ಅಲೆಮಾರಿ, ಆದಿವಾಸಿಗಳ ಅಭಿವೃದ್ಧಿಗೆ ವೇಗ: 15 ದಿನಗಳಲ್ಲಿ ಸರ್ಕಾರಕ್ಕೆ ಸಮಗ್ರ ವರದಿ

Date:

ರಾಜ್ಯದ ಅಲೆಮಾರಿ ಮತ್ತು ಆದಿವಾಸಿ ಸಮುದಾಯಗಳ ಅಭಿವೃದ್ಧಿಗಾಗಿ ಮುಂದಿನ 15 ದಿನಗಳೊಳಗೆ ಸರ್ಕಾರಕ್ಕೆ ಸಮಗ್ರ ವರದಿಯೊಂದನ್ನು ಸಲ್ಲಿಸಲಾಗುವುದು ಎಂದು ರಾಜ್ಯ ಅನುಸೂಚಿತ ಜಾತಿ ಮತ್ತು ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಎಲ್. ಮೂರ್ತಿ ತಿಳಿಸಿದ್ದಾರೆ.

- Advertisement -

ಶುಕ್ರವಾರ ಬೆಂಗಳೂರಿನಲ್ಲಿ ಈ ಶೋಷಿತ ಸಮುದಾಯಗಳ ಅಹವಾಲು ಆಲಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ರಾಜ್ಯದ 18 ಜಿಲ್ಲೆಗಳಲ್ಲಿ ತಾವು ಪ್ರವಾಸ ಕೈಗೊಂಡಾಗ, ಈ ಸಮುದಾಯಗಳು ಪ್ರಮುಖವಾಗಿ ವಸತಿ, ಭೂಮಿ, ಶಿಕ್ಷಣ, ಆರ್ಥಿಕ ನೆರವು ಹಾಗೂ ಜಾತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಒಂದೇ ರೀತಿಯ ಸಂಕಷ್ಟಗಳನ್ನು ಎದುರಿಸುತ್ತಿರುವುದು ಕಂಡುಬಂದಿದೆ ಎಂದು ಅವರು ವಿವರಿಸಿದರು.

ಈ ಹಿನ್ನೆಲೆಯಲ್ಲಿ, ವರದಿ ಸಲ್ಲಿಸುವ ಮುನ್ನ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್. ದ್ವಾರಕಾನಾಥ್ ಅವರೊಂದಿಗೂ ಚರ್ಚಿಸಲಾಗುವುದು. ಜೊತೆಗೆ, ಅರಣ್ಯ ಮತ್ತು ಕಂದಾಯ ಇಲಾಖೆಗಳಿಂದ ಬುಡಕಟ್ಟು ಜನರನ್ನು ಕಾರಣವಿಲ್ಲದೆ ಒಕ್ಕಲೆಬ್ಬಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಒಂದು ವೇಳೆ ಅನಿವಾರ್ಯವಾಗಿ ಒಕ್ಕಲೆಬ್ಬಿಸಿದರೆ ಮೊದಲು ಅವರಿಗೆ ಪರ್ಯಾಯ ವಸತಿ ಮತ್ತು ಆರ್ಥಿಕ ಸೌಲಭ್ಯ ಕಲ್ಪಿಸುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದ್ದಾರೆ.

ಸಭೆಯಲ್ಲಿ ಪಾಲ್ಗೊಂಡಿದ್ದ ಸಿ.ಎಸ್. ದ್ವಾರಕಾನಾಥ್ ಅವರು, ಈ ಸಮುದಾಯಗಳ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯದ ನಾಲ್ಕೂ ಕಂದಾಯ ವಿಭಾಗಗಳಲ್ಲಿ ಅಹವಾಲು ಸ್ವೀಕಾರ ಸಭೆಗಳನ್ನು ನಡೆಸುವಂತೆ ಸಲಹೆ ನೀಡಿದರು.

ಇದೇ ವೇಳೆ, ಅಲೆಮಾರಿ ಬುಡಕಟ್ಟು ಮಹಾಸಭಾದ ಅಧ್ಯಕ್ಷ ಬಿ.ಎಲ್. ಹನುಮಂತಪ್ಪ ಅವರು ಜಾತಿ ದೃಢೀಕರಣದ ಸಮಸ್ಯೆಗಳು ಮತ್ತು ಪಟ್ಟಿಯಲ್ಲಿ ಸೇರದ 49 ಅಲೆಮಾರಿ ಅಸ್ಪೃಶ್ಯ ಸಮುದಾಯಗಳ ಕಷ್ಟಗಳನ್ನು ಬಗೆಹರಿಸಲು ಮನವಿ ಮಾಡಿದರು.

ಚನ್ನದಾಸ ಸಮಾಜದ ಅಧ್ಯಕ್ಷ ರಾಜೇಂದ್ರ ದಾಸ್ ಅವರು, ಬಜೆಟ್‌ನಲ್ಲಿ ಘೋಷಿಸಿದಂತೆ ‘ಅಲೆಮಾರಿ ವಿಮುಕ್ತ ಬುಡಕಟ್ಟುಗಳ ಆಯೋಗ’ ಕೂಡಲೇ ರಚನೆಯಾಗಬೇಕು ಮತ್ತು ಪೊಲೀಸ್ ಹಾಗೂ ಅರಣ್ಯ ಅಧಿಕಾರಿಗಳಿಂದ ಆಗುತ್ತಿರುವ ಕಿರುಕುಳ, ಮಹಿಳೆಯರ ಮೇಲಿನ ದೌರ್ಜನ್ಯ, ಸುಳ್ಳು ಪ್ರಕರಣಗಳನ್ನು ತಕ್ಷಣವೇ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಮುದಾಯದೊಳಗಿನ ಆಂತರಿಕ ಸಮಸ್ಯೆಗಳ ಬಗ್ಗೆ ಗಮನಸೆಳೆದ ಬೇಡಗಂಪಣ ಸಮುದಾಯದ ಅಧ್ಯಕ್ಷ ಮಹದೇಶ್, ದೈವದ ಹೆಸರಿನಲ್ಲಿ ನಡೆಯುವ ಕಟ್ಟೆ ಪಂಚಾಯಿತಿ, ಸಾಮಾಜಿಕ ಬಹಿಷ್ಕಾರಗಳಿಂದ ಅಮಾಯಕರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು ಎಂದರು.

ವನ್ಯಜೀವಿ ಮಂಡಳಿ ಸದಸ್ಯ ಚಿಕ್ಕಣ್ಣ ಅವರು, ಮೊರಾರ್ಜಿ ದೇಸಾಯಿ ಶಾಲೆಗಳ ಮಾದರಿಯಲ್ಲಿ ಈ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ (ಆರ್‌ಟಿಇ ಅಡಿ) ಶೇ.10 ರಷ್ಟು ಸೀಟುಗಳನ್ನು ಮೀಸಲಿಡಬೇಕು ಮತ್ತು ರಾಜ್ಯದ ಎಲ್ಲಾ ಜಿಲ್ಲಾ ಮಟ್ಟದ ದೌರ್ಜನ್ಯ ತಡೆ ಸಮಿತಿಗಳಲ್ಲಿ ಈ ಸಮುದಾಯದ ಇಬ್ಬರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಿದರು.

ಅಲೆಮಾರಿ ಮತ್ತು ಆದಿವಾಸಿ ಬುಡಕಟ್ಟು ಸಮುದಾಯಗಳ ಸಮಗ್ರ ಅಭಿವೃದ್ಧಿ ಹಾಗೂ ಹಿತರಕ್ಷಣೆಗಾಗಿ ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಗಿದ್ದು, ಮುಖ್ಯವಾಗಿ ಆರ್‌ಟಿಇ (RTE) ಕೋಟಾದಡಿಯಲ್ಲಿ ಈ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 10ರಷ್ಟು ಮೀಸಲಾತಿ ಹಾಗೂ ಪರಿಶಿಷ್ಟ ಜಾತಿಯ ಅಸ್ಪೃಶ್ಯ 49 ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಒಳಮೀಸಲಾತಿ ನೀಡಬೇಕು ಎಂದು ಆಗ್ರಹಿಸಲಾಗಿದೆ. ಇದರ ಜೊತೆಗೆ, ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ‘ಅಲೆಮಾರಿ ವಿಮುಕ್ತ ಬುಡಕಟ್ಟುಗಳ ಆಯೋಗ’ ರಚನೆಗೆ ತಕ್ಷಣವೇ ಒತ್ತು ನೀಡಬೇಕು ಮತ್ತು ಎಸ್‌ಐಆರ್ (SIR) ಅಡಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಅಲೆಮಾರಿ, ಆದಿವಾಸಿ ಬುಡಕಟ್ಟು ಸಮುದಾಯಗಳ ಮ್ಯಾಪಿಂಗ್ ಪ್ರಕ್ರಿಯೆ ನಡೆಸಲು ವಿಶೇಷ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಲಾಗಿದೆ.

ಅಲ್ಲದೆ, ದೈವದ ಹೆಸರಿನಲ್ಲಿ ನಡೆಯುವ ಕುಲಪಂಚಾಯಿತಿ, ದಂಡ, ದಢೂತಿ, ಕತುಬ ಹಾಗೂ ಅಂತರ್ಜಾತಿ ವಿವಾಹವಾದವರಿಗೆ ಸಾಮಾಜಿಕ ಬಹಿಷ್ಕಾರ ಹಾಕುವ ಅನಿಷ್ಟ ಪದ್ಧತಿಗಳನ್ನು ತಡೆಯುವುದು ಮಾತ್ರವಲ್ಲದೆ, ಈ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ರಾಜ್ಯದ ಎಲ್ಲಾ ಜಿಲ್ಲಾ ಎಸ್‌ಸಿ/ಎಸ್‌ಟಿ ಸಮಿತಿಗಳಲ್ಲಿ ಅಲೆಮಾರಿ ಮತ್ತು ಆದಿವಾಸಿ ಸಮುದಾಯದ ಇಬ್ಬರು ಪ್ರತಿನಿಧಿಗಳಿಗೆ ಕಡ್ಡಾಯವಾಗಿ ಅವಕಾಶ ಕಲ್ಪಿಸಬೇಕು ಎಂಬ ಮಹತ್ವದ ಅಂಶಗಳನ್ನು ಸಭೆಯಲ್ಲಿ ಒತ್ತಿಹೇಳಲಾಗಿದೆ.

ಹೊಳೆನರಸೀಪುರ ತಾಲೂಕಿನಲ್ಲಿ ವಸತಿ, ನೀರು ಮತ್ತು ಹಕ್ಕುಪತ್ರಗಳಿಲ್ಲದೆ ಅಲೆಮಾರಿಗಳು ಕಚೇರಿಯಿಂದ ಕಚೇರಿಗೆ ಅಲೆಯುತ್ತಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಮಹಾಸಭಾ ಸಂಚಾಲಕ ಬಲರಾಮ ಅವರು ಸಭೆಯ ಗಮನಕ್ಕೆ ತಂದರು. ಸಭೆಯಲ್ಲಿ ಬುಡಕಟ್ಟು ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ. ನಾಗರಾಜ್, ಹಕ್ಕಿಪಿಕ್ಕಿ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಜಗ್ಗು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ...

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಬಂಧನ

ದೆಹಲಿಯ ಜಂತರ್ ಮಂತರ್ ರಸ್ತೆಯಲ್ಲಿರುವ ಕೇರಳ ಭವನದ ಸಮೀಪ ಕೇರಳದ ಮಾಜಿ...