ್ಟಭದ್ರರು ಆಳವಾಗಿ ಬೇರು ಬಿಟ್ಟಿದ್ದಾರೆ ಎಂದರು.

ವಿಜ್ಞಾನ ಓದಿದವರಿಗೆಲ್ಲಾ ವೈಜ್ಞಾನಿಕ‌ ಮನೋಭಾವ ಇಲ್ಲದಿರುವುದು ದುರಂತ. ವಿಜ್ಞಾನ ಓದಿಯೂ ಹಣೆಬರಹ ಮತ್ತು ಕರ್ಮ ಸಿದ್ದಾಂತ, ಗ್ರಹಚಾರಗಳನ್ನೆಲ್ಲಾ ನಂಬುತ್ತಾರೆ ಎಂದರೆ ಇವರು ವಿಜ್ಞಾನ ಓದಿದ್ದೇ ದಂಡ ತಾನೇ ಎಂದು ಪ್ರಶ್ನಿಸಿದರು.

ದೇಶದ ಪ್ರಧಾನಿ ಆಗಿದ್ದ ಜವಾಹರಲಾಲ್ ನೆಹರೂ ಅವರು ದೇಶದ ಯುವ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲಿ ಎನ್ನುವ ದೂರದೃಷ್ಟಿ ಹೊಂದಿದ್ದರು. ಇದಕ್ಕೆ ಅಗತ್ಯವಾದ ಶೈಕ್ಷಣಿಕ ಸಾಧನೆಗಳಿಗೆ ಕಾರಣರಾಗಿದ್ದರು ಎಂದು ವಿವರಿಸಿದರು.

52 ಕೋಟಿ ಅಂದಾಜಿನಲ್ಲಿ 7 ಅಂತಸ್ತಿನ ನೂತನ ಕಟ್ಟಡ ಉದ್ಘಾಟಿಸಲಾಗಿದೆ. ಎಂಟನೇ ಅಂತಸ್ತನ್ನು ನಿರ್ಮಿಸಲು 8 ಕೋಟಿ ರೂಪಾಯಿಗೆ ಬೇಡಿಕೆ ಸಲ್ಲಿಸಿದ್ದಾರೆ. ಸರ್ಕಾರ ಕೊಡಲು ಸಿದ್ದವಿದೆ ಎಂದು ಘೋಷಿಸಿದರು.

ಉನ್ನತ ಶಿಕ್ಷಣ ಸಚಿವರಾದ ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...