ಶಾಲೆಗಳಲ್ಲಿ ಕಲಿಕಾ ಫಲಿತಾಂಶ ಸುಧಾರಣೆಗೆ ‘ಶಿಕ್ಷ ಕೋಪೈಲಟ್’ ಯೋಜನೆ ಜಾರಿ: ಸಚಿವ ಮಧು ಬಂಗಾರಪ್ಪ

Date:

Advertisements

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ‘ಶಿಕ್ಷ ಕೋಪೈಲಟ್’ ಯೋಜನೆ ಜಾರಿಗೆ ತರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶುಕ್ರವಾರ ‘ಶಿಕ್ಷ ಕೋಪೈಲಟ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಸ್ಥಳೀಯ ಪಠ್ಯಕ್ರಮ, ಭಾಷೆ ಹಾಗೂ ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ” ಎಂದರು.

“ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲ ಶೈಕ್ಷಣಿಕ ಜಿಲ್ಲೆಗಳಲ್ಲಿ 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1,000 ಶಿಕ್ಷಕರಿಗೆ ಶಿಕ್ಷ ಕೋಪೈಲಟ್ -AI ಚಾಲಿತ ಡಿಜಿಟಲ್ ಸಹಾಯವನ್ನು ನೀಡಲಾಗುವುದು. ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವೈಯಕ್ತೀಕರಿಸಿದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ” ಎಂದು ಹೇಳಿದರು.

Advertisements

“ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವಿಡಿಯೊಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ. ಇದು ಸ್ವಯಂ ಕಲಿಕೆ ಮತ್ತು ಸಂವಾದ ವಿಷಯ ರಚನೆಗಾಗಿ ಶಿಕ್ಷಕರಿಗೆ ಚಾಟ್-ಬಾಟ್ ಸಹ ಒದಗಿಸುತ್ತದೆ” ಎಂದು ಸಚಿವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ. ಕೆ.ವಿ.ತ್ರಿಲೋಕಾಚಂದ್ರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X