ಅಕ್ರಮ ಚಿನ್ನ ಸಾಗಾಟ | ನಟಿ ರನ್ಯಾ ರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯಡಿ ಬಂಧನ ಆದೇಶ

Date:

Advertisements

ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ರನ್ಯಾ ರಾವ್ ವಿರುದ್ಧ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (ಕಾಫಿಪೋಸಾ ಕಾಯ್ದೆ-1974) ಅನ್ವಯ ಬಂಧನದ ಆದೇಶ ಹೊರಡಿಸಲಾಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ ಕಾಫಿಪೋಸಾ ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಕಾಯ್ದೆ ಅನ್ವಯ ಆರೋಪಿ ರನ್ಯಾ ರಾವ್‌ಗೆ ಒಂದು ವರ್ಷ ಜಾಮೀನು ಪಡೆಯಲು ಅವಕಾಶವಿರುವುದಿಲ್ಲ.

ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯ (ಕಾಫಿಫೋಸಾ) 3(1) ಸೆಕ್ಷನ್ ಅಡಿಯಲ್ಲಿ ರನ್ಯಾ ವಿರುದ್ಧ ಸಿಇಐಬಿ ಜಂಟಿ ಕಾರ್ಯದರ್ಶಿ ಅನುಪಮ್ ಪ್ರಕಾಶ್ ಏಪ್ರಿಲ್ 22ರಂದು ಬಂಧನ ಆದೇಶ ಹೊರಡಿಸಿದ್ದಾರೆ.

Advertisements

ಆರೋಪಿಗಳು ಜಾಮೀನಿನ ಮೇಲೆ ಹೊರಬಂದ ನಂತರ ಕಳ್ಳಸಾಗಾಣಿಕೆಯಲ್ಲಿ ತೊಡಗುವುದನ್ನು ತಡೆಯುವ ಸಲುವಾಗಿ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಆರೋಪಿಯು ತನಿಖಾ ಸಂಸ್ಥೆಗಳೊಂದಿಗೆ ಸಹಕರಿಸದಿರುವುದು ಕಂಡುಬಂದರೆ ಈ ಕಾಯ್ದೆಯನ್ನು ಸಹ ಅನ್ವಯಿಸಲಾಗುತ್ತದೆ.

ಪ್ರಕರಣದಲ್ಲಿ ರನ್ಯಾ ರಾವ್ ಮತ್ತು ಇತರರು ಜಾಮೀನು ಪಡೆಯಲು ಪದೇ ಪದೇ ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರೀಯ ಸಂಸ್ಥೆಗಳು ಈ ಕ್ರಮಕ್ಕೆ ಮುಂದಾಗಿವೆ ಎನ್ನಲಾಗಿದೆ. ಇತರ ಆರೋಪಿಗಳಾದ ತರುಣ್ ರಾಜು ಮತ್ತು ಸಾಹಿಲ್ ಸಕರಿಯಾ ಜೈನ್ ವಿರುದ್ಧವೂ ಕೋಫೆಪೋಸಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

12.56 ಕೋಟಿ ರೂ. ಮೌಲ್ಯದ 14.2 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲ ಮಗಳು ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿತ್ತು.

ರನ್ಯಾ ರಾವ್ ಮತ್ತು ಪ್ರಕರಣದ ಇತರ ಇಬ್ಬರು ಆರೋಪಿಗಳು ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ಈ ಪ್ರಕರಣವನ್ನು ಡಿಆರ್‌ಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X