ಮಹಿಳಾ ಸ್ವೀಕಾರ ಕೇಂದ್ರದಲ್ಲಿ ಅಕ್ರಮ, ಹಲವರ ಗರ್ಭಪಾತ, ಕೊಲೆ: ಲೋಕಾಯುಕ್ತಕ್ಕೆ ದೂರು

Date:

ಮಹಿಳಾ ಸ್ವೀಕಾರ ಕೇಂದ್ರದಲ್ಲೇ ಹೆಣ್ಣು ಮಕ್ಕಳನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಬೆಂಗಳೂರು ನಗರದಲ್ಲಿರುವ ಮಹಿಳಾ ಸ್ವೀಕಾರ ಕೇಂದ್ರದ 1,776 ಅನಾಥ, ನಿರ್ಗತಿಕ ಮಹಿಳೆಯರು, ಹೆಣ್ಣು ಮಕ್ಕಳನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗಿದೆ. ಹಲವರನ್ನು ಸಾಯಿಸಿ ವಿದ್ಯುತ್ ಚಿತಾಗಾರದಲ್ಲಿ ಸುಟ್ಟು ಬೂದಿ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸರ್ವಶಕ್ತಿ ಸಮಿತಿಯು ಲೋಕಾಯುಕ್ತಕ್ಕೆ ದೂರು ನೀಡಿದೆ.

- Advertisement -

ಬೆಂಗಳೂರು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ವೀಕಾರ ಕೇಂದ್ರದಲ್ಲಿ 2000ರಿಂದ 2018ರ ಅವಧಿಯಲ್ಲಿ ಒಟ್ಟು 1,776 ಮಹಿಳೆಯರು/ಹೆಣ್ಣು ಮಕ್ಕಳನ್ನು ದಾಖಲಿಸಿಕೊಳ್ಳಲಾಗಿತ್ತು. ಆದರೆ, ಅಲ್ಲಿಗೆ ಒಳ ಹೋದವರು ಮತ್ತೆ ಹೊರಗೆ ಹೋಗಿರುವುದಕ್ಕೆ ಯಾವುದೇ ಅಧಿಕೃತ ದಾಖಲೆಗಳು ಲಭ್ಯವಿಲ್ಲ ಎಂದು ಲೋಕಾಯುಕ್ತಕ್ಕೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನೂ ಓದಿ: ‘ಮಾತೆ’ ಎನ್ನುತ್ತಾ ಡಿಜಿಟಲ್ ನಿಂದನೆ: ಸಿಜೆಪಿ ಮಹಿಳಾ ಪ್ರತಿಭಟನಾಕಾರರಿಗೆ ಬಿಜೆಪಿ ‘ಡಾಕ್ಸಿಂಗ್’ ದಾಳಿ

ಈ ಕುರಿತು ಮಾಹಿತಿ ಹಕ್ಕಿನಡಿ ವಿವರ ಕೋರಿದ ಅರ್ಜಿದಾರರಿಗೆ ಯಾವುದೇ ಸೂಕ್ತ ಹಿಂಬರಹ ನೀಡದೆ, “ಕಡತವನ್ನು ಮುಕ್ತಾಯಗೊಳಿಸಿದ್ದೇವೆ” ಎಂದು ಅಧಿಕಾರಿಗಳು ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ ಎಂದು ಸಮಿತಿ ದೂರಿದೆ.

ಇನ್ನು ಮಹಿಳಾ ಸ್ವೀಕಾರ ಕೇಂದ್ರದಲ್ಲಿದ್ದ ಹೆಣ್ಣು ಮಕ್ಕಳನ್ನು ಇಲಾಖೆಯ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ತಮ್ಮ ವೈಯಕ್ತಿಕ ದುರುಪಯೋಗ ಹಾಗೂ ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಅಷ್ಟು ಮಾತ್ರವಲ್ಲದೆ ಸಂತ್ರಸ್ತೆಯರ ವೈಯಕ್ತಿಕ ಕಡತಗಳು ಹಾಗೂ ಅವರ ಚಲನವಲನದ ಜವಾಬ್ದಾರಿ ಹೊಂದಿದ್ದ ಸಿಬ್ಬಂದಿಯೇ ಈ ದಾಖಲೆಗಳ ನಾಶ ಮಾಡಿದ್ದಾರೆ. ಅಲ್ಲದೆ, ಇಲಾಖೆಯ ಸಚಿವಾಲಯ ಹಾಗೂ ನಿರ್ದೇಶನಾಲಯದ ಉನ್ನತ ಅಧಿಕಾರಿಗಳು ಶಾಮೀಲಾಗಿ ಈ ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ ಎಂದು ದೂರಲಾಗಿದೆ.

ಈ ಹಗರಣ ಹಾಗೂ ಪ್ರಕರಣ ಮುಚ್ಚಿ ಹಾಕಿರುವ ಆರೋಪದಡಿ ಹಲವು ಉನ್ನತ ಅಧಿಕಾರಿಗಳ ಹೆಸರುಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇಲಾಖೆಯ ಮಾಜಿ ನಿರ್ದೇಶಕರಾದ ಅರುಂಧತಿ ಚಂದ್ರಶೇಖರ್, ಡಾ. ಮಹೇಶ್ ಬಾಬು, ಮಾಜಿ ಉಪ ನಿರ್ದೇಶಕಿ ಸುಮಂಗಲ ಮಾಲಾಪುರ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ಗೀತಾ ಲಕ್ಷ್ಮಿ, ರಾಜಣ್ಣ, ಕಲ್ಪನಾ, ರೇವತಿ, ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ರಶ್ಮಿ ಎಂ ಎಸ್, ವನಿತಾ, ಜಯಶ್ರೀ, ಮೋಹನ್ ಕುಮಾರ್, ಸರ್ವಮಂಗಳ ಹಾಗೂ ಪ್ರಸನ್ನ ಪಾರ್ವತಿ ಸೇರಿದಂತೆ ಇತರೆ ಸಿಬ್ಬಂದಿ ಹೆಸರು ಈ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಗಂಭೀರ ದೂರಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಇದರ ಅಧಿಕೃತ ವಿಚಾರಣೆಯನ್ನು 2026ರ ಸೆಪ್ಟೆಂಬರ್ 10ರಂದು ನಡೆಸಲು ದಿನಾಂಕ ನಿಗದಿಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...