ರಾಜ್ಯದ 18 ಜಿಲ್ಲೆಗಳಲ್ಲಿ ಏ.6ರವರೆಗೆ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಏಪ್ರಿಲ್ 6ರವರೆಗೆ ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಇಂದು ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? ರಾಜ್ಯದ 11 ಜಿಲ್ಲೆಗಳಲ್ಲಿ ಸಂಕ್ರಾಂತಿಗೆ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಇನ್ನು ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಇಂದು, ನಾಳೆ ಮತ್ತು ದಕ್ಷಿಣ ಒಳನಾಡು, ಮಲೆನಾಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 6ರವರೆಗೆ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

rain alert

ಇಂದು ನಾಳೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಏಪ್ರಿಲ್ 5ರಿಂದ ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಇನ್ನು ಏ.6ರವರೆಗೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಳೆಯಾಗಲಿದೆ. ಉಳಿದೆಡೆ ಒಣ ಹವೆ ಇರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...