ಹವಾಮಾನ ಇಲಾಖೆ ಅಲರ್ಟ್ | ಆ.19ರಿಂದ ಕೆಲ ದಿನ ಭಾರಿ ಗಾಳಿ ಮಳೆ, ಬೆಂಗಳೂರಲ್ಲಿ ಹೇಗಿರಲಿದೆ ವಾತಾವರಣ?

Date:

ಆಗಸ್ಟ್ 19ರಿಂದ ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

- Advertisement -

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಆಗಸ್ಟ್ 19ರಂದು ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ. ಹಾಗೆಯೇ ದಕ್ಷಿಣ ಒಳನಾಡಿನ ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ಆಗಸ್ಟ್ 19ರಂದು ಭಾರಿ ಮಳೆ ಬೀಳುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನೂ ಓದಿ: ಹವಾಮಾನ | ಬಂಗಾಳ‌, ಒಡಿಶಾದಲ್ಲಿ ರೆಡ್ ಅಲರ್ಟ್: ದೆಹಲಿ-ಎನ್‌ಸಿಆರ್ ಸೇರಿ 18 ರಾಜ್ಯಗಳಿಗೆ ಭಾರೀ ಮಳೆಯ ಎಚ್ಚರಿಕೆ

ಇನ್ನು ಉತ್ತರ ಒಳನಾಡಿನಲ್ಲಿಯೂ ಆಗಸ್ಟ್ 19 ಮತ್ತು 20ರಂದು ಗುಡುಗು, ಮಿಂಚು ಹಾಗೂ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ.

imd 3

ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಆಗಸ್ಟ್ 18ರಿಂದ 20ರವರೆಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ (ಕೆಲವೊಮ್ಮೆ ಗಂಟೆಗೆ 50 ಕಿ.ಮೀ ವರೆಗೆ) ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ವಾತಾವರಣ ಹೇಗಿರಲಿದೆ?

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಮೇಲ್ಮೈ ಗಾಳಿ ಬೀಸಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.

ಇನ್ನು ಹವಾಮಾನ ಇಲಾಖೆಯು ನೀಡಿರುವ ಮುಂದಿನ 7 ದಿನಗಳ ಮುನ್ಸೂಚನೆ ಪ್ರಕಾರ ಆಗಸ್ಟ್ 21ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ. ಸಾಧಾರಣ ವಾತಾವರಣ ಮುಂದುವರಿಯಲಿದೆ. ಆದರೆ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...