ಎಲ್ಲೆಂದರಲ್ಲಿ ಕಸ ಎಸೆದರೆ ಅದು ಮರಳಿ ನಿಮ್ಮ ಮನೆಗೆ ಬರಲಿದೆ: ಡಿ ಕೆ ಶಿವಕುಮಾರ್‌ ಎಚ್ಚರಿಕೆ

Date:

ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

- Advertisement -

ವಿಧಾನಸೌಧದ ಬಳಿಯ ಭುವನೇಶ್ವರಿ ಪ್ರತಿಮೆ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿ, “ನಗರದಾದ್ಯಂತ ಎಲ್ಲೆಂದರಲ್ಲಿ ಕಸದ ರಾಶಿ ಇರುವ ಸಮಸ್ಯೆ ಕುರಿತು ಟೀಕೆ ವ್ಯಕ್ತವಾಗುತ್ತಿದೆ. ಈಗಾಗಲೇ‌‌ ಸಾಕಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಗುರುತಿಸಿ ಅವರ ಮನೆ ಮುಂದೆಯೇ ಅದೇ ಕಸ ಸುರಿದು ಬುದ್ದಿವಾದ ಹೇಳುವ ಕೆಲಸ ಮಾಡಲಾಗುತ್ತಿದೆ. ಕಸ ಎಸೆಯುವವರಿಗೆ ದಂಡ ವಿಧಿಸುವ ಕೆಲಸವೂ ನಡೆಯುತ್ತಿದೆ. ಈಗಾಗಲೇ ಲಕ್ಷಾಂತರ ರೂಪಾಯಿ ದಂಡ ಸಂಗ್ರಹಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಮುಂಬೈನಲ್ಲೂ ಮೂಲೆ,‌ ಮೂಲೆಯಲ್ಲಿ ಕಸದ ರಾಶಿ

“ಶುಕ್ರವಾರದಂದು ಮುಂಬೈಗೆ ತೆರಳಿದ್ದೆ. ಅಲ್ಲಿಯೂ ಸಹ ಮೂಲೆ,‌ ಮೂಲೆಯಲ್ಲಿ ಕಸ ರಾಶಿ ಬಿದ್ದಿತ್ತು. ಬೇರೆ, ಬೇರೆ ಕಡೆಯಲ್ಲಿಯೂ ಬಿದ್ದಿರಬಹುದು. ಜನರು ತಮಗೆ ಇರುವ ಅವಕಾಶವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ನಿಲ್ಲಿಸಬೇಕು. ಜನರು ಸ್ವಚ್ಚ ಬೆಂಗಳೂರಿಗೆ ಹೆಚ್ಚು ಸಹಕಾರ ನೀಡಬೇಕು” ಎಂದು ಹೇಳಿದರು.

“ಮುಂಬೈ ನಗರದಲ್ಲಿ ಪ್ರಮುಖ ರಸ್ತೆಗಳ ಕಾಮಗಾರಿ ಹಾಗೂ ನಿರ್ವಹಣೆ ನಡೆಸಿದವರಿಗೆ ಆ ರಸ್ತೆ ಬದಿಗಳ ಕಸ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ನೀಡಲಾಗಿದೆ ಎನ್ನುವ ಮಾಹಿತಿಯಿದೆ. ಬೆಂಗಳೂರಿನಲ್ಲೂ ಈ ಮಾದರಿ ಜಾರಿ ಮಾಡುವ ಕುರಿತು ಚರ್ಚೆ ಮತ್ತು ಆಲೋಚನೆ ನಡೆಸಲಾಗುತ್ತಿದೆ” ಎಂದರು.

“ಡಬ್ಬಗಳನ್ನು ಇಟ್ಟುಕೊಂಡು ಮನೆಯ ಕಸವನ್ನು ಅದರಲ್ಲಿ ಸಂಗ್ರಹಿಸಿ. ಅವುಗಳನ್ನು ಕಡ್ಡಾಯವಾಗಿ ಕಸ ಸಂಗ್ರಹ ವಾಹನಗಳಿಗೆ ನೀಡಿ ಎಂದು ಮನವಿ ಮಾಡುತ್ತೇನೆ. ನಮ್ಮ ಅಧಿಕಾರಿಗಳು ಶುಕ್ರವಾರ ತಡರಾತ್ರಿವರೆಗೂ ನನಗೆ ಕಸ ವಿಲೇವಾರಿ ಸೇರಿದಂತೆ ಇದರ ಬಗ್ಗೆ ಮಾಹಿತಿ ನೀಡುತ್ತಿದ್ದರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಡಿಕೆಶಿ – ತೇಜಸ್ವಿ ಸೂರ್ಯ ಕಚ್ಚಾಟದಲ್ಲಿ ಬೆಂಗಳೂರಿಗಿಲ್ಲ ಲಾಭ!

ಕಸ ಸಂಗ್ರಹಣೆಗೆ ಸರಿಯಾದ ವ್ಯವಸ್ಥೆಯಿಲ್ಲ ಎನ್ನುವ ನಾಗರಿಕರ ಆರೋಪದ ಬಗ್ಗೆ ಕೇಳಿದಾಗ, “ಇದೆಲ್ಲವೂ ಸುಳ್ಳು. ಪ್ರತಿದಿನವೂ ಮನೆಗಳಲ್ಲಿ ಕಸ ಸಂಗ್ರಹ ನಡೆಯುತ್ತಿದೆ. ಸಮಸ್ಯೆ ಎದುರಾಗಿದ್ದರೆ ಸೂಚಿತ ದೂರವಾಣಿ ಸಂಖ್ಯೆಗೆ ದೂರು ನೀಡಲಿ. ಇಡೀ ದೇಶದಲ್ಲಿಯೇ ಅತ್ಯುತ್ತಮ ವ್ಯವಸ್ಥೆ ರೂಪಿಸಿದ್ದೇವೆ. ಎಲ್ಲಾದರೂ ಕಸ, ರಸ್ತೆಗುಂಡಿ ಕಂಡರೆ ನಮಗೆ ಪೋಟೊ ಹಾಗೂ ಜಾಗ ಕಳಿಸಿ ಎನ್ನುವ ಅವಕಾಶ ನೀಡಿದ್ದೇವೆ. ಮಾಧ್ಯಮಗಳು ಪ್ರತಿದಿನ ಒಂದೊಂದು ರಸ್ತೆಗುಂಡಿ ಹಾಕುತ್ತಲೇ ಇರುತ್ತಾರೆ. ಎಷ್ಟೇ ಕೆಲಸ ಮಾಡಿದರೂ ರಸ್ತೆಗುಂಡಿ ಇದ್ದೇ ಇರುತ್ತದೆ. ವಾಹನಗಳು ಜರ್ಕ್ ಹೊಡೆದರೆ ರಸ್ತೆಗುಂಡಿ ಉಂಟಾಗುತ್ತದೆ. ಆದ ಕಾರಣಕ್ಕೆ ನಾವು ಈ ಸಮಸ್ಯೆ ನಿವಾರಣೆಗೆ ಏನೇನೊ ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

ಹತ್ತು ವರ್ಷ ಬಾಳಿಕೆ ಬರುವ ಡಾಂಬರ್ ರಸ್ತೆ ತಂತ್ರಜ್ಞಾನದ ಬಗ್ಗೆ ಆಲೋಚನೆ

“ಕನಿಷ್ಠ ಹತ್ತು ವರ್ಷ ಬಾಳಿಕೆ ಬರುವ ಡಾಂಬರ್ ರಸ್ತೆ ತಂತ್ರಜ್ಞಾನ ಬಳಸಿ ರಸ್ತೆ ನಿರ್ಮಾಣವು ಹೈದರಾಬಾದ್ ಸೇರಿದಂತೆ ಇತರೆಡೆ ಮಾಡಲಾಗುತ್ತಿದೆಯಂತೆ. ಇದರ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಕಾಮಗಾರಿ ನಡೆಸುವ ಯಂತ್ರಗಳು ಸಾಕಷ್ಟು ದುಬಾರಿಯಾದ‌ ಕಾರಣಕ್ಕೆ ಕನಿಷ್ಠ ಹತ್ತು ಕಿಲೋಮೀಟರ್ ಕಾಮಗಾರಿಗೆ ಅವಕಾಶ ನೀಡಬೇಕು ಎಂದು ಈ ತಂತ್ರಜ್ಞಾನ ಹೊಂದಿರುವವರು ತಿಳಿಸಿದ್ದಾರೆ. ಇದರ ಬಗ್ಗೆ ಚಿಂತನೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...